ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮುಕ್ತಾಯ: ಕಲಾಪ ಸೋಮವಾರಕ್ಕೆ ಮುಂದೂಡಿಕೆ

ಪ್ರಸಕ್ತ ಸಾಲಿನ ಬಜೆಟ್ ಮಂಡನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಕ್ತಾಯಗೊಳಿಸಿದ ಬಳಿಕ ಮಾತನಾಡಿದ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರು ಕಲಾಪವನ್ನು ಸೋಮವಾರಕ್ಕೆ ಮುಂದೂಡಿಕೆ ಮಾಡಿದರು.

ಬೆಂಗಳೂರು: 2026-2027ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮುಕ್ತಾಯಗೊಂಡಿದ್ದು, ವಿಧಾನಮಂಡಲ ಜಂಟಿ ಅಧಿವೇಶನವನ್ನು ಸೋಮವಾರ ಬೆಳಗ್ಗೆ ಮುಂದೂಡಲಾಗಿದೆ.

ಪ್ರಸಕ್ತ ಸಾಲಿನ ಬಜೆಟ್ ಮಂಡನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಕ್ತಾಯಗೊಳಿಸಿದ ಬಳಿಕ ಮಾತನಾಡಿದ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರು ಕಲಾಪವನ್ನು ಸೋಮವಾರಕ್ಕೆ ಮುಂದೂಡಿಕೆ ಮಾಡಿದರು.

ಈ ಬಾರಿಯ ಬಜೆಟ್ ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಮಾರು 3 ಗಂಟೆ 36 ನಿಮಿಷಗಳ ಕಾಲ ಓದಿದರು.

ಬಜೆಟ್ ಭಾಷಣದ ಆರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಚನಕಾರ್ತಿ ಅಕ್ಕಮ್ಮ ಅವರ ‘ಧನಶೀಲ ಮನಶೀಲ ತನುಶೀಲ, ಸರ್ವಮಯ ದೃಕ್ಕಿಂಗೆ ಕಾಂಬುದೆಲ್ಲವು ಶೀಲ, ಇಂತೀ ವ್ರತಸಂಪದವೆಲ್ಲವೂ ಅದಾರ ಕುರಿತು ಮಾಡುವ ನೇಮ ಎಂಬುದು ತಾನರಿಯಬೇಕು’ ಸಾಲುಗಳನ್ನು ಉಲ್ಲೇಖಿಸಿದರು.

ಜಲಸಂಪನ್ಮೂಲ ಇಲಾಖೆಯ ಯೋಜನೆಗಳಿಗೆ ಸಂಬಂಧಿಸಿದಂತೆ ಬಜೆಟ್ ಭಾಷಣದಲ್ಲಿ ಕೆಪಿ ಪೂರ್ಣಚಂದ್ರ ತೇಜಸ್ವಿ ಅವರ ‘ನದಿಗಳು ನಮ್ಮೆಲ್ಲ ಮಾನವ ಸಮಾಜ ಮತ್ತು ಸಂಸ್ಕೃತಿಗಳ ಜೀವವಾಹಿನಿ. ಅವು ಕೊಳಕಾದರೆ, ಅವು ಬತ್ತಿದರೆ ನಮ್ಮ ಉಸಿರು ಉಡುಗುತ್ತಾ ಬಂದಂತೆ’ ಬರಹದ ಸಾಲುಗಳನ್ನು ಉಲ್ಲೇಖ ಮಾಡಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಂಬಂಧಿಸಿದ ಘೋಷಣೆಗಳನ್ನು ಓದುವಾಗ ಹಿರಿಯ ಪತ್ರಕರ್ತ ಬಿಎಂ ಬಶೀರ್ ಅವರ ಕವಿತೆಯ ಸಾಲುಗಳಾದ ‘ಗುಲಾಬಿಯೆಂದರೆ ಅಮ್ಮನಿಗೆ ಇಷ್ಟ, ಗೊತ್ತು ಅವಳಿಗೆ ಮುಳ್ಳಲ್ಲಿ ಅರಳುವ ಕೃಷ್ಣ’ ಸಿಎಂ ಸಿದ್ದರಾಮಯ್ಯ ಅವರು ಉಲ್ಲೇಖಿಸಿದರು.

