ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ 
ರಾಜ್ಯ

GBA ಚುನಾವಣೆ: ಐದು ನಗರ ಪಾಲಿಕೆಗಳ ವಾರ್ಡ್ ವಾರು ಪರಿಷ್ಕೃತ ಕರಡು ಮತದಾರರ ಪಟ್ಟಿ ಬಿಡುಗಡೆ; ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

ಜಿಬಿಎ ವ್ಯಾಪ್ತಿಯಲ್ಲಿ ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ ಮತ್ತು ಬೆಂಗಳೂರು ಪಶ್ಚಿಮ ನಗರ ಪಾಲಿಕೆಗಳು ಸೇರಿದಂತೆ ಒಟ್ಟು 05 ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ 369 ವಾರ್ಡಗಳು ರಚನೆಯಾಗಿದೆ.

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನಗರ ಪಾಲಿಕೆಗಳ ವಾರ್ಡ್ ವಾರು ಕರಡು ಮತದಾರರ ಪಟ್ಟಿ ಬಿಡುಗಡೆಯಾಗಿದೆ. ಈ ಪಟ್ಟಿಯಲ್ಲಿ ಒಟ್ಟು 88,92,528 ಮತದಾರರಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ತಿಳಿಸಿದರು.

ಪರಿಷ್ಕೃತ ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನವರಿ 19 ರಂದು ಕರಡು ಮತದಾರರ ಪಟ್ಟಿಯನ್ನು ಬಿಡುಗಡೆಗೊಳಿಸಲಾಗಿತ್ತು. ಅದರಲ್ಲಿದ್ದ ಲೋಪದೋಷಗಳನ್ನು ಸರಿಪಡಿಸಿ, ಮಾರ್ಪಾಡುಗಳು ಮಾಡಿ ಇಂದು ಪರಿಷ್ಕೃತ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ಹೇಳಿದರು.

ಜಿಬಿಎ ವ್ಯಾಪ್ತಿಯಲ್ಲಿ ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ ಮತ್ತು ಬೆಂಗಳೂರು ಪಶ್ಚಿಮ ನಗರ ಪಾಲಿಕೆಗಳು ಸೇರಿದಂತೆ ಒಟ್ಟು 05 ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ 369 ವಾರ್ಡಗಳು ರಚನೆಯಾಗಿದೆ. ಜಿಬಿಎ ನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದಂತೆ ಪರಿಷ್ಕೃತ ಕರಡು ಮತದಾರರ ಪಟ್ಟಿಯಲ್ಲಿ 45,69,752 ಪುರುಷರು, 43,21,143 ಮಹಿಳೆಯರು ಹಾಗೂ 1,635 ಇತರೆ ಮತದಾರರು ಸೇರಿದಂತೆ, ಒಟ್ಟು 88,92,528 ಮತದಾರರು ಇದ್ದು, 8,024 ಮತಟ್ಟೆಗಳು ಬರಲಿವೆ ಎಂದು ವಿವರಿಸಿದರು.

ಜಿಬಿಎ ವ್ಯಾಪ್ತಿಯಲ್ಲಿ ಒಟು 369 ವಾರ್ಡ್ಗಳ ಪೈಕಿ ಬೆಂಗಳೂರು ದಕ್ಷಿಣ ನಗರಪಾಲಿಕೆಯ ವಾರ್ಡ್ ಸಂಖ್ಯೆ 51-ಸುಭ್ರಮಣ್ಯ ಪುರ ಅತಿ ಹೆಚ್ಚು 54,026 ಮತದಾರರನ್ನು ಹೊಂದಿರುತ್ತದೆ. ಬೆಂಗಳೂರು ಪೂರ್ವ ನಗರಪಾಲಿಕೆಯ ವಾರ್ಡ್ ಸಂಖ್ಯೆ 16-ಕೊತ್ತೂರು ಅತಿ ಕಡಿಮೆ 10,940 ಮತದಾರರನ್ನು ಹೊಂದಿರುತ್ತದೆ ಎಂದು ಮಾಹಿತಿ ನೀಡಿದರು.

