ಅರಣ್ಯ ಸಚಿವ ಈಶ್ವರ ಖಂಡ್ರೆ 
ರಾಜ್ಯ

ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಣಕ್ಕೆ ಪ್ರಥಮ ಆದ್ಯತೆ: 116 ಕಿ.ಮೀ ರೈಲುಹಳಿ ತಡೆಗೋಡೆ ನಿರ್ಮಾಣ- ಈಶ್ವರ್ ಖಂಡ್ರೆ

ಮಳವಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಐದೂವರೆ ಕಿ.ಮೀ. ರೈಲು ಹಳಿ ತಡೆಗೋಡೆಗೆ ಮಂಜೂರಾತಿ ನೀಡಲಾಗಿದ್ದು, 9 ಕೋಟಿ 38 ಲಕ್ಷ ರೂ. ವೆಚ್ಚದಲ್ಲಿ ಕಾಮಗಾರಿ ಆರಂಭವಾಗುತ್ತಿದೆ. ಇದರ ಜೊತೆಯಲ್ಲಿ ಟೆಂಟಕಲ್ ಫೆನ್ಸಿಂಗ್, ಕಂದಕ ನಿರ್ಮಾಣ ಮಾಡುತ್ತಿದ್ದೇವೆ ಎಂದು ಸಚಿವರು ತಿಳಿಸಿದರು.

ಬೆಂಗಳೂರು: ಆನೆಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿರುವುದರ ಜೊತೆಗೆ ಎಕ್ಸ್ ಪ್ರೆಸ್ ಹೆದ್ದಾರಿ ಮೊದಲಾದ ಮೂಲಭೂತ ಕಾಮಗಾರಿಗೆ ಗಜಪಥ ಛಿದ್ರವಾಗಿ ಆನೆ ಹಾವಳಿಯೂ ಹೆಚ್ಚಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ವಿಧಾನಸಭೆಗಿಂದು ತಿಳಿಸಿದ್ದಾರೆ.

ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ಪಿ.ಎಂ. ನರೇಂದ್ರ ಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಆನೆ-ಮಾನವ ಸಂಘರ್ಷ ತಡೆಗಟ್ಟಲು ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ವರ್ಷ 116 ಕಿ.ಮೀ. ರೈಲು ಹಳಿ ತಡೆಗೋಡೆ (ರೈಲ್ವೆ ಬ್ಯಾರಿಕೇಡ್) ಮಂಜೂರು ಮಾಡಿದ್ದು, 201 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗಳು ನಡೆಯುತ್ತಿದ್ದು, ವಿವಿಧ ಹಂತದಲ್ಲಿ ಪ್ರಗತಿಯಲ್ಲಿವೆ ಎಂದು ತಿಳಿಸಿದರು.

ಮಳವಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಐದೂವರೆ ಕಿ.ಮೀ. ರೈಲು ಹಳಿ ತಡೆಗೋಡೆಗೆ ಮಂಜೂರಾತಿ ನೀಡಲಾಗಿದ್ದು, 9 ಕೋಟಿ 38 ಲಕ್ಷ ರೂ. ವೆಚ್ಚದಲ್ಲಿ ಕಾಮಗಾರಿ ಆರಂಭವಾಗುತ್ತಿದೆ. ಇದರ ಜೊತೆಯಲ್ಲಿ ಟೆಂಟಕಲ್ ಫೆನ್ಸಿಂಗ್, ಕಂದಕ ನಿರ್ಮಾಣ ಮಾಡುತ್ತಿದ್ದೇವೆ ಎಂದರು.

ಆನೆಗಳು ನಾಡಿನತ್ತ ಬಂದಾಗ ಮರಳಿ ಕಾಡಿಗೆ ಅಟ್ಟಲು ಆನೆ ಕಾರ್ಯಪಡೆ ಮಾಡಿದ್ದೇವೆ. ಚಿರತೆ ಕಾರ್ಯಪಡೆ ರಚಿಸಿದ್ದೇವೆ. ಡ್ರೋನ್ ಕ್ಯಾಮರಾ ಬಳಸಿಕೊಂಡು ವನ್ಯಜೀವಿಗಳ ಸಂಚಾರದ ಬಗ್ಗೆ ನಿಗಾ ಇಡುತ್ತಿದ್ದೇವೆ. ಹೆಚ್ಚಿನ ರೈಲು ಹಳಿ ತಡೆಗೋಡೆಗೆ ಬೇಡಿಕೆ ಬಂದರೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಉಪ ವಲಯ ಅರಣ್ಯಾಧಿಕಾರಿಗಳ ನೇಮಕಕ್ಕೂ ಕ್ರಮ ಕೈಗೊಳ್ಳಲಾಗುವುದು ಎಂದರು.

ಮಳವಳ್ಳಿಗೆ ಚಿರತೆ ಕಾರ್ಯಪಡೆ ಮತ್ತು ವಾಹನದ ಅವಶ್ಯಕತೆಯನ್ನು ಪೂರೈಸಲು ಸರ್ಕಾರ ಬದ್ಧವಾಗಿದ್ದು, ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಣಕ್ಕೆ ಸರ್ಕಾರ ಪ್ರಥಮ ಆದ್ಯತೆ ನೀಡಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಫೈನಲ್ ನಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ರೋಚಕ ಜಯ, ಮತ್ತೊಂದು ಚಿನ್ನದ ಪದಕ

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

ನೈಟ್ ಶಿಫ್ಟ್ ಮುಗಿಸಿ ಮನೆಗೆ ಮರಳುವಷ್ಟರಲ್ಲಿ ಎದುರಾಯ್ತು ಸಾವು: ತಿರುಪತಿಯ ಫಾರ್ಮಾ ಘಟಕದಲ್ಲಿ ಸಿಡಿದ ಬಾಯ್ಲರ್, ಐವರು ಕಾರ್ಮಿಕರು ಸಾವು!

CNG ರೀಫಿಲ್ ವೇಳೆ ಭೀಕರ ಸ್ಫೋಟ; NH-48ರಲ್ಲಿ ಭಯಾನಕ ಘಟನೆ, ಬದುಕಿದ್ದೇ ಅಚ್ಚರಿ! Video

ಏಷ್ಯನ್ ಗೇಮ್ಸ್ 2026 ಫೈನಲ್: ವೈಭವ್ ಸೂರ್ಯವಂಶಿ ಅಣಕಿಸಿದ ಪಾಕ್ ಸ್ಟಾರ್ ಆಟಗಾರ! ಏನು ಮಾಡಿದ್ರು ಗೊತ್ತಾ? Video