ಹೆಚ್ ಡಿ ಕುಮಾರಸ್ವಾಮಿ, ಲಕ್ಷ್ಮಿ ಹೆಬ್ಬಾಳ್ಕರ್  
ರಾಜ್ಯ

'ನಿಮ್ಮ ಮುಖ್ಯಮಂತ್ರಿಗಳಿಗೆ ಸ್ವಲ್ಪ ತಿಳುವಳಿಕೆ ಹೇಳಿ': ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಹೆಚ್.ಡಿ ಕುಮಾರಸ್ವಾಮಿ ಮನವಿ

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಮಾದಹಳ್ಳಿಯ ಶ್ರೀ ಉಕ್ಕಿನಕಂತೆ ಮಠದಲ್ಲಿ ನಡೆದ ಶ್ರೀ ಗುರು ಬೂದಿಸ್ವಾಮಿಗಳ 397ನೇ ಆರಾಧನೆ ಹಾಗೂ 63 ಪ್ರಮಥರ ಪೂಜೆ, ನೂತನ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ, ರಾಜ್ಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಮಠಾಧೀಶರು ಪಾಲ್ಗೊಂಡಿದ್ದರು.

ಹುಣಸೂರು (ಮೈಸೂರು): ನಿನ್ನೆ ಮೈಸೂರಿನ ಹುಣಸೂರಿನ ಧಾರ್ಮಿಕ ಕಾರ್ಯಕ್ರಮವೊಂದರ ವೇದಿಕೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಿಎಂ ಸಿದ್ದರಾಮಯ್ಯ ವಿರುದ್ದ ಅಸಮಾಧಾನವನ್ನು ಬಹಿರಂಗವಾಗಿಯೇ ಹೊರಹಾಕಿದ್ದಾರೆ. ಸಿದ್ದರಾಮಯ್ಯ ಸಂಪುಟದ ಸಚಿವೆಯಾಗಿರುವ ನಿಮ್ಮ ಮುಖ್ಯಮಂತ್ರಿಗಳಿಗೆ ಸ್ವಲ್ಪ ತಿಳುವಳಿಕೆ ಹೇಳಿ ಎಂದು ವಿನಂತಿ ಮಾಡಿಕೊಂಡ ಪ್ರಸಂಗ ನಡೆಯಿತು.

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಮಾದಹಳ್ಳಿಯ ಶ್ರೀ ಉಕ್ಕಿನಕಂತೆ ಮಠದಲ್ಲಿ ನಡೆದ ಶ್ರೀ ಗುರು ಬೂದಿಸ್ವಾಮಿಗಳ 397ನೇ ಆರಾಧನೆ ಹಾಗೂ 63 ಪ್ರಮಥರ ಪೂಜೆ, ನೂತನ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ, ರಾಜ್ಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಮಠಾಧೀಶರು ಪಾಲ್ಗೊಂಡಿದ್ದರು.

ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಬಗ್ಗೆ ಕುಮಾರಸ್ವಾಮಿ ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿದರು. ಸರ್ಕಾರದ ಅಂಕಿಅಂಶಗಳನ್ನು ಬಜೆಟ್ ಪ್ರತಿಯಲ್ಲಿ ಮುದ್ರಿಸಿದರೆ ಅದರಿಂದ ಏನು ಪ್ರಯೋಜನ. ನಾನು ಈ ವಿಷಯದಲ್ಲಿ ರಾಜಕೀಯವನ್ನು ಮಾಡುತ್ತಿಲ್ಲ. ಸರ್ಕಾರದಲ್ಲಿರುವವರು ಜನರ ಆಶೋತ್ತರಗಳನ್ನು ಈಡೇರಿಸುವುದು ಕರ್ತವ್ಯವಲ್ಲವೇ? ಇದೇ ರೀತಿಯಲ್ಲಿ ಸರ್ಕಾರ ನಡೆಸುತ್ತಾ ಬಂದರೆ, ಮುಂದಿನ ದಿನಗಳಲ್ಲಿ ರಾಜ್ಯಕ್ಕೆ ಕರಾಳ ದಿನ ಎದುರಾಗಲಿದೆ ಎನ್ನುವುದನ್ನು ನಾವು ಮರೆಯಬಾರದು ಎಂದು ಎಚ್ಚರಿಕೆಯನ್ನು ನೀಡಿದ್ದಾರೆ. ಈ ಸಂದರ್ಭದಲ್ಲಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೂಡಾ ವೇದಿಕೆಯಲ್ಲಿದ್ದರು.

