ಸಂಗ್ರಹ ಚಿತ್ರ 
ರಾಜ್ಯ

ತಿಂಗಳಿಗೆ 30 ಹೆರಿಗೆ ಮಾನದಂಡ: 230 ಸಮುದಾಯ ಆರೋಗ್ಯ ಕೇಂದ್ರ ಬಂದ್'ಗೆ ಸರ್ಕಾರ ಮುಂದು; ಪ್ರತಿಪಕ್ಷಗಳು ತೀವ್ರ ಕಿಡಿ

ತಿಂಗಳಿಗೆ 30 ಪ್ರಸವ ಪ್ರಕರಣಗಳು ದಾಖಲಾಗದ ಸಮುದಾಯ ಆರೋಗ್ಯ ಕೇಂದ್ರಗಳನ್ನು ಮುಚ್ಚುವ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದ್ದು, ಈ ಕೇಂದ್ರಗಳ ಸಿಬ್ಬಂದಿಯನ್ನು ತಾಲ್ಲೂಕು ಆಸ್ಪತ್ರೆಗಳಿಗೆ ವರ್ಗಾಯಿಸುತ್ತಿದೆ.

ಬೆಂಗಳೂರು: ರಾಜ್ಯದಲ್ಲಿ 270 ಸಮುದಾಯ ಆರೋಗ್ಯ ಕೇಂದ್ರಗಳನ್ನು ಬಂದ್ ಮಾಡುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ವಿರೋಧ ಪಕ್ಷಗಳು ತೀವ್ರವಾಗಿ ಕಿಡಿಕಾರಿವೆ.

ವಿಧಾನಸಭೆಯಲ್ಲಿ ಈ ವಿಚಾರ ಪ್ರಸ್ತಾಪಿಸಿದ ಜೆಡಿಎಸ್ ಶಾಸಕಿ ಶಾರದಾ ಪುರ್ಯ ನಾಯಕ್ ಅವರು, ತಿಂಗಳಿಗೆ 30 ಪ್ರಸವ ಪ್ರಕರಣಗಳು ದಾಖಲಾಗದ ಸಮುದಾಯ ಆರೋಗ್ಯ ಕೇಂದ್ರಗಳನ್ನು ಮುಚ್ಚುವ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದ್ದು, ಈ ಕೇಂದ್ರಗಳ ಸಿಬ್ಬಂದಿಯನ್ನು ತಾಲ್ಲೂಕು ಆಸ್ಪತ್ರೆಗಳಿಗೆ ವರ್ಗಾಯಿಸುತ್ತಿದೆ ಎಂದು ಹೇಳಿದರು.

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮಾತನಾಡಿ, ಆಸ್ಪತ್ರೆಗಳನ್ನು ಮುಚ್ಚಿದರೆ ಜನರು ಸರ್ಕಾರದ ವಿರುದ್ಧ ದಂಗೆ ಏಳುತ್ತಾರೆಂದು ಎಚ್ಚರಿಸಿದರು.

ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಕೂಡ ಈ ವಿಷಯದಲ್ಲಿ ಸರ್ಕಾರ ಕ್ರಮ ಕೈಗೊಳ್ಳದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.

ಈ ವೇಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅನುಪಸ್ಥಿತಿಯಲ್ಲಿ, ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್ ಅವರು ಸರ್ಕಾರವನ್ನು ಸಮರ್ಥಿಸಿಕೊಳ್ಳಲು ಪ್ರಯತ್ನಿಸಿದರು, ಆದರೆ, ಪ್ರಯತ್ನ ವ್ಯರ್ಥವಾಯಿತು.

ಶೀಘ್ರದಲ್ಲೇ ರೈತರಿಗೆ ಭೂಮಿ: ಡಿಕೆ.ಶಿವಕುಮಾರ್

ಇದೇ ವೇಳೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಮಾತನಾಡಿ, ಯಲಹಂಕ ಪ್ರದೇಶದಲ್ಲಿ ಡಾ.ಶಿವರಾಮ್ ಕಾರಂತ್ ಲೇಔಟ್‌ಗಾಗಿ ತಮ್ಮ ಭೂಮಿ ನೀಡಿದ ರೈತರಿಗೆ ಶೀಘ್ರದಲ್ಲೇ ಸೈಟ್‌ಗಳನ್ನು ನೀಡಲಾಗುತ್ತದೆ ಎಂದು ಹೇಳಿದರು.

ಯಲಹಂಕ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಿವಕುಮಾರ್, ನ್ಯಾಯಾಲಯವು ನಿವೇಶನ ಹಂಚಿಕೆಗೆ ಅನುಮತಿ ನೀಡದ ಕಾರಣ ಸರ್ಕಾರ ಪ್ರತಿ ವರ್ಷ 1,000 ಕೋಟಿ ರೂ.ಗಳನ್ನು ಕಳೆದುಕೊಳ್ಳುತ್ತಿದೆ ಎಂದು ಹೇಳಿದರು. ಶೀಘ್ರದಲ್ಲೇ ರೈತರಿಗೆ 9,600 ನಿವೇಶನಗಳನ್ನು ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇನ್ನೊಂದೆಡೆ ತೆಂಗು ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಮುಖ್ಯಮಂತ್ರಿ ಕೇವಲ 10 ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದಾರೆ ಎಂದು ಹೇಳಿದ ಕಾಂಗ್ರೆಸ್ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರು, ಅದನ್ನು 100 ಕೋಟಿ ರೂ.ಗಳಿಗೆ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT