ಸಾಂದರ್ಭಿಕ ಚಿತ್ರ 
ರಾಜ್ಯ

ಟೊಮೊಟೊ ದರ ಏಕಾಏಕಿ ಇಳಿಕೆ: ಸಂಕಷ್ಟದಲ್ಲಿ ಬೆಳೆಗಾರರು; ಬೆಂಬಲ ಬೆಲೆ ನೀಡುವಂತೆ ಆಗ್ರಹ

ಮಹಾರಾಷ್ಟ್ರ, ಒಡಿಶಾ ಮತ್ತು ತಮಿಳುನಾಡು ರಾಜ್ಯಗಳಿಗೆ ಕೋಲಾರದಿಂದ ಹೋಗುತ್ತಿದ್ದ ಟೊಮೇಟೊ ಪೂರೈಕೆಯ ಪ್ರಮಾಣ ತೀರಾ ಕುಸಿದಿದೆ. ಈ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಹೆಚ್ಚುವರಿ ಸಂಗ್ರಹ ಉಂಟಾಗಿದೆ.

ಬೆಂಗಳೂರು: ಏಷ್ಯಾದ ಅತೀ ದೊಡ್ಡ ಟೊಮೇಟೊ ಮಾರುಕಟ್ಟೆಗಳಲ್ಲಿ ಒಂದಾದ ನಮ್ಮ ರಾಜ್ಯದ ಕೋಲಾರ ಮಾರುಕಟ್ಟೆಯಲ್ಲಿ ಬೆಲೆಯ ಏರಿಳಿತ ಸಾಮಾನ್ಯವಾದರೂ, ಈ ಬಾರಿಯ ತೀವ್ರ ಬೆಲೆ ಕುಸಿತ ರೈತರನ್ನು ಹೆಚ್ಚು ಸಂಕಷ್ಟಕ್ಕೆ ತಳ್ಳಿದೆ.

ಮಹಾರಾಷ್ಟ್ರ, ಒಡಿಶಾ ಮತ್ತು ತಮಿಳುನಾಡು ರಾಜ್ಯಗಳಿಗೆ ಕೋಲಾರದಿಂದ ಹೋಗುತ್ತಿದ್ದ ಟೊಮೇಟೊ ಪೂರೈಕೆಯ ಪ್ರಮಾಣ ತೀರಾ ಕುಸಿದಿದೆ. ಈ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಹೆಚ್ಚುವರಿ ಸಂಗ್ರಹ ಉಂಟಾಗಿದೆ. ಸ್ಥಳೀಯ ಉತ್ಪಾದನೆ ಹೆಚ್ಚಾಗಿರುವುದು ಮತ್ತು ಬೇಡಿಕೆ ಕಡಿಮೆಯಾಗಿರುವುದು ಕೋಲಾರ ಮಾರುಕಟ್ಟೆಯ ಮೇಲೆ ಪರಿಣಾಮ ಬೀರಿದೆ. ಇದು ಮಾರುಕಟ್ಟೆಯಲ್ಲಿ ಬೆಲೆ ಕುಸಿಯಲು ಪ್ರಮುಖ ಕಾರಣವಾಗಿದೆ.

ಚಿಕ್ಕಬಳ್ಳಾಪುರ ಎಪಿಎಂಸಿ ಮಾರುಕಟ್ಟೆಯಲ್ಲಿ 15 ಕೆ.ಜಿ ಟೊಮ್ಯಾಟೊ ಬಾಕ್ಸ್ ಕೇವಲ 110 ರೂಪಾಯಿಗೆ ಮಾರಾಟವಾಗುತ್ತಿದ್ದು ರೈತರು ಕಂಗಾಲಾಗಿದ್ದಾರೆ. ಅಂತರ್ ರಾಜ್ಯಗಳಲ್ಲಿ ಬೇಡಿಕೆ ಕಡಿಮೆಯಾದ ಹಿನ್ನೆಲೆ ಬೆಲೆ ಇಳಿಕೆ ಕಂಡಿದ್ದು, ಮತ್ತೊಂದೆಡೆ ಚಿಲ್ಲರೆ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು 5 ಕೆ.ಜಿ ಟೊಮ್ಯಾಟೊವನ್ನು 100 ರೂಪಾಯಿಗೆ ಮಾರಾಟ ಮಾಡುತ್ತಿದ್ದಾರೆ. ಗ್ರಾಹಕರಿಗೆ ಸಿಹಿಯಾಗಿರುವ ಬೆಲೆ ಕುಸಿತ ರೈತರಿಗೆ ಮಾತ್ರ ಕಹಿಯಾಗಿದೆ. ರೈತರು ಟೊಮ್ಯಾಟೊಗೂ ಬೆಂಬಲ ಬೆಲೆ ನೀಡುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಗೊಬ್ಬರ, ಕೂಲಿ ಸೇರಿದಂತೆ ಎಕರೆಗೆ 80 ಸಾವಿರಕ್ಕೂ ಹೆಚ್ಚು ವೆಚ್ಚವಾಗಿ ದ್ದರೂ, ಮಾರುಕಟ್ಟೆಯಲ್ಲಿ ಟೊಮೇಟೊ ಧಾರಣೆ ಪಾತಾಳಕ್ಕೆ ಕುಸಿದಿದೆ. ಪ್ರತಿದಿನ ಬೆಲೆ ಕುಸಿಯುತ್ತಿರುವುದರಿಂದ ಲಾಭದ ನಿರೀಕ್ಷೆಯಲ್ಲಿದ್ದ ರೈತರು ಭಾರೀ ನಿರಾಶೆಗೊಳಗಾಗಿ ದ್ದಾರೆ. ಕೋಲಾರದಲ್ಲಿ ಕಳೆದ ತಿಂಗಳು 15 ಕೆ.ಜಿ ಬಾಕ್ಸ್‌ಗೆ ರು.300-400 ಇದ್ದ ದರವು ಇದೀಗ ಏಕಾಏಕಿ 50-130 ರು.ಗೆ ಕುಸಿತ ಕಂಡಿದೆ.

ಬೆಂಗಳೂರು ಮಾರುಕಟ್ಟೆಯಲ್ಲಿ 13 ಕೆ.ಜಿ ಬಾಕ್ಸ್‌ಗೆ 300-350 ಇದ್ದ ಬೆಲೆಯು ಇದೀಗ 80-120 ರು.ಗೆ ಕುಸಿತ ಕಂಡಿದೆ. ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳ ಟೊಮೇಟೊ ಬೆಳೆಯುವ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಅಸಹ್ಯ, ಅತಿರೇಕ.. ನಿಮ್ಮನ್ನು ಈ ರೀತಿ ನೋಡಲು ಇಚ್ಛಿಸುವುದಿಲ್ಲ, BiggBoss ಶೋ ಬಿಟ್ಟು ಹೊರಬನ್ನಿ': Kichcha Sudeepಗೆ ಪತ್ರ