ಶೋಭಾ ಕರಂದ್ಲಾಜೆ-ತೇಜಸ್ವಿ ಸೂರ್ಯ 
ರಾಜ್ಯ

ಹೊಟೇಲ್, ರೆಸ್ಟೋರೆಂಟ್ ಗಳಿಗೆ LPG ಸಿಲಿಂಡರ್ ಪೂರೈಕೆ ವ್ಯತ್ಯಯ: ಕೇಂದ್ರ ಸಚಿವರಿಗೆ ತೇಜಸ್ವಿ ಸೂರ್ಯ-ಶೋಭಾ ಕರಂದ್ಲಾಜೆ ಪತ್ರ

ಈ ಸಮಸ್ಯೆಯನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರಲು ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಮನವಿ ಸಲ್ಲಿಸಿದೆ.

ಬೆಂಗಳೂರು: ಮಹಾನಗರ ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಕೊರತೆ ಎದುರಾಗಿ ಹೊಟೇಲ್ ಮತ್ತು ಆತಿಥ್ಯ ವಲಯ ಉದ್ಯಮಕ್ಕೆ ಸಮಸ್ಯೆ ಉಂಟಾಗುವ ಹಿನ್ನೆಲೆಯಲ್ಲಿ ನಗರದ ಹಲವು ಹೋಟೆಲ್‌ಗಳು ಮುಚ್ಚುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಈ ಸಮಸ್ಯೆಯನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರಲು ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಮನವಿ ಸಲ್ಲಿಸಿದೆ. ಈ ಕುರಿತು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಕೇಂದ್ರ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಪ್ರತ್ಯೇಕವಾಗಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರಾದ ಹರ್ದೀಪ್ ಸಿಂಗ್ ಪುರಿಗೆ ಪತ್ರ ಬರೆದಿದ್ದಾರೆ.

ಹೊಟೇಲ್ ಉದ್ಯಮ ಅವಶ್ಯಕ

ಹೊಟೇಲ್ ಹಾಗೂ ಆತಿಥ್ಯ ಕ್ಷೇತ್ರಕ್ಕೆ ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸುವಂತೆ ಮನವಿ ಮಾಡಿ ಟ್ವೀಟ್ ಮಾಡಿರುವ ಸಂಸದ ಸೂರ್ಯ, ಹೊಟೇಲ್ ಮತ್ತು ರೆಸ್ಟೋರೆಂಟ್ ಕ್ಷೇತ್ರವು ದಿನನಿತ್ಯದ ಅಡುಗೆ ಕಾರ್ಯಗಳಿಗೆ ಬಹುಪಾಲು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಮೇಲೆಯೇ ಅವಲಂಬಿತವಾಗಿದೆ. ಪಿಎನ್‌ಜಿ ಸಂಪರ್ಕ ಅಥವಾ ವಿದ್ಯುತ್ ಆಧಾರಿತ ಅಡುಗೆ ವ್ಯವಸ್ಥೆಗಳು ಇನ್ನೂ ವ್ಯಾಪಕವಾಗಿ ಲಭ್ಯವಿಲ್ಲದ ಕಾರಣ ಎಲ್‌ಪಿಜಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾದರೆ ಹೋಟೆಲ್ ಉದ್ಯಮ, ಉದ್ಯೋಗ ಹಾಗೂ ಗ್ರಾಹಕರ ಸೇವೆಗಳ ಮೇಲೆ ನೇರ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಹರ್ದೀಪ್ ಸಿಂಗ್ ಪುರಿಯನ್ನು ಭೇಟಿ ಮಾಡಲಿರುವ ಸಚಿವೆ ಶೋಭಾ ಕರಂದ್ಲಾಜೆ

ಕೇಂದ್ರ ಕೃಷಿ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಕೂಡ ಈ ವಿಷಯವನ್ನು ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಗಮನಕ್ಕೆ ತಂದಿದ್ದಾರೆ. ಬೆಂಗಳೂರಿನ ಹೊಟೇಲ್ ಅಸೋಸಿಯೇಷನ್ ಎದುರಿಸುತ್ತಿರುವ ಸಮಸ್ಯೆಯ ಕುರಿತು ಅವರು ಪತ್ರ ಬರೆದು ಮನವಿ ಮಾಡಿದ್ದಾರೆ. ಅಸೋಸಿಯೇಷನ್ ನೀಡಿದ ಮನವಿ ಪತ್ರವನ್ನೂ ಸಚಿವರಿಗೆ ರವಾನಿಸಿದ್ದಾರೆ.

ಇಂದು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರನ್ನು ನೇರವಾಗಿ ಭೇಟಿ ಮಾಡಿ ಸಮಸ್ಯೆಗೆ ಪರಿಹಾರ ಕಂಡುಹಿಡಿಯುವ ಕುರಿತು ಚರ್ಚೆ ನಡೆಸುವುದಾಗಿ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