ಸಿಎಂ ಸಿದ್ದರಾಮಯ್ಯ 
ರಾಜ್ಯ

Karnataka Budget 2026: ತುಮಕೂರಿನಲ್ಲಿ ಕ್ರೀಡಾ ಮೂಲಸೌಕರ್ಯ ಉನ್ನತೀಕರಣ; ಕ್ರೀಡಾ ಕ್ಷೇತ್ರಕ್ಕೆ ಸಿಕ್ಕಿದ್ದೇನು?

ದಾಖಲೆಯ 17ನೇ ಬಾರಿಗೆ 2026-27ನೇ ಸಾಲಿನ ಬಜೆಟ್​ ಮಂಡಿಸಿದ ಅವರು, ಬೆಂಗಳೂರಿನ ಹೆಸರಘಟ್ಟ ಕೆರೆಯಲ್ಲಿ ಪಿಪಿಪಿ ಮಾದರಿಯಲ್ಲಿ Kayaking, Canoeing Centre of Excellence ಸ್ಥಾಪನೆ ಮಾಡಲಾಗುವುದು ಎಂದರು.

ಬೆಂಗಳೂರು: ತುಮಕೂರಿನಲ್ಲಿ ಕ್ರೀಡಾ ಮೂಲಸೌಕರ್ಯಗಳನ್ನು ಮೂರು ಕೋಟಿ ರೂ.ಗಳ ವೆಚ್ಚದಲ್ಲಿ ಉನ್ನತೀಕರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ತಿಳಿಸಿದ್ದಾರೆ.

ದಾಖಲೆಯ 17ನೇ ಬಾರಿಗೆ 2026-27ನೇ ಸಾಲಿನ ಬಜೆಟ್​ ಮಂಡಿಸಿದ ಅವರು, ಬೆಂಗಳೂರಿನ ಹೆಸರಘಟ್ಟ ಕೆರೆಯಲ್ಲಿ ಪಿಪಿಪಿ ಮಾದರಿಯಲ್ಲಿ Kayaking, Canoeing Centre of Excellence ಸ್ಥಾಪನೆ ಮಾಡಲಾಗುವುದು ಎಂದರು.

ಸಶಕ್ತ ಕರ್ನಾಟಕʼ ಕಾರ್ಯಕ್ರಮದಡಿ ಬೆಳಗಾವಿ, ಗೋಕರ್ಣ, ಚಿತ್ರದುರ್ಗ, ಹಂಪಿಯಲ್ಲಿ ರಾಷ್ಟ್ರಮಟ್ಟದ ಮ್ಯಾರಥಾನ್‌ಗಳನ್ನು ತಲಾ ₹10 ಲಕ್ಷ ವೆಚ್ಚದಲ್ಲಿ ಆಯೋಜಿಸಲಾಗುವುದು. ಇದರೊಂದಿಗೆ 10 ಜಿಲ್ಲಾ ಕೇಂದ್ರಗಳಲ್ಲಿ ತಲಾ ₹4 ಲಕ್ಷ ವೆಚ್ಚದಲ್ಲಿ ಜಿಲ್ಲಾ ಮಟ್ಟದ ಮ್ಯಾರಥಾನ್‌ಗಳನ್ನು ಪ್ರಸಿದ್ಧ ಕ್ರೀಡಾಪಟುಗಳ ಹೆಸರಿನಲ್ಲಿ ಆಯೋಜನೆ ಮಾಡಲಾಗುವುದು ಎಂದು ತಿಳಿಸಿದರು.

ಕ್ರೀಡಾ ಕ್ಷೇತ್ರಕ್ಕೆ ಸಿಕ್ಕಿದ್ದಿಷ್ಟು...

