ಮಹಿಳೆ ರಕ್ಷಣೆ ಮಾಡುತ್ತಿರುವುದು. 
ರಾಜ್ಯ

ವಾಕಿಂಗ್ ಹೋಗಿದ್ದಾಗ 25 ಅಡಿ ಆಳದ ಗುಂಡಿಗೆ ಬಿದ್ದ ಮಹಿಳೆ: ಬೆಂಗಳೂರು ಪೊಲೀಸರ ಸಾಹಸ, ಪತ್ತೆ ಮಾಡಿ ರಕ್ಷಿಸಿದ್ದೇ ರೋಚಕ..!

ಸುಧಾ ಪರಿಮಳ (56) ಎಂಬ ಮಹಿಳೆ ಮಾರ್ಚ್ 06ರ ಬೆಳಗಿನ ಜಾವ ನಾಗರಭಾವಿ ಪಾರ್ಕ್ ಸಮೀಪ ನಡೆದುಕೊಂಡು ಹೋಗುತ್ತಿದ್ದಾಗ, ಅಲ್ಲಿ ಅಗೆಯಲಾಗಿದ್ದ ಸುಮಾರು 25 ಅಡಿ ಆಳದ ಬೃಹತ್ ಗುಂಡಿಗೆ ಆಕಸ್ಮಿಕವಾಗಿ ಬಿದ್ದಿದ್ದಾರೆ.

ಬೆಂಗಳೂರು: ಕೆಲವೊಮ್ಮೆ ಅನಿರೀಕ್ಷಿತ ಘಟನೆಗಳು ಸಂಭವಿಸಿಬಿಡುತ್ತವೆ. ನಾವಿಡುವ ಒಂದು ಹೆಜ್ಜೆ ದೊಡ್ಡ ಅಪಾಯಕ್ಕೆ ದಾರಿ ಮಾಡಿಕೊಡುತ್ತದೆ. ಇಂತಹ ಸಂದರ್ಭಗಳಲ್ಲಿ ತಕ್ಷಣ ಸ್ಪಂದಿಸುವ ತುರ್ತು ಸೇವೆಗಳು ಮತ್ತು ಪೊಲೀಸ್ ಸಿಬ್ಬಂದಿಯ ಕಾರ್ಯಕ್ಷಮತೆ ಅನೇಕ ಜೀವಗಳನ್ನು ಉಳಿಸುತ್ತದೆ. ಬೆಂಗಳೂರಿನಲ್ಲಿ ನಡೆದ ಇತ್ತೀಚಿನ ಘಟನೆ ಅದಕ್ಕೆ ಒಂದು ಉತ್ತಮ ಉದಾಹರಣೆಯಾಗಿದೆ.

ಸುಧಾ ಪರಿಮಳ (56) ಎಂಬ ಮಹಿಳೆ ಮಾರ್ಚ್ 06ರ ಬೆಳಗಿನ ಜಾವ ನಾಗರಭಾವಿ ಪಾರ್ಕ್ ಸಮೀಪ ನಡೆದುಕೊಂಡು ಹೋಗುತ್ತಿದ್ದಾಗ, ಅಲ್ಲಿ ಅಗೆಯಲಾಗಿದ್ದ ಸುಮಾರು 25 ಅಡಿ ಆಳದ ಬೃಹತ್ ಗುಂಡಿಗೆ ಆಕಸ್ಮಿಕವಾಗಿ ಬಿದ್ದಿದ್ದಾರೆ.

ಗುಂಡಿ ತೀವ್ರ ಆಳವಾಗಿದ್ದರಿಂದ ಹೊರಬರಲು ಸಾಧ್ಯವಾಗದೆ ಸುಧಾ ಅವರು ಅಲ್ಲಿಯೇ ಪರದಾಡಿದ್ದಾರೆ. ಬೆಳಗಿನ ಜಾವವಾಗಿದ್ದರಿಂದ ಅಲ್ಲಿ ಜನಸಂಚಾರವೂ ವಿರಳವಾಗಿತ್ತು. ಗುಂಡಿಯೊಳಗೆ ಬಿದ್ದ ಆಘಾತದಿಂದ ಸುಧಾ ಅವರು ಅಲ್ಲೇ ಅಸ್ವಸ್ಥರಾಗಿದ್ದರು.

