ಡಿ.ಕೆ. ಶಿವಕುಮಾರ್ 
ರಾಜ್ಯ

ಅಡುಗೆ ಅನಿಲ ಕೊರತೆ: BJP ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ; ಡಿ.ಕೆ ಶಿವಕುಮಾರ್

ಅಡುಗೆ ಅನಿಲ್ ಸಿಲಿಂಡರ್ ಕೊರತೆಯಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ. ಈ ವಿಚಾರವಾಗಿ ಬಿಜೆಪಿಯ ಯಾವುದೇ ಸಂಸದರು ಬಾಯಿ ಬಿಡುತ್ತಿಲ್ಲ. ಹಳ್ಳಿ ಜನರು, ರೈತರು ಹಾಗೂ ಹೊಟೇಲ್ ಗಳಿಗೆ ಸೌದೆ ಒಲೆ ಬಳಸಲು ಕಟ್ಟಿಗೆ ಬಳಸಿಕೊಳ್ಳಲು ಅವಕಾಶ ನೀಡುವುದಿಲ್ಲ ಎಂದರು.

ಬೆಂಗಳೂರು: ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. ಅಡುಗೆ ಅನಿಲ್ ಸಿಲಿಂಡರ್ ಕೊರತೆಯಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ. ಈ ವಿಚಾರವಾಗಿ ಬಿಜೆಪಿಯ ಯಾವುದೇ ಸಂಸದರು ಬಾಯಿ ಬಿಡುತ್ತಿಲ್ಲ. ಹಳ್ಳಿ ಜನರು, ರೈತರು ಹಾಗೂ ಹೊಟೇಲ್ ಗಳಿಗೆ ಸೌದೆ ಒಲೆ ಬಳಸಲು ಕಟ್ಟಿಗೆ ಬಳಸಿಕೊಳ್ಳಲು ಅವಕಾಶ ನೀಡುವುದಿಲ್ಲ ಎಂದರು.

ಈ ಇಂಧನ ಬೆಲೆ ಏರಿಕೆಯಿಂದ ಜನ ಪರದಾಡುತ್ತಿದ್ದಾರೆ. ಇದರಲ್ಲಿ ರಾಜ್ಯ ಸರ್ಕಾರ ಏನೂ ಮಾಡಲು ಆಗುವುದಿಲ್ಲ. ಕೇಂದ್ರ ಸರ್ಕಾರ ಇದಕ್ಕೆ ಹೊಣೆ. ಕೇಂದ್ರ ಸರ್ಕಾರ ವಿದೇಶಾಂಗ ನೀತಿ ಬಗ್ಗೆ ಸ್ಪಷ್ಟವಾಗಿ ಮಾತನಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವಿಚಾರದಲ್ಲಿ ಕೇಂದ್ರದ ಧೋರಣೆ ಖಂಡನೀಯ. ನಾಗರಕರಿಗೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರ ನೋಡಿಕೊಳ್ಳಬೇಕು. ಮುಂದೆ ಪರಿಸ್ಥಿತಿ ಹೇಗಿರುತ್ತದೆಯೋ ಹೇಗೋ ಈಗಾಗಲೇ ಗ್ಯಾಸ್ ಚಾಲಿತ ಆಟೋ ಬಂದ್ ಆಗಿದ್ದು, ಸಮಸ್ಯೆ ಹೆಚ್ಚುತ್ತಿದೆ" ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: 48 ಗಂಟೆಗಳಲ್ಲಿ ಹೋರ್ಮುಜ್ ಜಲಸಂಧಿ ತೆರೆಯದಿದ್ದರೆ ಇರಾನ್‌ನಲ್ಲಿ ನರಕ ಸೃಷ್ಟಿಸುತ್ತೇವೆ; Trump ಕೊನೇಯ ಎಚ್ಚರಿಕೆ!

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಕಾಂಗ್ರೆಸ್‌ 'ಪ್ರಚೋದನಕಾರಿ' ಹೇಳಿಕೆ; ಭಾರತೀಯರ ಸುರಕ್ಷತೆಗೆ ಅಪಾಯ: ಪ್ರಧಾನಿ ಮೋದಿ

'ನೀವೇನು ಸುರಕ್ಷಿತ ಅಲ್ಲ': ಟ್ರಂಪ್ 48 ಗಂಟೆಗಳ ಕೊನೆ ಎಚ್ಚರಿಕೆ ಬೆನ್ನಲ್ಲೆ CIA Station ಗೆ ಡ್ರೋನ್ ನುಗ್ಗಿಸಿ ಇರಾನ್; 1 ನಿಮಿಷದ ಅಂತರದಲ್ಲಿ 2 ಸ್ಫೋಟ!

Sex Video ಪ್ರಕರಣ: ಡಿಸಿಎಂಗೆ 17 ಬಾರಿ ಕರೆ ಮಾಡಿದ ಸ್ವಯಂ ಘೋಷಿತ 'ದೇವಮಾನವ'; CDR ಬಿಡುಗಡೆ

ಭಾರತದ ರಾಜತಂತ್ರಕ್ಕೆ ಜಗತ್ತೇ ನಿಬ್ಬೆರಗು: ಸಂಘರ್ಷದ ನಡುವೆ ಯಾರಿಗೂ ಸಿಗದ ಸೌಲಭ್ಯ!; Hormuz ದಾಟಿದ 8ನೇ ಹಡಗು; ಇರಾನ್ ನಿಂದ ವಿಶೇಷ ಸಂದೇಶ!

SCROLL FOR NEXT