ಸುನಿಲ್ ತಾಪ್ಸೆ  
ರಾಜ್ಯ

BRIMS ಫೊರೆನ್ಸಿಕ್ ವಿಭಾಗ ಮುಖ್ಯಸ್ಥ ಸುನಿಲ್ ತಾಪ್ಸೆ ಆತ್ಮಹತ್ಯೆ: ಡೆತ್ ನೋಟ್ ಪತ್ತೆ

ಪೊಲೀಸರ ಪ್ರಕಾರ, ಆರೋಗ್ಯ ಸಮಸ್ಯೆಗಳ ಕಾರಣದಿಂದ ಅವರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಅನುಮಾನಿಸಲಾಗಿದೆ.

ಬೀದರ್: ಬೀದರ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ನ ಫೊರೆನ್ಸಿಕ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಸುನಿಲ್ ತಾಪ್ಸೆ (58ವ) ಅವರು ಮಂಗಳವಾರ ತಮ್ಮ ಕ್ವಾರ್ಟರ್ಸ್ ನ ಕಿಟಕಿ ಗ್ರಿಲ್ಲಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಪೊಲೀಸರ ಪ್ರಕಾರ, ಆರೋಗ್ಯ ಸಮಸ್ಯೆಗಳ ಕಾರಣದಿಂದ ಅವರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಅನುಮಾನಿಸಲಾಗಿದೆ.

ತಾಪ್ಸೆ ಬರೆದಿದ್ದರೆಂದು ಹೇಳಲಾಗುತ್ತಿರುವ ಡೆತ್ ನೋಟ್ ನಲ್ಲಿ, ತನ್ನ ಸಾವಿಗೆ ಯಾರೂ ಕಾರಣರಲ್ಲ, ಆರೋಗ್ಯ ಸಮಸ್ಯೆಗಳ ಕಾರಣದಿಂದಲೇ ಈ ಕಠಿಣ ನಿರ್ಧಾರ ಕೈಗೊಂಡಿದ್ದೇನೆ ಎಂದು ಉಲ್ಲೇಖಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಾರಾಷ್ಟ್ರ ಮೂಲದ ತಾಪ್ಸೆ ಅವರನ್ನು ಸಹೋದ್ಯೋಗಿಗಳು ಮತ್ತು ಸಿಬ್ಬಂದಿ ಮೃದುಭಾಷಿ, ಸ್ನೇಹಪರ ವ್ಯಕ್ತಿ ಎಂದು ನೆನಪಿಸಿಕೊಂಡಿದ್ದಾರೆ. ತಮ್ಮ ವಿಭಾಗದಲ್ಲಿ ಅವರು ಉತ್ತಮ ಹೆಸರು ಗಳಿಸಿದ್ದರು ಎಂದು ಸಹೋದ್ಯೋಗಿಗಳು ಹೇಳುತ್ತಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!