  1. ಸೈಕ್ಲಿಂಗ್‌‌ಗೆ ಉತ್ತೇಜನ ನೀಡಲು ಮೈಸೂರಿನಲ್ಲಿರುವ ದಟ್ಟಗಳ್ಳಿಯಲ್ಲಿ ಗುರುತಿಸಲಾದ ಜಾಗದಲ್ಲಿ ಆಧುನಿಕ ಸೈಕ್ಲಿಂಗ್‌ ವೆಲೋಡ್ರೋಮ್‌ ನಿರ್ಮಾಣ

  2. ಬಂಗಾರಪೇಟೆ, ಮುದ್ದೇಬಿಹಾಳ, ಗುಳೇದಗುಡ್ಡ, ಕನಕಪುರ, ಕುಕನೂರು ಮತ್ತು ಮಸ್ಕಿಯಲ್ಲಿ ತಲಾ ₹2 ಕೋಟಿ ವೆಚ್ಚದಲ್ಲಿ ತಾಲ್ಲೂಕು ಕ್ರೀಡಾಂಗಣಗಳ ನಿರ್ಮಾಣ

  3. ಕಲ್ಯಾಣ ಕರ್ನಾಟಕ ಭಾಗದ ಕ್ರೀಡಾಪಟುಗಳಿಗೆ ಉತ್ತಮ ಕ್ರೀಡಾ ವಿಜ್ಞಾನ ಸೇವೆಗಳನ್ನು ಒದಗಿಸಲು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಕಲಬುರಗಿಯಲ್ಲಿ ಆಧುನಿಕ ಕ್ರೀಡಾ ವಿಜ್ಞಾನ ಕೇಂದ್ರ ಆರಂಭ.

  4. ವಿಜಯನಗರ ಜಿಲ್ಲೆಯಲ್ಲಿರುವ ಕ್ರೀಡಾಂಗಣವನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಮತ್ತು KMERC ಅನುದಾನದಲ್ಲಿ ಮೇಲ್ದರ್ಜೆಗೇರಿಸಲಾಗುವುದು.

  5. ಮಕ್ಕಳ ಕ್ರೀಡಾ ಪ್ರತಿಭೆಯನ್ನು ಪ್ರೋತ್ಸಾಹಿಸಲು ವಿರಾಜಪೇಟೆಯಲ್ಲಿ ಸುಸಜ್ಜಿತ ಕ್ರೀಡಾ ತರಬೇತಿ ವಸತಿ ನಿಲಯ ನಿರ್ಮಾಣಕ್ಕೆ ಕ್ರಮ.

  6. ಕುಸ್ತಿ ಪಟುಗಳನ್ನು ಪ್ರೋತ್ಸಾಹಿಸಲು ಬೆಳಗಾವಿಯ ಬೆಳಗುಂದಿಯಲ್ಲಿ ನೂತನ ಕುಸ್ತಿ ಅಖಾಡ ನಿರ್ಮಾಣ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ: ಮಲ್ಲಿಕಾರ್ಜುನ ಖರ್ಗೆ; Video

IPL 2026: ಬ್ಯಾಟಿಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ 'ನಿಜಕ್ಕೂ AI?' ಎಲಾನ್ ಮಸ್ಕ್ ಈ ಮಾಂತ್ರಿಕನನ್ನು ಸೃಷ್ಟಿಸಿದರೇ?

'ನಿಮ್ಮ ಕಾನೂನಿಗೆ ತಿದ್ದುಪಡಿ ತನ್ನಿ': ಅತ್ಯಾಚಾರ ಸಂತ್ರಸ್ತ ಬಾಲಕಿ ಗರ್ಭಪಾತ ತಡೆದ ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ತರಾಟೆ..!

IPL 2026: ಡ್ರೆಸಿಂಗ್ ರೂಮ್‌ನಲ್ಲಿ ನಿಷೇಧಿತ ಇ-ಸಿಗರೇಟ್ ಸೇದಿದ ರಿಯಾನ್ ಪರಾಗ್​​ಗೆ ದಂಡ ಫಿಕ್ಸ್!

ಬೆಂಗಳೂರು ಮಳೆ ಅವಾಂತರ: ಮತ್ತೋರ್ವ ವ್ಯಕ್ತಿ ಸಾವು, ಮೃತರ ಸಂಖ್ಯೆ 10ಕ್ಕೆ ಏರಿಕೆ

SCROLL FOR NEXT