ಸಂಗ್ರಹ ಚಿತ್ರ 
ರಾಜ್ಯ

ಸುಂಕದ ಶಾಕ್: ಮದ್ಯದಲ್ಲಿರುವ ಆಲ್ಕೋಹಾಲ್ ಅಂಶ ಆಧರಿಸಿ ತೆರಿಗೆ, 45000 ಕೋಟಿ ರೂ ಸಂಗ್ರಹದ ಗುರಿ!

ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಾರಿಗೆ ಬಜೆಟ್‌ ಮಂಡಿಸುತ್ತಿದ್ದು ಮದ್ಯ ಪ್ರಿಯರಿಗೆ ಸುಂಕದ ಶಾಕ್ ನೀಡಿದ್ದಾರೆ. ಮದ್ಯದ ಮೇಲೆ ವಿಧಿಸುವ ತೆರಿಗೆಯ ಸ್ವರೂಪವನ್ನು ಬದಲಾಯಿಸುವ ಮೂಲಕ ರಾಜ್ಯದ ರಾಜಸ್ವ ಸಂಗ್ರಹವನ್ನು ಗಣನೀಯವಾಗಿ ಏರಿಕೆ ಮಾಡಲು ನಿರ್ಧರಿಸಿದ್ದಾರೆ.

ಬೆಂಗಳೂರು: ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಾರಿಗೆ ಬಜೆಟ್‌ ಮಂಡಿಸುತ್ತಿದ್ದು ಮದ್ಯ ಪ್ರಿಯರಿಗೆ ಸುಂಕದ ಶಾಕ್ ನೀಡಿದ್ದಾರೆ. ಮದ್ಯದ ಮೇಲೆ ವಿಧಿಸುವ ತೆರಿಗೆಯ ಸ್ವರೂಪವನ್ನು ಬದಲಾಯಿಸುವ ಮೂಲಕ ರಾಜ್ಯದ ರಾಜಸ್ವ ಸಂಗ್ರಹವನ್ನು ಗಣನೀಯವಾಗಿ ಏರಿಕೆ ಮಾಡಲು ನಿರ್ಧರಿಸಿದ್ದಾರೆ. ಮದ್ಯದಲ್ಲಿರುವ ಆಲ್ಕೋಹಾಲ್ ಅಂಶ ಆಧರಿಸಿ ತೆರಿಗೆ ವಿಧಿಸಲಾಗುವುದು. ಎಕ್ಸ್-ಫ್ಯಾಕ್ಟರಿ ದರಪಟ್ಟಿಯ ಆಧಾರದ ಮೇಲೆ ಮದ್ಯದ ಬೆಲೆಯನ್ನು ಒಂದೇ ಬಾರಿಗೆ ಏರಿಸುವ ಬದಲು ಹಂತ ಹಂತವಾಗಿ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. 2026-27ರ ವೇಳೆಗೆ 45,000 ಕೋಟಿ ರೂ. ರಾಜಸ್ವ ಸಂಗ್ರಹಿಸುವ ಗುರಿ ಹೊಂದಲಾಗಿದೆ.

ಮದ್ಯಪಾನದ ದುಷ್ಪರಿಣಾಮಗಳು ಸಮಾಜದ ಮೇಲೆ ಉಂಟುಮಾಡುವ ಹಾನಿಯನ್ನು ಗಮನದಲ್ಲಿಟ್ಟುಕೊಂಡು ಜಾಗತಿಕ ಮಟ್ಟದಲ್ಲಿ ಮದ್ಯದ ಅಂಶಗಳನ್ನು (Alcohol-in-Beverage - AIB) ಆಧರಿಸಿದ ತೆರಿಗೆ ಪದ್ದತಿಯು gold standard ಆಗಿದೆ. ಏಪ್ರಿಲ್ 2026ರಿಂದ ಪಾನೀಯಗಳಲ್ಲಿ ಇರುವ ಮದ್ಯದ ಅಂಶವನ್ನು ಆಧಾರವಾಗಿಟ್ಟುಕೊಂಡು ಅಬಕಾರಿ ಸುಂಕ ವ್ಯವಸ್ಥೆಯನ್ನು ಜಾರಿಗೆ ತರಲು ತೀರ್ಮಾನಿಸಲಾಗಿದೆ. ಅಬಕಾರಿ ಸುಂಕ ಏಕರೂಪವಾಗಿರಲಿದೆ. ಮುಂದಿನ ಮೂರರಿಂದ ನಾಲ್ಕು ವರ್ಷಗಳಲ್ಲಿ, ಎಲ್ಲಾ ಪಾನೀಯಗಳ ಮೇಲೆ ಏಕರೂಪವಾಗಿ ಅನ್ವಯಿಸುವಂತೆ ಪ್ರತಿ ಲೀಟರ್‌ನಲ್ಲಿ ಮದ್ಯದ ಅಂಶವನ್ನು ಆಧರಿಸಿ ಅಬಕಾರಿ ಸುಂಕ ವಿಧಿಸುವ ಪ್ರಕ್ರಿಯೆಗೆ ಹಂತ ಹಂತವಾಗಿ ಪರಿವರ್ತನೆಗೊಳ್ಳಲಿದೆ ಎಂದು ಬಜೆಟ್​ನಲ್ಲಿ ಘೋಷಿಸಲಾಗಿದೆ.