ಸಮಾಜ ಕಲ್ಯಾಣ ಇಲಾಖೆಗೆ ಸಂಬಂಧಿಸಿದಂತೆ ದಲಿತ ಬಂಡಾಯ ಕವಿ ಸಿದ್ದಲಿಂಗಯ್ಯ ಅವರ ‘ಕುರಿಗಳ ಕಾಯುವ ಕುರುಬನ ಕೂಗು, ಜನರ ಮಾತು ಕವನ. ಸೋತ ರಟ್ಟೆಗಳ ಹೂತ ಕಾಲುಗಳ ಬೆವರ ಹಸಿರು ಕವನ’ ಸಾಲುಗಳನ್ನು ಉಲ್ಲೇಖ ಮಾಡಿದರು.

ಅದೇ ರೀತಿಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಸಂಬಂಧಿಸಿದಂತೆ, ‘ಮಾನವತೆಯ ಕಟ್ಟಡಕ್ಕೆ ಪ್ರೀತಿಯೊಂದೇ ಇಟ್ಟಿಗೆ, ಇಟ್ಟಿಗೆಗಳ ಬೆಸೆಯಬೇಕು ಕರುಣೆ ಸ್ನೇಹದೊಟ್ಟಿಗೆ’ ಎಂದು ಕವಿ ಬಿ ಆರ್ ಲಕ್ಷ್ಮಣ ರಾವ್ ಅವರ ಕವಿತೆಯ ಸಾಲುಗಳನ್ನು ಉಲ್ಲೇಖ ಮಾಡಿದರು.

ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಗೆ ಸಂಬಂಧಿಸಿದಂತೆ ‘ಹಳೆತನದ ಕೊಳೆಯೆಲ್ಲ ಹೊಸಮತಿಯ ಹೊಳೆಯಲ್ಲಿ ಕೊಚ್ಚಿ ಹೋಗಲಿ; ಬರಲಿ ವಿಜ್ಞಾನ ಬುದ್ಧಿ’ ಎಂಬ ರಾಷ್ಟ್ರಕವಿ ಕುವೆಂಪು ಸಾಲುಗಳನ್ನು ಉಲ್ಲೇಖ ಮಾಡಿದರು. ಈ ಮೂಲಕ ಸಿದ್ದರಾಮಯ್ಯ ಅವರು ಈ ಬಾರಿಯೂ ಕವತಿಯ ಮೂಲಕ ಗಮನ ಸೆಳೆದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯೂಯಾರ್ಕ್ ನಲ್ಲೇ ನಿಮ್ಮ ಬುಡ ಗಟ್ಟಿ ಇಲ್ಲ; ಇನ್ನು ನಮ್ಮ ದೇಶದ ಅಧಿಕಾರ ಬದಲಾಯಿಸ್ತೀರಾ?: ಟ್ರಂಪ್ ಬಗ್ಗೆ ಇರಾನ್ ಅಪಹಾಸ್ಯ!

ಕೇಂದ್ರದಿಂದ ಅಸಹಕಾರ, ಮಲತಾಯಿ ಧೋರಣೆ, ಆದರೂ ವಿತ್ತೀಯ ಶಿಸ್ತು ಪಾಲನೆ: CM ಸಿದ್ದರಾಮಯ್ಯ

UPSC ಪರೀಕ್ಷೆ ಫಲಿತಾಂಶ ಪ್ರಕಟ: ಕಿರಣ್ ಕಾಮತೆ ರಾಜ್ಯಕ್ಕೆ ಟಾಪರ್; ಕರ್ನಾಟಕದ 22 ಅಭ್ಯರ್ಥಿಗಳು ಪಾಸ್

ಯುದ್ಧ ಕೊನೆಗೊಳಿಸಲು ಕೆಲವು ರಾಷ್ಟ್ರಗಳು 'ಮಧ್ಯಸ್ಥಿಕೆ' ಬಯಸುತ್ತಿವೆ: ಭೀಕರ ದಾಳಿಗಳ ನಡುವೆ ಇರಾನ್ ಅಧ್ಯಕ್ಷರ ಸ್ಫೋಟಕ ಹೇಳಿಕೆ!

ಸುಖೋಯ್ ವಿಮಾನ ದುರಂತ: Op Sindoor ನಲ್ಲಿ ಪಾಕ್ ಗೆ ನಡುಕ ಹುಟ್ಟಿಸಿದ್ದ ಹುತಾತ್ಮ ಪೈಲಟ್ Purvesh Duragkar

SCROLL FOR NEXT