ಆಕ್ಷೇಪಣೆ ಸಲ್ಲಿಕೆಗೆ ಅವಕಾಶ: ಮತದಾರರ ಪಟ್ಟಿ ಸಿದ್ದಪಡಿಸುವಿಕೆಯ ಕಾರ್ಯಕ್ರಮದ ವೇಳಾ ಪಟ್ಟಿಯಂತೆ ಮಾ. 10 ರಿಂದ ಮಾ. 16 ರವರೆಗೆ ಹಕ್ಕುಗಳು ಮತ್ತು ಆಕ್ಷೇಪಣೆಗಳು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಒಂದು ವೇಳೆ ಪರಿಷ್ಕೃತ ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲವಾಗಿದ್ದಲ್ಲಿ ಅಥವಾ ಮತ್ತೊಂದು ವಾರ್ಡ್ ವ್ಯಾಪ್ತಿಯಲ್ಲಿ ಹೆಸರು ಪ್ರಕಟವಾಗಿದ್ದಲ್ಲಿ ಹಕ್ಕುಗಳು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ.

ವೆಬ್ ಸೈಟ್ ನಲ್ಲಿ ಮತದಾರರ ಪಟ್ಟಿ:

ಮತದಾರರು ವಾರ್ಡವಾರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಆನ್ಲೈನ್ ನಲ್ಲಿ ಎಪಿಕ್ ಸಂಖ್ಯೆ ಅಥವಾ ಅವರ ಹೆಸರಿನ ಮೂಲಕ ಹುಡುಕಲು ವ್ಯವಸ್ಥೆಯನ್ನು ಕಲ್ವಿಸುವ ನಿಟ್ಟಿನಲ್ಲಿ ವಾರ್ಡ್ವಾರು ಪರಿಷ್ಕೃತ ಕರಡು ಮತದಾರರ ಪಟ್ಟಿಯನ್ನು ಜಿಬಿಎಸ ಅಧಿಕೃತ ಜಾಲತಾಣ https://gba.karnataka.gov.in/home ರಲ್ಲಿ ಪಿ.ಡಿ.ಎಫ್. ಆವೃತ್ತಿಯನ್ನು ಅಪ್ಲೋಡ್ ಮಾಡಲಾಗುವುದು. ಸಾರ್ವಜನಿಕರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾದ ಬಗ್ಗೆ ಪರಿಶೀಲಿಸಿಕೊಂಡು ಖಚಿತಪಡಿಸಿಕೊಳ್ಳಬಹುದಾಗಿದೆ.

ನಗರ ಪಾಲಿಕೆವಾರು ಮತದಾರರ ಸಹಾಯವಾಣಿ:

ಮತದಾರರ ಪಟ್ಟಿಗಳ ಪರಿಷ್ಕರಣೆಯ ವೇಳಾಪಟ್ಟಿಯ ಕುರಿತು ವ್ಯಾಪಕ ಪ್ರಚಾರಕ್ಕೆ ಕ್ರಮ ಕೈಗೊಳ್ಳಲಾಗಿದ್ದು, ಕರಡು ಮತದಾರರ ಪಟ್ಟಿಯನ್ನು ರಾಜಕೀಯ ಪಕ್ಷಗಳಿಗೆ ವಿತರಿಸಲಾಗುತ್ತಿದೆ. ಮತದಾರರ ಅನುಕೂಲಕ್ಕಾಗಿ ಐದು ನಗರ ಪಾಲಿಕೆಗಳ ಸಹಾಯವಾಣಿ ಸಂಖ್ಯೆಗಳು ಈ ಕೆಳಗಿನಂತಿವೆ:

1. ಬೆಂಗಳೂರು ಕೇಂದ್ರ : 080-22975803

2. ಬೆಂಗಳೂರು ಉತ್ತರ : 080-22975936

3. ಬೆಂಗಳೂರು ದಕ್ಷಿಣ : 9480685704

4. ಬೆಂಗಳೂರು ಪೂರ್ವ : 9480685706

5. ಬೆಂಗಳೂರು ಪಶ್ಚಿಮ : 9480685703

ಬೂತ್ ಲೆವಲ್ ಏಜೆಂಟ್ (BLA) ನೇಮಕ: ನೋಂದಾಯಿತ ಮತ್ತು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳು ಪ್ರತಿ ವಾರ್ಡಿನ ಪ್ರತಿ ಮತಗಟ್ಟೆಗೆ ಒಬ್ಬರಂತೆ ಬೂತ್ ಲೆವಲ್ ಏಜೆಂಟ್ (BLA) ನೇಮಕಾತಿ ಮಾಡಿ ಮತಗಟ್ಟೆ ಅಧಿಕಾರಿಗಳಿಗೆ ಎಲ್ಲಾ ಅರ್ಹ ಮತದಾರರ ನೋಂದಣಿ ಕಾರ್ಯದಲ್ಲಿ ಸಹಕಾರ ನೀಡಲು ಕೋರಲಾಗಿದೆ.