ಇತ್ತ ಸುಧಾ ಅವರು ಸಮಯಕ್ಕೆ ಸರಿಯಾಗಿ ಮನೆಗೆ ಮರಳದಿದ್ದಾಗ ಆತಂಕಗೊಂಡ ಮಗ ಕೂಡಲೇ 112 ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಚಂದ್ರಲೇಔಟ್ ಪೊಲೀಸ್ ಠಾಣೆಯ ಹೊಯ್ಸಳ ಸಿಬ್ಬಂದಿ, ಮಹಿಳೆಯ ಮೊಬೈಲ್ ಲೊಕೇಶನ್ ಟ್ರ್ಯಾಕ್ ಮಾಡಿದ್ದಾರೆ. ಆಗ ಮಹಿಳೆಯ ಮೊಬೈಲ್ ಸಿಗ್ನಲ್ ನಾಗರಭಾವಿ ಪಾರ್ಕ್ ಬಳಿ ತೋರಿಸಿದ್ದು, ತಕ್ಷಣವೇ ಪೊಲೀಸರು ಸ್ಥಳಕ್ಕೆ ಧಾವಿಸಿ ಹುಡುಕಾಟ ನಡೆಸಿದ್ದಾರೆ.

ಈ ವೇಳೆ ಪಾರ್ಕ್ ಬಳಿ ಅಗೆಯಲಾಗಿದ್ದ ಆಳವಾದ ಗುಂಡಿಯೊಳಗೆ ಮಹಿಳೆ ಅಸ್ವಸ್ಥರಾಗಿ ಬಿದ್ದಿರುವುದು ಕಂಡುಬಂದಿದ್ದು, ಕೂಡಲೇ ಪೊಲೀಸರು, ಸ್ಥಳೀಯ ಸಾರ್ವಜನಿಕರ ಸಹಾಯ ಪಡೆದ ಹರಸಾಹಸ ಪಟ್ಟು 25 ಅಡಿ ಆಳದ ಗುಂಡಿಯಿಂದ ಸುಧಾ ಅವರನ್ನು ಮೇಲೆತ್ತಿದ್ದಾರೆ.

ಬಳಿಕ ಸ್ವಸ್ಥರಾಗಿದ್ದ ಸುಧಾ ಅವರನ್ನು ಕೂಡಲೇ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸದ್ಯ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದು, ಪೊಲೀಸರ ರೋಚಕ ಕಾರ್ಯಚರಣೆಗೆ ಕುಟುಂಬದವರು, ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನಗರದ ವೇಗದ ಬದುಕಿನಲ್ಲಿ ಕೆಲವೊಮ್ಮೆ ಇಂತಹ ಘಟನೆಗಳು ಜನರ ಗಮನ ಸೆಳೆಯುತ್ತವೆ. ಆದರೆ, ಈ ಘಟನೆಯ ಮೂಲಕ ಪೊಲೀಸ್ ಇಲಾಖೆ ಮತ್ತು ತುರ್ತು ಸೇವೆಗಳ ಕಾರ್ಯಕ್ಷಮತೆಯ ಮಹತ್ವವನ್ನು ಸಾರಿ ಹೇಳುತ್ತಿದೆ. ಅಪಾಯದ ಕ್ಷಣದಲ್ಲಿ ಸಮಯಕ್ಕೆ ಸರಿಯಾದ ಸಹಾಯ ದೊರೆತರೆ ಒಂದು ಜೀವವನ್ನು ಉಳಿಸುವುದು ಸಾಧ್ಯ ಎಂಬುದಕ್ಕೆ ಈ ಘಟನೆ ಸ್ಪಷ್ಟ ಉದಾಹರಣೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಫೈನಲ್ ಫೈಟ್: ಸಿದ್ದರಾಮಯ್ಯ ಮನವೊಲಿಕೆಗೆ ರಾಹುಲ್ ಗಾಂಧಿ ಯತ್ನ: ಯತೀಂದ್ರಗೆ DCM ಸ್ಥಾನ, ರಾಜ್ಯಸಭೆ ಆಫರ್?

ಪಟ್ಟಕ್ಕಾಗಿ ಫೈನಲ್ ಫೈಟ್: ಮೂರು ಷರತ್ತುಗಳನ್ನು ಹೈಕಮಾಂಡ್ ಮುಂದಿಟ್ಟ ಡಿಕೆಶಿ; CM ಹುದ್ದೆಗಾಗಿ ಬಿಗಿಪಟ್ಟು!

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Mekedatu row: ಕರ್ನಾಟಕದ DPR ತಿರಸ್ಕರಿಸಿ; ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಮನವಿ

ಜನಸಂಖ್ಯಾ ಬದಲಾವಣೆ ಪರಿಶೀಲಿಸಲು ಸರ್ಕಾರದಿಂದ ಉನ್ನತ ಮಟ್ಟದ ಸಮಿತಿ

SCROLL FOR NEXT