ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು ಕಾಲೇಜುಗಳಲ್ಲಿ ಡ್ರಗ್ಸ್ ತಪಾಸಣೆ: 31 ವಿದ್ಯಾರ್ಥಿಗಳ ರಿಪೋರ್ಟ್ ಪಾಸಿಟಿವ್

‘ಸನ್ಮಿತ್ರ’ ಯೋಜನೆಯಡಿ ಯುವಕರಲ್ಲಿ ಹೆಚ್ಚುತ್ತಿರುವ ಮಾದಕ ವಸ್ತು ಬಳಕೆಯನ್ನು ತಡೆಯುವ ಉದ್ದೇಶದಿಂದ ಈ ತಪಾಸಣೆ ನಡೆಸಲಾಗಿದೆ.

ಬೆಂಗಳೂರು: ರಾಜ್ಯ ಪೊಲೀಸರು ಆರಂಭಿಸಿರುವ ‘ಸನ್ಮಿತ್ರ’ ಅಭಿಯಾನದಡಿ ಪಶ್ಚಿಮ ಬೆಂಗಳೂರು ವಿಭಾಗದ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ನಡೆಸಿದ ಡ್ರಗ್ ತಪಾಸಣೆಯಲ್ಲಿ 31 ವಿದ್ಯಾರ್ಥಿಗಳು ಮಾದಕವಸ್ತು ಸೇವಿಸಿರುವುದು ದೃಢಪಟ್ಟಿದೆ.

ನಗರದ ಪಶ್ಚಿಮ ವಿಭಾಗದ ವಿಜಯನಗರ ಉಪವಿಭಾಗದ ಆರು ಶಿಕ್ಷಣ ಸಂಸ್ಥೆಗಳು ಮತ್ತು ಎರಡು ಹಾಸ್ಟೆಲ್‌ಗಳಲ್ಲಿ ಪೊಲೀಸರು ನಡೆಸಿದ ಡ್ರಗ್ಸ್ ಪರೀಕ್ಷೆಯಲ್ಲಿ 31 ವಿದ್ಯಾರ್ಥಿಗಳ ರಿಪೋರ್ಟ್ ಪಾಸಿಟಿವ್ ಬಂದಿದೆ ಎಂದು ತಿಳಿದುಬಂದಿದೆ.

‘ಸನ್ಮಿತ್ರ’ ಯೋಜನೆಯಡಿ ಯುವಕರಲ್ಲಿ ಹೆಚ್ಚುತ್ತಿರುವ ಮಾದಕ ವಸ್ತು ಬಳಕೆಯನ್ನು ತಡೆಯುವ ಉದ್ದೇಶದಿಂದ ಈ ತಪಾಸಣೆ ನಡೆಸಲಾಗಿದೆ.

ಈ ಕಾರ್ಯಾಚರಣೆಯ ಭಾಗವಾಗಿ ವಿಜಯನಗರ ಉಪವಿಭಾಗದ ಆರು ಶಿಕ್ಷಣ ಸಂಸ್ಥೆಗಳು ಹಾಗೂ ಎರಡು ಹಾಸ್ಟೆಲ್‌ಗಳಲ್ಲಿ ಮಾದಕ ವಸ್ತು ಸೇವನೆಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಲಾಗಿದೆ.

1,200ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಮೂತ್ರ ಮಾದರಿಗಳನ್ನು ಸಂಗ್ರಹಿಸಲಾಗಿದ್ದು, ಅವುಗಳಲ್ಲಿ ಯಾದೃಚ್ಛಿಕವಾಗಿ 585 ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಯಿತು. ಇದರಲ್ಲಿ 31 ಮಾದರಿಗಳು ಪಾಸಿಟಿವ್ ಬಂದಿದೆ ಎಂದು ತಿಳಿದುಬಂದಿದೆ.

ಕಾಲೇಜು ಆಡಳಿತದ ಅನುಮತಿ ಮತ್ತು ಎನ್‌ಒಸಿ ಪಡೆದು ಈ ತಪಾಸಣೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಶ್ಚಿಮ ವಿಭಾಗದ ಡಿಸಿಪಿ ಯತೀಶ್ ಎನ್ ಮಾತನಾಡಿ, ಪಾಸಿಟಿವ್ ಬಂದಿರುವ 31 ವಿದ್ಯಾರ್ಥಿಗಳ ವಿರುದ್ಧ ತಕ್ಷಣ ಯಾವುದೇ ಕಾನೂನು ಕ್ರಮ ಕೈಗೊಂಡಿಲ್ಲ. ಬದಲಾಗಿ ಅವರಿಂದ ಮಾಹಿತಿ ಸಂಗ್ರಹಿಸಿ ಕೌನ್ಸೆಲಿಂಗ್ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ಯುವಕರು ತಪ್ಪು ದಾರಿಯಲ್ಲಿ ಹೋಗದಂತೆ ತಡೆಯುವುದು ಹಾಗೂ ಮಾರ್ಗದರ್ಶನ ನೀಡುವುದು ಈ ಯೋಜನೆಯ ಉದ್ದೇಶವಾಗಿದೆ. ಮುಂದಿನ ದಿನಗಳಲ್ಲಿ ಪಶ್ಚಿಮ ವಿಭಾಗದ ಇತರ ಉಪವಿಭಾಗಗಳಲ್ಲಿಯೂ ಇದೇ ರೀತಿಯ ತಪಾಸಣೆ ಮುಂದುವರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿ, ಮುಂಬೈನಲ್ಲಿ ಬೃಹತ್ ಪ್ರತಿಭಟನೆ; 700 ಮಂದಿ ವಶಕ್ಕೆ

FlyDubai ಘಟನೆ ಹಿಂದೆ ಯಾವುದೇ ಶಕ್ತಿಯ ಕೈವಾಡವಿದ್ದರೂ ಡೋಂಟ್ ಕೇರ್; 'ಭಾರಿ ಬೆಲೆ' ತೆರಬೇಕಾಗುತ್ತೆ- ಇಸ್ರೇಲ್ ಪ್ರಧಾನಿ ನೆತನ್ಯಾಹು ಎಚ್ಚರಿಕೆ

ಬಿಹಾರ ಪ್ರವಾಹ: ವಾಯುಪಡೆಯ ಹೆಲಿಕಾಪ್ಟರ್‌ನಿಂದ ಪರಿಹಾರ ಸಾಮಗ್ರಿಯ ಪ್ಯಾಕೆಟ್ ಬಿದ್ದು ವೃದ್ಧ ಸಾವು!

Asian Games 2026: 44 ವರ್ಷಗಳ ಬರ ನೀಗಿಸಿದ ಮಹಿಳಾ ಪಡೆ; ಚೀನಾ ಮಣಿಸಿ ಚಿನ್ನ ಗೆದ್ದ ಭಾರತ!

CJP ಪ್ರತಿಭಟನೆಗೆ ಕೈಜೋಡಿಸಿದ ನಸೀರುದ್ದೀನ್ ಶಾ; ನಟನನ್ನು ಅಪ್ಪಿಕೊಂಡು ಕಣ್ಣೀರಿಟ್ಟ ಅಭಿಜೀತ್ ದೀಪ್ಕೆ; Video!