ಸುಷ್ಮಾ - ಪುನೀತ್ ಕುಮಾರ್ 
ರಾಜ್ಯ

ಬೆಂಗಳೂರು: ಅಡುಗೆ ವಿಷಯಕ್ಕೆ ಅತ್ತೆ ಜೊತೆ ಜಗಳ; 35 ವರ್ಷದ ಎಂಜಿನಿಯರ್ ಆತ್ಮಹತ್ಯೆ!

ಮೃತರನ್ನು 35 ವರ್ಷದ ಸುಷ್ಮಾ ಎಂದು ಗುರುತಿಸಲಾಗಿದ್ದು, ಅವರು ಈ ಹಿಂದೆ ಡೆಲ್ ಎಂಬ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.

ಬೆಂಗಳೂರು: ಕೌಟುಂಬಿಕ ಕಲಹದಿಂದ ಬೇಸತ್ತ 35 ವರ್ಷದ ಎಂಜಿನಿಯರ್ ಒಬ್ಬರು ಮಂಗಳವಾರ ಬೆಂಗಳೂರಿನ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರನ್ನು 35 ವರ್ಷದ ಸುಷ್ಮಾ ಎಂದು ಗುರುತಿಸಲಾಗಿದ್ದು, ಅವರು ಈ ಹಿಂದೆ ಡೆಲ್ ಎಂಬ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.

ಪೊಲೀಸರ ಪ್ರಕಾರ, ಸುಷ್ಮಾ ಅವರು ಐದು ವರ್ಷಗಳ ಹಿಂದೆ ಪುನೀತ್ ಕುಮಾರ್ ಎಂಬುವವರನ್ನು ವಿವಾಹವಾಗಿದ್ದರು ಮತ್ತು ದಂಪತಿಗೆ ನಾಲ್ಕು ವರ್ಷದ ಮಗನಿದ್ದಾನೆ.

ಸಣ್ಣಪುಟ್ಟ ವಿಷಯಗಳಿಗೆ ಮನೆಯಲ್ಲಿ ಆಗಾಗ್ಗೆ ಜಗಳಗಳು ನಡೆಯುತ್ತಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.

ನಿನ್ನೆ ಸುಷ್ಮಾ ಮತ್ತು ಅವರ ಅತ್ತೆ ಕಲ್ಪನಾ ನಡುವೆ ಅಡುಗೆ ಮಾಡುವ ವಿಚಾರವಾಗಿ ಜಗಳ ನಡೆದಿತ್ತು ಎನ್ನಲಾಗಿದೆ.

ಕಲ್ಪನಾ ಅವರು ಸುಷ್ಮಾ ಅವರಿಗೆ ಅಡುಗೆ ಮಾಡಲು ಬಿಡುತ್ತಿರಲಿಲ್ಲ ಮತ್ತು ವಿವಿಧ ವಿಷಯಗಳ ಕುರಿತು ಅವರಿಗೆ ಕಿರುಕುಳ ನೀಡುತ್ತಿದ್ದರು ಎಂದು ಸುಷ್ಮಾ ಅವರ ಕುಟುಂಬ ಆರೋಪಿಸಿದೆ.

ಇದರಿಂದ ಮನನೊಂದ ಸುಷ್ಮಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ವರದಕ್ಷಿಣೆ ಕಿರುಕುಳದ ಆರೋಪ ಹೊರಿಸಿ ಸುಷ್ಮಾ ಅವರ ಕುಟುಂಬದವರು ನೀಡಿದ ದೂರಿನ ಮೇರೆಗೆ, ಪೊಲೀಸರು ಆಕೆಯ ಪತಿಯನ್ನು ಬಂಧಿಸಿದ್ದು, ಅತ್ತೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NEET paper leak: ಯುವಕರ ಭವಿಷ್ಯದ ಜೊತೆ ಆಟ, ತಕ್ಷಣ ಧರ್ಮೇಂದ್ರ ಪ್ರಧಾನ್ ವಜಾಗೊಳಿಸಿ: ರಾಹುಲ್ ಗಾಂಧಿ ಆಗ್ರಹ

ನಟ Jayam Ravi ವಿಚ್ಛೇದನ: ನಿರಾಕರಿಸಿದ್ದು ಯಾರು?, ಮದುವೆಯಾಗಿದ್ದು ಯಾರು? ಎಂಬುದನ್ನು ಸಾಬೀತು ಪಡಿಸುತ್ತೇನೆ: ಆರ್ತಿ ತಾಯಿ ಸುಜಾತ

IPL 2026: 2 ಓವರ್ ನಲ್ಲಿ ಪಂದ್ಯ ಕಳೆದುಕೊಂಡ GT, KKRಗೆ 29 ರನ್ ಗಳ ಭರ್ಜರಿ ಜಯ

IPL 2026: ಗಾಯದ ನಡುವೆಯೂ ಭರ್ಜರಿ ಬ್ಯಾಟಿಂಗ್, Sai Sudharsan ದಾಖಲೆ

'ಪ್ಲೀಸ್ ನಾಳೆ ಒಂದಿನ ಗೆಲ್ರಪ್ಪಾ': ಎದುರಾಳಿ RCB ಬೆನ್ನು ಬಿದ್ದ CSK ಫ್ಯಾನ್ಸ್! ಬೆಂಗಳೂರು ಗೆಲುವು ಚೆನ್ನೈಗೇಕೆ ಮುಖ್ಯ?

SCROLL FOR NEXT