ಬೆಂಗಳೂರು: ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ವಿಮಾನಯಾನ ಕಾರ್ಯಾಚರಣೆಗೆ ಅಡ್ಡಿಯಾಗಿದ್ದರಿಂದ ಬುಧವಾರ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುಮಾರು 34 ಅಂತರರಾಷ್ಟ್ರೀಯ ವಿಮಾನಗಳು ರದ್ದಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮಾರ್ಚ್ 4 ರಂದು ವಾಯುಪ್ರದೇಶ ನಿರ್ಬಂಧಗಳಿಂದಾಗಿ 18 ಆಗಮನ ಮತ್ತು 16 ನಿರ್ಗಮನ ವಿಮಾನಗಳು ರದ್ದಾಗಿವೆ ಎಂದು ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ರದ್ದತಿಯಿಂದ ಅಬುಧಾಬಿ, ರಿಯಾದ್, ಜೆಡ್ಡಾ, ದಮ್ಮಾಮ್, ದುಬೈ ಮತ್ತು ದೋಹಾ ಸೇರಿದಂತೆ ಪಶ್ಚಿಮ ಏಷ್ಯಾದ ನಗರಗಳೊಂದಿಗೆ ಬೆಂಗಳೂರನ್ನು ಸಂಪರ್ಕಿಸುವ ಹಲವು ಪ್ರಮುಖ ಅಂತರರಾಷ್ಟ್ರೀಯ ವಿಮಾನಗಳ ಮೇಲೆ ಪರಿಣಾಮ ಬೀರಿದೆ.
ಏತನ್ಮಧ್ಯೆ, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್(ಬಿಐಎಎಲ್), ಪ್ರಯಾಣಿಕರಿಗೆ ಸಹಾಯ ಒದಗಿಸಲು ಟರ್ಮಿನಲ್ 2 ರ ಕರ್ಬ್‌ಸೈಡ್‌ನಲ್ಲಿ ಸಹಾಯ ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದೆ.