AEE ಮನೆ ಮೇಲೆ ಲೋಕಾ ದಾಳಿ 
ರಾಜ್ಯ

ಹಾಸನ ನಗರಪಾಲಿಕೆ AEE ಮನೆ ಮೇಲೆ ʻಲೋಕಾಯುಕ್ತʼ ದಾಳಿ; ಬಾಗಿಲು ತೆರೆಯದೇ ಕಳ್ಳಾಟ; ಬಿಲ್ಡಿಂಗ್ ಹತ್ತಿ ಕಿಟಕಿ ಬಡಿದರು ನೋ ರೆಸ್ಪಾನ್ಸ್!

ಲೋಕಾಯುಕ್ತ ಅಧಿಕಾರಿಗಳು ಬರುತ್ತಿದ್ದಂತೆ ಮನೆಯ ಲೈಟ್ ಆಫ್ ಮಾಡಿದ್ದು ಮನೆಯ ಬಾಗಿಲು ತೆರೆಯದ ಸತ್ಯನಾರಾಯಣ ಅಧಿಕಾರಿಗಳನ್ನ ಸತಾಯಿಸಿದ್ದಾರೆ. ಸತತ 2 ಗಂಟೆಯಿಂದ ಮನೆಯ ಬಾಗಿಲು ತೆಗೆಸಲು ಲೋಕಾಯುಕ್ತ ಅಧಿಕಾರಿಗಳು ಹರಸಾಹಸಡಪಡುತ್ತಿದ್ದಾರೆ.

ಹಾಸನ: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪದಡಿ ಹಾಸನ ನಗರದ ರಕ್ಷಣಾಪುರಂನಲ್ಲಿರುವ ಹಾಸನ ಮಹಾನಗರಪಾಲಿಕೆ ಎಇಇ ಎಂ.ಸಿ ಸತ್ಯನಾರಾಯಣ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಲೋಕಾಯುಕ್ತ ಡಿವೈಎಸ್‌ಪಿ ಸುರೇಶ್‌ ಕುಮಾರ್, ಇನ್ಸ್‌ಪೆಕ್ಟರ್ ಶಿಲ್ಪಾ ನೇತೃತ್ವದಲ್ಲಿ ದಾಳಿ ನಡೆದಿದ್ದು ಬೆಳಗ್ಗೆ 5.15 ಕ್ಕೆ ಸತ್ಯನಾರಾಯಣ ಅವರ ಮನೆಯೊಳಗೆ ಪರಿಶೀಲನೆ‌ ಮಾಡಲು ಲೋಕಾಯುಕ್ತ ಅಧಿಕಾರಿಗಳು ಬಂದು ಕಾಯುತ್ತಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಬರುತ್ತಿದ್ದಂತೆ ಮನೆಯ ಲೈಟ್ ಆಫ್ ಮಾಡಿದ್ದು ಮನೆಯ ಬಾಗಿಲು ತೆರೆಯದ ಸತ್ಯನಾರಾಯಣ ಅಧಿಕಾರಿಗಳನ್ನ ಸತಾಯಿಸಿದ್ದಾರೆ. ಸತತ 2 ಗಂಟೆಯಿಂದ ಮನೆಯ ಬಾಗಿಲು ತೆಗೆಸಲು ಲೋಕಾಯುಕ್ತ ಅಧಿಕಾರಿಗಳು ಹರಸಾಹಸಡಪಡುತ್ತಿದ್ದಾರೆ.

ಬಿಲ್ಡಿಂಗ್ ಹತ್ತಿ ಕಿಟಕಿ ಬಡಿದು, ಕೂಗಿದರು ಸತ್ಯನಾರಾಯಣ ಬಾಗಿಲು ತೆರೆಯುತ್ತಿಲ್ಲ. ಮನೆಯ ಸುತ್ತಲೂ ಓಡಾಡಿ ಬಾಗಿಲು ತೆರಸಲು ಪ್ರಯತ್ನಿಸುತ್ತಿದ್ದು ಸತತ 2 ಗಂಟೆಗೂ ಹೆಚ್ಚು ಕಾಲದಿಂದ ಮನೆಯ ಬಳಿಯೇ ಬೀಡುಬಿಟ್ಟಿದ್ದಾರೆ‌. ಸತ್ಯನಾರಾಯಣ ಫೋನ್ ಕೂಡ ಸ್ವಿಚ್‌ ಆಫ್‌ ಮಾಡಿದ್ದಾರೆ.

ಇನ್ನೂ ಸತ್ಯನಾರಾಯಣ ಬಾಗಿಲು ತೆರೆಯದೇ ಸತಾಯಿಸುತ್ತಿರುವ ಕಾರಣ ಸ್ಥಳಕ್ಕೆ ಲೋಕಾಯುಕ್ತ ಎಸ್ಪಿ ನಂದಿನಿ ಕೂಟ ಭೇಟಿ ನೀಡಿ ಪರಿಸ್ಥಿತಿ ಮೇಲ್ವಿಚಾರಣೆ ನಡೆಸಿದ್ದಾರೆ. ಬಳಿಕ ಅಧಿಕಾರಿಗಳಿಂದ ಮಾಹಿತಿ ಪಡೆದು ಅಲ್ಲಿಂದ ತೆರಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US–Iran conflict| ಇರಾನ್ ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ; 6ನೇ ದಿನಕ್ಕೆ ಕಾಲಿಟ್ಟ ಯುದ್ಧ –ಡೊನಾಲ್ಡ್ ಟ್ರಂಪ್ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಸೆನೆಟ್ ವಿಫಲ

'ಮಧ್ಯಪ್ರಾಚ್ಯ ಸಂಘರ್ಷ: ಇರಾನ್ ಯುದ್ಧಕ್ಕೆ ನಾನು 10ಕ್ಕೆ 15 ಅಂಕ ಕೊಡುತ್ತೇನೆ, ಅಮೆರಿಕಾ ಈಗ ಅತ್ಯಂತ ಬಲಿಷ್ಠ ಸ್ಥಿತಿಯಲ್ಲಿದೆ': Donald Trump

ರಾಜ್ಯ ಬಜೆಟ್ 2026-27: ಮದ್ಯ ತೆರಿಗೆಯಿಂದ ರಾಜ್ಯಕ್ಕೆ ಭಾರೀ ಆದಾಯ, ಆದಾಯ ಗುರಿ 45,000 ಕೋಟಿ ರೂ.ಗೆ ಹೆಚ್ಚಿಸಲು ಸರ್ಕಾರ ಚಿಂತನೆ..!

'ಮಧ್ಯಪ್ರಾಚ್ಯ ಸಂಘರ್ಷ ಎಫೆಕ್ಟ್: ಇಂಧನ ಬೆಲೆ ಬೆಲೆ ಏರಿಕೆ ಭೀತಿ, ಪೆಟ್ರೋಲ್ ಬಂಕ್‌'ಗಳಿಗೆ ಮುಗಿಬಿದ್ದ ಜನ..!

ಸಿಎಂ ಕುರ್ಚಿ ಕದನ ಮಧ್ಯೆ ಡಿಕೆಶಿಯಿಂದ ಮಾ.10ಕ್ಕೆ ಡಿನ್ನರ್ ಪಾರ್ಟಿ: ಕೆಪಿಸಿಸಿ ಅಧ್ಯಕ್ಷ ಸ್ಥಾನ ತ್ಯಜಿಸುತ್ತಾರಾ ಡಿಸಿಎಂ?

SCROLL FOR NEXT