ವೇದಿಕೆಯಿಂದಲೇ ಸಚಿವೆಗೆ ಕುಮಾರಸ್ವಾಮಿ ವಿನಂತಿ

ನನ್ನ ಸಹೋದರಿ ಲಕ್ಷ್ಮೀ ಹೆಬ್ಬಾಳ್ಕರ್ ಇಲ್ಲೇ ವೇದಿಕೆಯಲ್ಲಿ ಕೂತಿದ್ದಾರೆ, ಅವರಿಗೊಂದು ಮಾತನ್ನು ಹೇಳಲು ಬಯಸುತ್ತೇನೆ. ಮಹಿಳೆಯರಿಗೆ ನಿಮ್ಮ ಇಲಾಖೆಯಿಂದ ಪ್ರತೀ ತಿಂಗಳು ಎರಡು ಸಾವಿರ ರೂಪಾಯಿ ಗೃಹಲಕ್ಷ್ಮೀ ನೀಡುತ್ತಿದ್ದೀರಿ. ಇದಕ್ಕೆ ನನ್ನ ತಕರಾರು ಏನೂ ಇಲ್ಲ, ನನ್ನ ವಿರೋಧವೂ ಇಲ್ಲ. ಮೂರು ವರ್ಷಗಳಿಂದ, ಎಪ್ಪತ್ತರಿಂದ ಎಪ್ಪತ್ತೈದು ಸಾವಿರ ಕೋಟಿ ರೂಪಾಯಿ ನೀಡಿರಬಹುದು. ಆದರೆ, ಇದಕ್ಕೆ ಹಣ ಎಲ್ಲಿಂದ ಹೊಂದಿಸುತ್ತಿದ್ದೀರಿ ನಿಮ್ಮ ಮುಖ್ಯಮಂತ್ರಿಗಳಿಗೆ ತಿಳುವಳಿಕೆಯನ್ನು ಹೇಳಿ ಎಂದು ಕುಮಾರಸ್ವಾಮಿ ಎಂದು ಮನವಿ ಮಾಡಿದ್ದಾರೆ.

ಸಾಲದ ಹಣ ಎಲ್ಲಿಗೆ ಹೋಗುತ್ತಿದೆ?

ಬಂಡವಾಳ ಹೂಡಿಕೆಯಾಗುತ್ತಿಲ್ಲ, ಸರ್ಕಾರಿ ಆಸ್ತಿಗಳು ನಿರ್ಮಾಣಗೊಳ್ಳುತ್ತಿಲ್ಲ, ಆದರೂ ಸಾಲ, ಹಾಗಾದರೆ, ಸಾಲದ ಹಣವೆಲ್ಲಾ ಎಲ್ಲಿಗೆ ಹೋಗುತ್ತಿದೆ? ರಾಜ್ಯದ ಸಾಲ ಈಗ 8.24 ಲಕ್ಷ ಕೋಟಿ ರೂಪಾಯಿ ಬಂದು ನಿಂತಿದೆ. ಸಿಎಂಗೆ ತಿಳುವಳಿಕೆ ಹೇಳದೇ ಇದ್ದಲ್ಲಿ, ರಾಜ್ಯದ ಪರಿಸ್ಥಿತಿ ದಯನೀಯ ಸ್ಥಿತಿಗೆ ಹೋಗಲಿದೆ ಎಂದರು.

ನಾನು ಸಾಲ ಮಾಡದೇ ಸಾಲಮನ್ನಾ ಮಾಡಿದ್ದೇನೆ..

ನಾನು ಕೂಡಾ ಎರಡು ಅವಧಿಯಲ್ಲಿ ಮುಖ್ಯಮಂತ್ರಿ ಆಗಿದ್ದೆ, ನಾನು ಸಾಲಮನ್ನಾ ಮಾಡಿದ್ದೆ. ಸರ್ಕಾರದ ಬೊಕ್ಕಸದಲ್ಲಿ ಹಣವೇ ಇಲ್ಲ, ಸಾಲ ಹೇಗೆ ಮನ್ನಾ ಮಾಡುತ್ತೀರಿ ಎಂದು ಹಲವರು ಕುಹುಕ ಆಡಿದರು. ಆದರೆ, ಎಲ್ಲೂ ಸಾಲ ಮಾಡದೇ ಸಾಲಮನ್ನಾ ಮಾಡಿದ್ದೆ, ಮಾಡಿ ತೋರಿಸಿದ್ದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕುರ್ಚಿ ಕದನಕ್ಕೆ ಕೊನೆಗೂ climax? ಸಿಎಂ ಡಿಸಿಎಂ ಗೆ ಹೈಕಮಾಂಡ್ ಬುಲಾವ್; ರಾಜ್ಯ ರಾಜಕೀಯದಲ್ಲಿ ಸಂಚಲನ!

I Love India, I Love Modi: ಭಾರತ ನನ್ನನ್ನ 100% ನಂಬಬಹುದು- ಡೊನಾಲ್ಡ್ ಟ್ರಂಪ್

ಕದನ ವಿರಾಮ, ಹಾರ್ಮುಜ್ ಜಲಸಂಧಿ ತೆರೆಯಲು ಒಪ್ಪಂದಕ್ಕೆ ಇರಾನ್-ಯುಎಸ್ ಹತ್ತಿರ: 'ಆತುರ ಬೇಡ'- ಟ್ರಂಪ್ ಹೊಸ ವರಸೆ!

ಇರಾನ್-ಅಮೆರಿಕಾ ಕದನ ವಿರಾಮ ನಡುವೆ ಯುಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ; ರಾಜಧಾನಿಗೆ ಅಪ್ಪಳಿಸಿದ ಹೊಸ ಹೈಪರ್ಸಾನಿಕ್ ಕ್ಷಿಪಣಿ; Video

ಎಚ್.ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್‌ಗೆ ಸೇರಿದ Biggboss ಮಾಜಿ ಸ್ಪರ್ಧಿ ಜಾಹ್ನವಿ!

SCROLL FOR NEXT