ಕಛೇರಿಗಳಲ್ಲಿ ಪರಿಶೀಲನೆಗೆ ಅವಕಾಶ: ಮತದಾರರ ಪಟ್ಟಿಯನ್ನು ಮತದಾರರ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗೆ ಮತದಾರರ ನೊಂದಣಾಧಿಕಾರಿಗಳ ಕಛೇರಿ, ವಾರ್ಡ್ ಕಛೇರಿಗಳಲ್ಲಿ ವೀಕ್ಷಣೆಗೆ ಅಥವಾ ಪರಿಶೀಲನೆಗೆ ಅವಕಾಶವನ್ನು ಸಹ ಕಲ್ವಿಸಲಾಗಿರುತ್ತದೆ.

ಧ್ವನಿವರ್ಧಕಗಳ ಮೂಲಕ ಜಾಗೃತಿ: ಘನತ್ಯಾಜ್ಯ ನಿಗಮದ ವತಿಯಿಂದ ಮನೆ ಮನೆ ಕಸ ಸಂಗ್ರಹಣೆ ಮಾಡುವ ಆಟೋಗಳಲ್ಲಿನ ಧ್ವನಿವರ್ಧಕಗಳ ಮುಖೇನ ಪರೀಷ್ಕೃತ ಕರಡು ಮತದಾರರ ಪಟ್ಟಿ ಪ್ರಚುರಪಡಿಸಿರುವ ಕುರಿತು ಪ್ರತಿ ಪಾಲಿಕೆಯಲ್ಲೂ ವ್ಯಾಪಕ ಪ್ರಚಾರ ಮಾಡಲಾಗುವುದು. ಅದರ ಜೊತೆಗೆ ಸಾಮಾಜಿಕ ಜಾಲತಾಣಗಳಾದ ಫೇಸ್ ಬುಕ್ ಮತ್ತು ಎಕ್ಸ್ ಖಾತೆಗಳಲ್ಲಿಯೂಸ ಸಹ ವ್ಯಾಪಕ ಪ್ರಚಾರ ನೀಡಲಾಗುವುದು ಎಂದು ಚುನಾವಣಾಧಿಕಾರಿ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಪ್ರಧಾನಿ ಮೋದಿ ಇಸ್ರೇಲ್ ಮತ್ತು ಇರಾನ್‌ಗೆ ಒಂದು ಫೋನ್ ಕರೆ ಮಾಡಿದ್ರೆ ಯುದ್ಧ ನಿಲ್ಲುತ್ತದೆ': UAE ರಾಯಭಾರಿ ಹುಸೇನ್ ಹಸನ್ ಮಿರ್ಜಾ

ಇರಾನ್ ಶಾಲೆ ಸ್ಪೋಟದಲ್ಲಿ 165 ವಿದ್ಯಾರ್ಥಿನಿಯರನ್ನು ಕೊಂದದ್ದು ಅಮೆರಿಕ! ತನಿಖೆ ವೇಳೆ ಬಹಿರಂಗ

ಸ್ಕೂಟರ್ ನೀಡಲು ನಿರಾಕರಣೆ: ಗೆಳತಿ, ಆಕೆಯ ಪೋಷಕರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿರಾತಕ!

ಇರಾನ್ ಯುದ್ಧ: ಚಿನ್ನದ ಮಾರುಕಟ್ಟೆ ಮೌಲ್ಯ ಭರ್ಜರಿ ಏರಿಕೆ; ಭಾರತ, ಯುಕೆ ಒಟ್ಟು ಜಿಡಿಪಿಯನ್ನೂ ಮೀರಿಸುವ ದೊಡ್ಡ ಆರ್ಥಿಕತೆ!

ಪೋಕ್ಸೋ ಪ್ರಕರಣ: ಮಲ್ಲಿಕಾರ್ಜುನ ಮುತ್ಯಾ ನಿರೀಕ್ಷಣಾ ಜಾಮೀನು ಅರ್ಜಿ ವಜಾ; ಬಂಧನ ಭೀತಿ

SCROLL FOR NEXT