ಹಲ್ಲೆಗೊಳಗಾಗಿರುವ ವಿದ್ಯಾರ್ಥಿಗಳು 
ರಾಜ್ಯ

ಬಳ್ಳಾರಿ ವಸತಿ ಶಾಲೆಯಲ್ಲಿ ಅಘಾತಕಾರಿ ಘಟನೆ: ಸಹಪಾಠಿಗಳ ಮೇಲೆ ವಿದ್ಯಾರ್ಥಿ ದಾಳಿ; ಓರ್ವ ಸಾವು, 7 ಮಂದಿ ಸ್ಥಿತಿ ಗಂಭೀರ

ರಾತ್ರಿ ಊಟದ ಬಳಿಕ ವಿದ್ಯಾರ್ಥಿಗಳು ಹಾಸ್ಟೆಲ್‌ನಲ್ಲಿ ಮಲಗಿದ್ದರು. ಈ ವೇಳೆ ಆರೋಪಿತ ವಿದ್ಯಾರ್ಥಿ ಮಂಚದ ರಾಡ್, ಸ್ಕ್ರೂ ಡ್ರೈವರ್ ಹಾಗೂ ರೇಡಿಯಮ್ ಕಟರ್, ಚಾಕುವಿನಿಂದ ಸಹಪಾಠಿಗಳ ಮೇಲೆ ದಾಳಿ ನಡೆಸಿದ್ದಾನೆ ಎನ್ನಲಾಗಿದೆ.

ಬಳ್ಳಾರಿ: ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ ದಾಳಿ ಮಾಡಿದ್ದು, ಘಟನೆಯಲ್ಲಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿ, 7 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ನಡೆದಿದೆ.

ಮೃತ ಬಾಲಕನನ್ನು ಆಂಧ್ರ ಪ್ರದೇಶದ ಅದವಾನಿಯ ಹೇಮಂತ್ ಎಂದು ಗುರುತಿಸಲಾಗಿದೆ. ಮೃತದೇಹವನ್ನು ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರಕ್ಕೆ (ವಿಮ್ಸ್) ಮರಣೋತ್ತರ ಪರೀಕ್ಷೆಗಾಗಿ ಕೊಂಡೊಯ್ಯಲಾಗಿದೆ. ಇವರೆಲ್ಲರೂ 9ನೆ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.

ರಾತ್ರಿ ಊಟದ ಬಳಿಕ ವಿದ್ಯಾರ್ಥಿಗಳು ಹಾಸ್ಟೆಲ್‌ನಲ್ಲಿ ಮಲಗಿದ್ದರು. ಈ ವೇಳೆ ಆರೋಪಿತ ವಿದ್ಯಾರ್ಥಿ ಮಂಚದ ರಾಡ್, ಸ್ಕ್ರೂ ಡ್ರೈವರ್ ಹಾಗೂ ರೇಡಿಯಮ್ ಕಟರ್, ಚಾಕುವಿನಿಂದ ಸಹಪಾಠಿಗಳ ಮೇಲೆ ದಾಳಿ ನಡೆಸಿದ್ದಾನೆ ಎನ್ನಲಾಗಿದೆ.

ಬಾಲಕನ ಈ ಹುಚ್ಚಾಟದಿಂದಾಗಿ 8 ಬಾಲಕರಿಗೆ ಗಂಭೀರ ಗಾಯಗೊಂಡಿದ್ದು, ಬಳ್ಳಾರಿ ಬಿಮ್ಸ್ ಮತ್ತು ಟ್ರಾಮ‌ಕೇರ್ ಆಸ್ಪತ್ರೆಗೆ ವಿದ್ಯಾರ್ಥಿಗಳನ್ನು ದಾಖಲು ಮಾಡಲಾಗಿದೆ. ಇದೀಗ ಬಾಲಕನೋರ್ವ ಮೃತಪಟ್ಟಿದ್ದಾನೆ. ಗಾಯಗೊಂಡಿರುವ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ಹಾಸ್ಟೆಲ್‌ನ ವಾರ್ಡನ್‌ ಮೇಲೂ ಬಾಲಕ ಹಲ್ಲೆ ಮಾಡಿದ್ದು ,ಹಲ್ಲೆಯ ಬಳಿಕ ಆತ ಓಡಿ ಹೋಗಿದ್ದಾನೆ ಎನ್ನಲಾಗಿದೆ.

ತಡರಾತ್ರಿ ಈ ಘಟನೆ ನಡೆದಿದ್ದು, ಮಕ್ಕಳ ಪೋಷಕರನ್ನು ಈ ಘಟನೆ ಬೆಚ್ಚಿ ಬೀಳಿಸಿದೆ. ತಡಿಯ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆಪತ್ರಿಕೆ ಸೋರಿಕೆ,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!