ಸಿಎಂ ಸಿದ್ದರಾಮಯ್ಯ 
ರಾಜ್ಯ

ನೀರಿನ ಸಮಸ್ಯೆ ಬಗ್ಗೆ ಮಕ್ಕಳ ಪತ್ರ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಈ ಪತ್ರಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಬಾರಿಯ ಬಜೆಟ್ ನಲ್ಲಿ ಆ ಸಮಸ್ಯೆ ಪರಿಹಾರಕ್ಕಾಗಿ 490 ಕೋಟಿ ರೂ. ಅನುದಾನವನ್ನು ಮೀಸಲಿಟ್ಟಿದ್ದಾರೆ.

ಬೆಂಗಳೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕೆಂಪಯ್ಯನಹಟ್ಟಿ ಗ್ರಾಮದ ನೀರಿನ‌ ಸಮಸ್ಯೆ ಕುರಿತು ಕೆಲವು ಸಮಯದ ಹಿಂದೆ ಮಕ್ಕಳು ಪತ್ರ ಬರೆದು, ಸಮಸ್ಯೆಗೆ ಪರಿಹಾರ ಕಲ್ಪಿಸಿಕೊಡುವಂತೆ ಮುಖ್ಯಮಂತ್ರಿಗೆ ಪತ್ರ ಬರೆದಿದ್ದರು.

ಈ ಪತ್ರಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಬಾರಿಯ ಬಜೆಟ್ ನಲ್ಲಿ ಆ ಸಮಸ್ಯೆ ಪರಿಹಾರಕ್ಕಾಗಿ 490 ಕೋಟಿ ರೂ. ಅನುದಾನವನ್ನು ಮೀಸಲಿಟ್ಟಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ಹಂಚಿಕೊಂಡಿದ್ದಾರೆ. ಮಕ್ಕಳ ಕೋರಿಕೆಯ ಮೇರೆಗೆ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದಾಗ‌ ಆ ಹಳ್ಳಿಗೆ ಸಮರ್ಪಕ ನೀರಾವರಿ ಯೋಜನೆಯೊಂದರ ಅಗತ್ಯತೆ ಕಂಡುಬಂದ ಹಿನ್ನೆಲೆಯಲ್ಲಿ ಈ ಸಾಲಿನ ಬಜೆಟ್ ನಲ್ಲಿ "ಉಡುತೊರೆಹಳ್ಳ ನೀರಾವರಿ ಯೋಜನೆ"ಯನ್ನು ಘೋಷಿಸಿ, ರೂ.490 ಕೋಟಿ ಅನುದಾನವನ್ನು ಸಹ ಮೀಸಲಿಟ್ಟಿರುವುದಾಗಿ ತಿಳಿಸಿದ್ದಾರೆ.

ಅಹವಾಲು ಸಲ್ಲಿಸಿದ ಮಕ್ಕಳ ಧ್ವನಿ ಎಳೆಯದಾದರೂ, ಅದನ್ನು ಕಡೆಗಣಿಸದೆ ಮುಕ್ತವಾಗಿ‌ ಆಲಿಸಿ, ಸಕಾರಾತ್ಮಕವಾಗಿ ಸ್ಪಂದಿಸುವ ತಾಯಿಯ ಹೃದಯ ನಮ್ಮ ಸರ್ಕಾರದ್ದು. ಪುಟಾಣಿ ಮಕ್ಕಳ‌ ಧನ್ಯವಾದವನ್ನು ಅತ್ಯಂತ ಪ್ರೀತಿಯಿಂದ ಸ್ವೀಕರಿಸಿದ್ದೇನೆ ಎಂದು ಹೇಳಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ನಂಬಿಕೆ, ನನ್ನ ಮತ್ತು ನಮ್ಮ ಸರ್ಕಾರದ ಮೇಲೆ ವಿಶ್ವಾಸವಿಟ್ಟು ತಮ್ಮ ಕಷ್ಟವನ್ನು ನಮ್ಮ ಗಮನಕ್ಕೆ ತಂದು, ಇಂದು ಸಾವಿರಾರು ಕುಟುಂಬಗಳ ಭವಿಷ್ಯ ಬದಲಾಗಲು ಕಾರಣರಾದ ಪುಟಾಣಿಗಳನ್ನು ಮುಖ್ಯಮಂತ್ರಿ ಶ್ಲಾಘಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾವೇರಿ ಕಿಚ್ಚು: ಕರ್ನಾಟಕಕ್ಕೆ ಮತ್ತೆ ಬಿಗ್ ಶಾಕ್‌; ತಮಿಳುನಾಡಿಗೆ ನಿತ್ಯ 12 ಸಾವಿರ ಕ್ಯೂಸೆಕ್ ನೀರು ಬಿಡುವಂತೆ CWRC ಆದೇಶ!

'ನೀ ನನಗೆ ಇಷ್ಟ ಇಲ್ಲ': ಮದುವೆಯಾದ ಮೊದಲ ದಿನವೇ ಪತ್ನಿಗೆ ಶಾಕ್​​ ಕೊಟ್ಟ ಪತಿ; ಪ್ರಭಾವಿ ಸಚಿವರ PAಯಿಂದಲೇ ದೋಖಾ?

'ಮಲ್ಲಿಕಾರ್ಜುನ ಖರ್ಗೆಯಿಂದ ಸದಾ ಒತ್ತಡಕ್ಕೆ ಒಳಗಾಗಿರುತ್ತೇನೆ': ರಾಜ್ಯಸಭೆ ಸಭಾಪತಿ ಸಿಪಿ ರಾಧಾಕೃಷ್ಣನ್

ನೀಟ್ ರದ್ದುಗೊಳಿಸುವಂತೆ ಆಗ್ರಹಿಸಿ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಜಾರ್ಖಂಡ್‌ ಪರೀಕ್ಷೆ ವಿವಾದ: 18ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ: BJPಯಿಂದ ರಾಜ್ಯವ್ಯಾಪಿ ಬಂದ್, ABVP ಕಾರ್ಯಕರ್ತರು ವಶಕ್ಕೆ..!