ಕೆಎಲ್ ಸೂರಜ್ - ಕಿರಣ್ ಕಾಮತೆ  
ರಾಜ್ಯ

UPSC ಪರೀಕ್ಷೆ ಫಲಿತಾಂಶ ಪ್ರಕಟ: ಕಿರಣ್ ಕಾಮತೆ ರಾಜ್ಯಕ್ಕೆ ಟಾಪರ್; ಕರ್ನಾಟಕದ 22 ಅಭ್ಯರ್ಥಿಗಳು ಪಾಸ್

ಅಖಿಲ ಭಾರತ ಮಟ್ಟದಲ್ಲಿ 82ನೇ ರ‍್ಯಾಂಕ್ ಗಳಿಸಿರುವ ಸಂದೀಪ್ ಬಾಡದ್ ಅವರು, ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ್ದಾರೆ.

ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್‌ಸಿ) ಶುಕ್ರವಾರ 2025ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದ್ದು, ಅನುಜ್ ಅಗ್ನಿಹೋತ್ರಿ ಅವರು ದೇಶಕ್ಕೆ ಅಗ್ರಸ್ಥಾನ ಪಡೆದರೆ, ಕಿರಣ್ ಕಾಮತೆ ಅವರು ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ.

ಈ ಸಾಲಿನ ನಾಗರಿಕ ಸೇವಾ ಪರೀಕ್ಷಾ ಫಲಿತಾಂಶದಲ್ಲಿ ರಾಜ್ಯದ ಒಟ್ಟು 22 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ.

ಅಖಿಲ ಭಾರತ ಮಟ್ಟದಲ್ಲಿ 53 ರ‍್ಯಾಂಕ್ ಗಳಿಸಿರುವ ಕಿರಣ್ ಕಾಮತೆ ಅವರು ರಾಜ್ಯದ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಬೆಳಗಾವಿಯ ಗೋಗಟೆ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸಿವಿಲ್ ಎಂಜಿನಿಯರಿಂಗ್ ಪದವಿ ಪಡೆದಿರುವ ಕಿರಣ್ ಅವರು ಸದ್ಯ ಬೆಂಗಳೂರಿನಲ್ಲಿ ಲೋಕೋಪಯೋಗಿ ಇಲಾಖೆ ಮುಖ್ಯ ಕಚೇರಿಯಲ್ಲಿ ಸಹಾಯಕ ಎಂಜಿನಿಯರ್ ಆಗಿದ್ದಾರೆ.

ರಾಜ್ಯದ ಅಭ್ಯರ್ಥಿಗಳು ಮತ್ತು ಅವರು ಪಡೆದ ರ‍್ಯಾಂಕ್

ಅಖಿಲ ಭಾರತ ಮಟ್ಟದಲ್ಲಿ 82ನೇ ರ‍್ಯಾಂಕ್ ಗಳಿಸಿರುವ ಸಂದೀಪ್ ಬಾಡದ್ ಅವರು, ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ್ದಾರೆ ಮತ್ತು ರಾಜ್ಯದ ಕೆಎಲ್ ಸೂರಜ್ ಅವರು 525ನೇ ರ‍್ಯಾಂಕ್ ಗಳಿಸಿದ್ದಾರೆ.

ಈ ಸಲದ ನಾಗರಿಕ ಸೇವಾ ಪರೀಕ್ಷಾ ಫಲಿತಾಂಶದಲ್ಲಿ ಬೆಂಗಳೂರಿನ ಕೋಚಿಂಗ್ ಸೆಂಟರ್ ‘ಇಂಡಿಯಾ 4 ಐಎಎಸ್ ಅಕಾಡಮಿ’ಯು ಅಮೋಘ ಸಾಧನೆ ಮಾಡಿದೆ. ರಾಜ್ಯದಲ್ಲಿ ಯುಪಿಎಸ್‌ಸಿ ಉತ್ತೀರ್ಣರಾದ 22 ಮಂದಿ ಅಭ್ಯರ್ಥಿಗಳ ಪೈಕಿ 19 ಮಂದಿ ಈ ಕೋಚಿಂಗ್ ಸೆಂಟರ್‌ನಲ್ಲಿ ತರಬೇತಿ ಪಡೆದವರಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯೂಯಾರ್ಕ್ ನಲ್ಲೇ ನಿಮ್ಮ ಬುಡ ಗಟ್ಟಿ ಇಲ್ಲ; ಇನ್ನು ನಮ್ಮ ದೇಶದ ಅಧಿಕಾರ ಬದಲಾಯಿಸ್ತೀರಾ?: ಟ್ರಂಪ್ ಬಗ್ಗೆ ಇರಾನ್ ಅಪಹಾಸ್ಯ!

ಕೇಂದ್ರದಿಂದ ಅಸಹಕಾರ, ಮಲತಾಯಿ ಧೋರಣೆ, ಆದರೂ ವಿತ್ತೀಯ ಶಿಸ್ತು ಪಾಲನೆ: CM ಸಿದ್ದರಾಮಯ್ಯ

ಯುದ್ಧ ಕೊನೆಗೊಳಿಸಲು ಕೆಲವು ರಾಷ್ಟ್ರಗಳು 'ಮಧ್ಯಸ್ಥಿಕೆ' ಬಯಸುತ್ತಿವೆ: ಭೀಕರ ದಾಳಿಗಳ ನಡುವೆ ಇರಾನ್ ಅಧ್ಯಕ್ಷರ ಸ್ಫೋಟಕ ಹೇಳಿಕೆ!

ಸುಖೋಯ್ ವಿಮಾನ ದುರಂತ: Op Sindoor ನಲ್ಲಿ ಪಾಕ್ ಗೆ ನಡುಕ ಹುಟ್ಟಿಸಿದ್ದ ಹುತಾತ್ಮ ಪೈಲಟ್ Purvesh Duragkar

ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ: ಕಾಂಗ್ರೆಸ್ ಸಂಸದರಿಗೆ ವಿಪ್ ಜಾರಿ; ಕಡ್ಡಾಯ ಹಾಜರಿಗೆ ಸೂಚನೆ

SCROLL FOR NEXT