ಸಿದ್ದರಾಮಯ್ಯ  
ರಾಜ್ಯ

ಅಧಿವೇಶನಕ್ಕೆ ಗೈರಾಗುವ ಸಚಿವರನ್ನು ಸಂಪುಟದಿಂದ ಕೈಬಿಡಿ: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕರ ಒತ್ತಾಯ

ಸದನಕ್ಕೆ ಗೈರುಹಾಜರಾಗುವ ಮತ್ತು ಶಾಸಕರ ಅಹವಾಲುಗಳಿಗೆ ಸ್ಪಂದಿಸದ ಸಚಿವರನ್ನು ಸಂಪುಟದಿಂದ ಕೈಬಿಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕರು ಆಗ್ರಹಿಸಿದ್ದಾರೆ

ಬೆಂಗಳೂರು: ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆಯಲ್ಲಿ ಕೆಲವು ಸಚಿವರ ಕಾರ್ಯವೈಖರಿಯ ಬಗ್ಗೆ ಆಡಳಿತ ಪಕ್ಷದ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದು, ನಡೆಯುತ್ತಿರುವ ಶಾಸಕಾಂಗ ಅಧಿವೇಶನಕ್ಕೆ ಗೈರುಹಾಜರಾಗುವುದನ್ನು ಮುಂದುವರಿಸಿದರೆ ಆ ಸಚಿವರನ್ನು ತಮ್ಮ ಸಂಪುಟದಿಂದ ಕೈಬಿಡುವಂತೆ ಕೇಳಿಕೊಂಡಿದ್ದಾರೆ.

ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಕೆಲವು ಸಚಿವರ ಕಾರ್ಯವೈಖರಿಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸದನಕ್ಕೆ ಗೈರುಹಾಜರಾಗುವ ಮತ್ತು ಶಾಸಕರ ಅಹವಾಲುಗಳಿಗೆ ಸ್ಪಂದಿಸದ ಸಚಿವರನ್ನು ಸಂಪುಟದಿಂದ ಕೈಬಿಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕರು ಆಗ್ರಹಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಕ್ಷಮತೆಯ ಮೌಲ್ಯಮಾಪನವಾಗಬೇಕು ಎಂದು ಹಿರಿಯ ಶಾಸಕರು ಈ ಸಂದರ್ಭದಲ್ಲಿ ಒತ್ತಾಯಿಸಿದರು.

ಸಭೆಯಲ್ಲಿ ಮಾತನಾಡಿದ ಶಾಸಕರು, ಅನಿವಾರ್ಯ ಕಾರಣಗಳ ಹೊರತಾಗಿ ಸಚಿವರು ಕಡ್ಡಾಯವಾಗಿ ಸದನದಲ್ಲಿ ಇರಬೇಕೆಂದು ಮುಖ್ಯಮಂತ್ರಿಗಳೇ ಸೂಚಿಸಿದ್ದರೂ, ಅನೇಕ ಸಚಿವರು ಇದನ್ನು ಪಾಲಿಸುತ್ತಿಲ್ಲ ಎಂದು ದೂರಿದ್ದಾರೆ. ಅಲ್ಲದೆ, ತಮ್ಮ ಕ್ಷೇತ್ರಗಳ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡುವಲ್ಲಿ ವಿಳಂಬವಾಗುತ್ತಿದೆ ಎಂದು ಶಾಸಕರು ಅಸಮಾಧಾನ ಹೊರಹಾಕಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ಜಿಎಸ್ಟಿ ಹಂಚಿಕೆಯಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಮತ್ತು ಗ್ಯಾಸ್ ಬೆಲೆ ಏರಿಕೆಯ ವಿಷಯದಲ್ಲಿ ಬಿಜೆಪಿಯನ್ನು ಸದನದಲ್ಲಿ ತರಾಟೆಗೆ ತೆಗೆದುಕೊಳ್ಳುವಂತೆ ಶಾಸಕರಿಗೆ ಸೂಚಿಸಿದರು.

ಸಭೆಯು ಕೆಲವು ನಾಟಕೀಯ ಬೆಳವಣಿಗೆಗಳಿಗೂ ಸಾಕ್ಷಿಯಾಯಿತು. ಅಧಿಕಾರಿಗಳು ಜನಪ್ರತಿನಿಧಿಗಳ ಮಾತಿಗೆ ಬೆಲೆ ನೀಡುತ್ತಿಲ್ಲ ಎಂದು ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ ದೂರಿದರೆ, ಶೃಂಗೇರಿ ಶಾಸಕ ರಾಜೇಗೌಡ ಅವರು ಅಧಿಕಾರಿಗಳ ಪರವಾಗಿ ಮಾತನಾಡಿದರು.

ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ನಾರಾಯಣಸ್ವಾಮಿ ಅವರು ಸಭೆಯಿಂದ ಹೊರನಡೆದರು. ಇದೇ ವೇಳೆ ಬೆಂಗಳೂರಿನ ಶಾಸಕರು ಮುಂಬರುವ ಬಿಬಿಎಂಪಿ ಚುನಾವಣೆ ದೃಷ್ಟಿಯಿಂದ ಪೊಲೀಸ್ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆಗೆ ಒತ್ತಾಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ಸತತ 4ನೇ ಬಾರಿ CNG ದರ ಏರಿಕೆ: ಕೆಜಿಗೆ 2 ರೂ. ಹೆಚ್ಚಳ, ವಾಹನ ಸವಾರರಿಗೆ ಶಾಕ್‌

ಗೃಹಲಕ್ಷ್ಮಿ ಯೋಜನೆಯಲ್ಲಿ 100 ಕೋಟಿ ರೂ.ದುರ್ಬಳಕೆ: ಫಲಾನುಭವಿಗಳ ಮರುಪರಿಶೀಲನೆಗೆ ಸರ್ಕಾರ ಚಿಂತನೆ..!

Main Tera Hero: ರಿರಿಲೀಸ್; ಗರ್ಲ್ ಫ್ರೆಂಡ್ ಗಾಗಿ ಅಭಿಮಾನಿಯ ಡ್ಯಾನ್ಸ್ , ವಿಡಿಯೋ ವೈರಲ್, ವರುಣ್ ಧವನ್ ಹೇಳಿದ್ದೇನು?

ವಿಜಯ್ ಸಿಎಂ ಆಗುತ್ತಿದ್ದಂತೆಯೇ ಆಂಧ್ರದಲ್ಲಿ ಗಂಭೀರವಾದ DCM ಪವನ್ ಕಲ್ಯಾಣ್ ! JSP ಕಾರ್ಯಕರ್ತರಿಗೆ ಖಡಕ್ ಸೂಚನೆ

SCROLL FOR NEXT