ನಟ ಜೂನಿಯರ್ ಎನ್'ಟಿಆರ್ 
ರಾಜ್ಯ

ಬೆಂಗಳೂರಿನಲ್ಲಿ ಜೂನಿಯರ್ NTR: ನೆಚ್ಚಿನ ನಟನನ್ನು ನೋಡಲು ಮುಗಿಬಿದ್ದ ಜನ, ಪೊಲೀಸರಿಂದ ಲಾಠಿ ಚಾರ್ಜ್

ಮಹದೇವಪುರದಲ್ಲಿ ಕಿಮ್ಸ್ ಆಸ್ಪತ್ರೆಯನ್ನು ಉದ್ಘಾಟನೆ ಮಾಡಲು ನಟ ಬೆಂಗಳೂರಿಗೆ ಆಗಮಿಸಿದ್ದರು. ಈ ವೇಳೆ ನಟನನ್ನು ನೋಡಲು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಬಂದಿದ್ದಾರೆ.

ಬೆಂಗಳೂರು: ಟಾಲಿವುಡ್ ಖ್ಯಾತ ನಟ ಜೂನಿಯರ್ ಎನ್'ಟಿಆರ್ ಬೆಂಗಳೂರಿಗೆ ಭೇಟಿ ನೀಡಿದ್ದು, ಈ ವೇಳೆ ನೆಚ್ಚಿನ ನಟನನ್ನು ನೋಡಲು ಅಭಿಮಾನಿಗಳು ಮುಗಿಬಿದ್ದ ಘಟನೆ ಭಾನುವಾರ ನಡೆದಿದೆ.

ಮಹದೇವಪುರದಲ್ಲಿ ಕಿಮ್ಸ್ ಆಸ್ಪತ್ರೆಯನ್ನು ಉದ್ಘಾಟನೆ ಮಾಡಲು ನಟ ಬೆಂಗಳೂರಿಗೆ ಆಗಮಿಸಿದ್ದರು. ಈ ವೇಳೆ ನಟನನ್ನು ನೋಡಲು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಬಂದಿದ್ದಾರೆ.

ಈ ವೇಳೆ ಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು. ಬಳಿಕ ನೂಕುನುಗ್ಗಲು ಹೆಚ್ಚಾಗುತ್ತಿದ್ದಂತೆ ಜನರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.‌ ನಂತರ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.

ಇನ್ನು ಸ್ಥಳದಲ್ಲಿ ನೆರೆದಿದ್ದ ಅಭಿಮಾನಗಳು ಸಿಎಂ...ಸಿಎಂ ಎಂದು ಘೋಷಣೆಗಳನ್ನು ಕೂಗಿದರು. ಎನ್‌ಟಿಆರ್‌ ಅವರ ನಂದಮೂರಿ ಕುಟುಂ ಚಿತ್ರರಂಗ ಮತ್ತು ರಾಜಕೀಯದಲ್ಲಿ ಸಕ್ರೀಯರಾಗಿದ್ದಾರೆ. ಅಲ್ಲದೇ ನಂದಮೂರಿ ಕುಟುಂಬದ ಪಕ್ಷವಾದ ಟಿಡಿಪಿ (ತೆಲುಗು ದೇಶಂ ಪಾರ್ಟಿ) ತಾರಾ ಪ್ರಚಾರಕ ಆಗಿದ್ದರು. ಆದರೆ. ಇದೀಗ ಎನ್‌ಟಿಆರ್‌ ರಾಜಕೀಯದಿಂದ ದೂರ ಸರಿದಿದ್ದು, ಅವರ ಅಭಿಮಾನಿಗಳು ಮಾತ್ರ ತಮ್ಮ ಮೆಚ್ಚಿನ ನಟ ರಾಜಕೀಯಕ್ಕೆ ಬರಬೇಕು ಎಂಬ ಆಸೆಯನ್ನು ಪದೇ ಪದೇ ವ್ಯಕ್ತಪಡಿಸುತ್ತಲೇ ಇದ್ದಾರೆ.

ಕನ್ನಡದಲ್ಲಿ ಜ್ಯೂನಿಯರ್‌ ಎನ್‌ಟಿಆರ್‌ ಭಾಷಣ

ಆಸ್ಪತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಕನ್ನಡದಲ್ಲೇ ಭಾಷಣ ಮಾಡಿ ಜೂನಿಯರ್ ಎನ್‌ಟಿಆರ್ ಕನ್ನಡ ನೆಲದ ಬಗ್ಗೆ ಕೊಂಡಾಡಿದರು.

ಎಲ್ಲರಿಗೂ ನಮಸ್ಕಾರ. ಕರ್ನಾಟಕಕ್ಕೆ ನನಗೆ ಬರೋದು ಯಾವಾಗಲೂ ಖುಷಿ. ನಿಮಗೆ ಗೊತ್ತೇ ಇದೆ. ನನ್ನ ತಾಯಿ ಊರು ಕುಂದಾಪುರ. ಬೆಂಗಳೂರು, ಕರ್ನಾಟಕಕ್ಕೆ ಬಂದಾಗ, ನನಗೆ ಅಪ್ಪನ ಮನೆಯಿಂದ ಅಮ್ಮನ ಮನೆಗೆ ಬಂದ ಹಾಗೇ ಇರುತ್ತದೆ. ನನಗೆ ಇದು ಯಾವಾಗಲೂ ಸ್ಪೆಷಲ್‌. ರಜೆಯ ಮಜಾ ಕಳೆಯಲು ಮಕ್ಕಳು ಊರಿಗೆ ಬಂದಂತಹ ಅನುಭವವಾಗುತ್ತದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!