ಮಾರುಕಟ್ಟೆ ಪರಿಗಣನೆ ಆಧಾರದ ಮೇಲೆ ಮದ್ಯ ಉತ್ಪನ್ನಗಳನ್ನು ಸ್ಟ್ರಾಬ್‌ಗಳಲ್ಲಿ ಇರಿಸುವ ಅಧಿಕಾರವನ್ನು ಸಂಪೂರ್ಣವಾಗಿ ಉತ್ಪಾದಕರಿಗೆ ನೀಡಲಾಗುವುದು. ಮದ್ಯ ದರ ನಿಗದಿ ಸ್ಟ್ರಾಬ್‌ಗಳನ್ನು ತರ್ಕಬದ್ಧಗೊಳಿಸುವ ಸಲುವಾಗಿ ಪ್ರಸ್ತುತ ಇರುವ 16 ಸ್ಟ್ರಾಬ್‌ಗಳನ್ನು 8 ಫ್ಲ್ಯಾಬ್‌ಗಳಿಗೆ ಇಳಿಸಲು ತೀರ್ಮಾನಿಸಲಾಗಿದೆ. 2025-26ನೇ ಸಾಲಿನಲ್ಲಿ ಫೆಬ್ರವರಿ ತಿಂಗಳ ಅಂತ್ಯದವರೆಗೆ ಮದ್ಯದಿಂದ ಒಟ್ಟು 36,492 ಕೋಟಿ ರೂಪಾಯಿ ಸಂಗ್ರಹಿಸಿದೆ. ಕಳೆದ ಸಾಲಿಗೆ ಹೋಲಿಸಿದರೆ ಶೇ.12.7 ರಷ್ಟು ಬೆಳವಣಿಗೆಯಾಗಿದೆ. 2026-27 ಸಾಲಿಗೆ 45,000 ಕೋಟಿ ರೂ. ಸಂಗ್ರಹದ ಗುರಿ ಇಡಲಾಗಿದೆ.‌

ತೆರಿಗೆ ಸೋರಿಕೆಯನ್ನು ತಡೆಯಲು ತಂತ್ರಜ್ಞಾನ ಆಧಾರಿತ ಬ್ಲಾಕ್‌ಚೈನ್ ಡಿಜಿಟಲ್ ಟ್ರ್ಯಾಕಿಂಗ್ ವ್ಯವಸ್ಥೆಗಳನ್ನು ಜಾರಿಗೆ ತರಲಾಗುತ್ತದೆ. ಮದ್ಯ ರವಾನೆಗೆ ಬೆಂಗಾವಲು ವ್ಯವಸ್ಥೆಯ ಬದಲಿಗೆ ಜಿಯೋ-ಫೆನ್ಸ್ ಇ-ಲಾಕ್ ವ್ಯವಸ್ಥೆಯನ್ನು ಅಳವಡಿಸಲಾಗುತ್ತದೆ. ಈ ಕ್ರಮಗಳು ಮೇಲ್ವಿಚಾರಣೆಗೆ ಅವಕಾಶ ಕಲ್ಪಿಸುವ ಮೂಲಕ ಪಾರದರ್ಶಕತೆಯನ್ನು ಹೆಚ್ಚಿಸಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯೂಯಾರ್ಕ್ ನಲ್ಲೇ ನಿಮ್ಮ ಬುಡ ಗಟ್ಟಿ ಇಲ್ಲ; ಇನ್ನು ನಮ್ಮ ದೇಶದ ಅಧಿಕಾರ ಬದಲಾಯಿಸ್ತೀರಾ?: ಟ್ರಂಪ್ ಬಗ್ಗೆ ಇರಾನ್ ಅಪಹಾಸ್ಯ!

ಕೇಂದ್ರದಿಂದ ಅಸಹಕಾರ, ಮಲತಾಯಿ ಧೋರಣೆ, ಆದರೂ ವಿತ್ತೀಯ ಶಿಸ್ತು ಪಾಲನೆ: CM ಸಿದ್ದರಾಮಯ್ಯ

UPSC ಪರೀಕ್ಷೆ ಫಲಿತಾಂಶ ಪ್ರಕಟ: ಕಿರಣ್ ಕಾಮತೆ ರಾಜ್ಯಕ್ಕೆ ಟಾಪರ್; ಕರ್ನಾಟಕದ 22 ಅಭ್ಯರ್ಥಿಗಳು ಪಾಸ್

ಯುದ್ಧ ಕೊನೆಗೊಳಿಸಲು ಕೆಲವು ರಾಷ್ಟ್ರಗಳು 'ಮಧ್ಯಸ್ಥಿಕೆ' ಬಯಸುತ್ತಿವೆ: ಭೀಕರ ದಾಳಿಗಳ ನಡುವೆ ಇರಾನ್ ಅಧ್ಯಕ್ಷರ ಸ್ಫೋಟಕ ಹೇಳಿಕೆ!

ಸುಖೋಯ್ ವಿಮಾನ ದುರಂತ: Op Sindoor ನಲ್ಲಿ ಪಾಕ್ ಗೆ ನಡುಕ ಹುಟ್ಟಿಸಿದ್ದ ಹುತಾತ್ಮ ಪೈಲಟ್ Purvesh Duragkar

SCROLL FOR NEXT