ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ 
ರಾಜ್ಯ

ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ: ಪ್ರಾಂಶುಪಾಲ ಮತ್ತು ಪತ್ನಿ ಬಂಧನ

ಪೋಕ್ಸೋ ಪ್ರಕರಣದಲ್ಲಿ ದೇವನಹಳ್ಳಿ ಪೊಲೀಸರು ಪ್ರಾಂಶುಪಾಲ, ಅವರ ಪತ್ನಿ ಮತ್ತು ಶಿಕ್ಷಕನ ಬಂಧಿಸಿದ್ದಾರೆ .

ಬೆಂಗಳೂರು: ಖಾಸಗಿ ವಸತಿ ಶಾಲೆಯಲ್ಲಿ ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇರೆಗೆ ಶಾಲೆಯ ಪ್ರಾಂಶುಪಾಲ ಮತ್ತು ಆತನ ಪತ್ನಿಯನ್ನು ಬಂಧಿಸಲಾಗಿದೆ.

ಪೋಕ್ಸೋ ಪ್ರಕರಣದಲ್ಲಿ ದೇವನಹಳ್ಳಿ ಪೊಲೀಸರು ಪ್ರಾಂಶುಪಾಲ, ಅವರ ಪತ್ನಿ ಮತ್ತು ಶಿಕ್ಷಕನ ವಿರುದ್ಧ ಪ್ರಕರಣದಲ್ಲಿ ಬಂಧಿಸಿದ್ದಾರೆ. ಆರೋಪಿ ಪ್ರಾಂಶುಪಾಲ ಅಪ್ರಾಪ್ತ ಸಹೋದರಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿದ್ದಾರೆ.

ಖಾಸಗಿ ವಸತಿ ಶಾಲೆಯಲ್ಲಿ ಓದುತ್ತಿದ್ದ ಅಕ್ಕ–ತಂಗಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಅಡಿ ಶಾಲೆಯ ಪ್ರಾಂಶುಪಾಲರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ಪ್ರಾಂಶುಪಾಲ ಧನಂಜಯ್ ಹಾಗೂ ಪತ್ನಿ ಶೈಲಜಾ ಬಂಧಿತರು. ಇಬ್ಬರ ವಿರುದ್ಧ ಪೋಕ್ಸೊ ಕಾಯ್ದೆ ಅಡಿ ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೇವನಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಆರೋಪಿಗಳ ವೈದ್ಯಕೀಯ ತಪಾಸಣೆ ನಡೆಸಲಾಗಿದ್ದು, ಘಟನೆ ಬೆಳಕಿಗೆ ಬಂದ ನಂತರ ಶಾಲೆಗೆ ತಾತ್ಕಾಲಿಕ ರಜೆ ಘೋಷಿಸಲಾಗಿದೆ.

ಆಗಿದ್ದೇನು?

ಸಂತ್ರಸ್ಥಅಕ್ಕ,ತಂಗಿ ಇಬ್ಬರೂ ವಸತಿಶಾಲೆ ಯಲ್ಲಿ ಓದುತ್ತಿದ್ದರು. ಧನಂಜಯ್ ಈಚೆಗೆ ಅಕ್ಕನನ್ನು ಶಾಲೆಯ ಕೊಠಡಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಗರ್ಭಧಾರಣೆ ತಪ್ಪಿಸಲು ಆಹಾರದಲ್ಲಿ ಔಷಧಿ ನೀಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ತಂಗಿ ಮೇಲೂ ದೌರ್ಜನ್ಯ

ಆರೋಪಿ ಅಷ್ಟಕ್ಕೇ ಸುಮ್ಮನಾಗದೇ ಇದನ್ನು ಪ್ರಶ್ನಿಸಿದ ಬಳಿಕ ಆಕೆಯ ತಂಗಿಯ ಮೇಲೂ ದೌರ್ಜನ್ಯಕ್ಕೆ ಯತ್ನಿಸಿದ್ದಾನೆ. ಆದರೆ, ಆಕೆ ಶೌಚಾಲಯದಲ್ಲಿ ಅಡಗಿ ತಪ್ಪಿಸಿಕೊಂಡಿರುವುದಾಗಿ ಹೇಳಿಕೊಂಡಿದ್ದಾಳೆ.

ಬೆದರಿಕೆ, ಹಸಿ ಪರಂಗಿ

ವಿಷಯವನ್ನು ಯಾರಿಗೂ ತಿಳಿಸದಂತೆ ವಿದ್ಯಾರ್ಥಿನಿಯರಿಗೆ ಬೆದರಿಸಿದ್ದರು. ಅಲ್ಲದೆ ಸಂತ್ರಸ್ತರಿಗೆ ಹಸಿ ಪರಂಗಿ ಹಣ್ಣು ತಿನ್ನಿಸಿ ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ್ದಾರೆ. ಹೆಚ್ಚಿನ ಅಂಕ, ಉಚಿತ ಶಿಕ್ಷಣದ ಆಮಿಷ ಒಡ್ಡಿದ್ದರು. ವಿಷಯ ಬಹಿರಂಗ ಪಡಿಸಿದರೆ ಪರೀಕ್ಷೆಯಲ್ಲಿ ಅನುತ್ತೀರ್ಣಗೊಳಿಸುವುದಾಗಿ ಬೆದರಿಕೆ ಹಾಕಲಾಗಿತ್ತು ಎಂದು ಪೋಷಕರು ಆರೋಪಿಸಿದ್ದಾರೆ. ದಂಪತಿಗಳು ತಮ್ಮ ಪೋಷಕರಿಗೆ ತಿಳಿಸಬಹುದೆಂಬ ಭಯದಿಂದ ಸಂತ್ರಸ್ತರ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಎಂಬ ಆರೋಪವೂ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ CJP ಸಜ್ಜು; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