ಸಿಸಿಎಫ್ ಸೋನಲ್ ವೃಷ್ಣಿ (ಒಳ ಚಿತ್ರದಲ್ಲಿ ಮೃತ ಗಣಪತಿ) 
ರಾಜ್ಯ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಬಲಿ

ಹಾಡಹಗಲೇ ಕಾಫಿ ತೋಟದಲ್ಲಿ ಕಾಡಾನೆ ಕಾಣಿಸಿಕೊಂಡ ಪರಿಣಾಮ ಸ್ಥಳಕ್ಕೆ ಪೊಲೀಸರು, ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಡಿಕೇರಿ: ಇತ್ತೀಚಿಗೆ ಕೊಡಗಿನಲ್ಲಿ ಕಾಡಾನೆ ದಾಳಿ ಹೆಚ್ಚುತ್ತಿದ್ದು, ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪ ಹೈಸ್ಕೂಲ್ ಪೈಸಾರಿಯಲ್ಲಿ ಕಾಫಿ ತೋಟಕ್ಕೆ ತೆರಳಿದ್ದ ಕಾಫಿ ಬೆಳೆಗಾರನ ಮೇಲೆ ಆನೆ ದಾಳಿ ಮಾಡಿದೆ.

ಆನೆ ದಾಳಿಗೊಳಗಾದ ರೈತ ಗಣಪತಿ(49) ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹಾಡಹಗಲೇ ಕಾಫಿ ತೋಟದಲ್ಲಿ ಕಾಡಾನೆ ಕಾಣಿಸಿಕೊಂಡ ಪರಿಣಾಮ ಸ್ಥಳಕ್ಕೆ ಪೊಲೀಸರು, ಅರಣ್ಯ ಅಧಿಕಾರಿಗಳಾದ ಸಿಸಿಎಫ್ ಸೋನಲ್ ವೃಷ್ಣಿ, ಡಿಸಿಎಫ್ ಅಭಿಷೇಕ್ ಮತ್ತು ಇತರ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇತ್ತೀಚಿಗೆ ಕುಶಾಲನಗರ ತಾಲೂಕಿನ ವಾಲ್ನೂರಿನಲ್ಲಿ ನಂಜರಾಯಪಟ್ಟಣ ಗ್ರಾಮ ಪಂಚಾಯತ್​​ ಮಾಜಿ ಸದಸ್ಯೆ ಜಲಜಾಕ್ಷಿ ಎಂಬವರು ಆನೆ ದಾಳಿಯಿಂದ ಮೃತಪಟ್ಟಿದ್ದರು. ಈ ಸಾವು ಮಾಸುವ ಮುನ್ನವೇ ಆನೆ ದಾಳಿಗೆ ಮತ್ತೊಂದು ಬಲಿಯಾಗಿದೆ.

ಕೊಡಗಿನಲ್ಲಿ ಕಳೆದ 12 ದಿನಗಳ ನಡೆದ ಮೂರನೇ ಆನೆ ದಾಳಿ ಇದಾಗಿದ್ದು, ಜಿಲ್ಲೆಯಾದ್ಯಂತ ನೂರಾರು ರೈತರು ತೀವ್ರ ಆಕ್ರೋಶಗೊಂಡಿದ್ದಾರೆ. ಅರಣ್ಯ ಇಲಾಖೆಯ ವಿರುದ್ಧ ಪ್ರತಿಭಟನೆ ನಡೆಸಿ, ವನ್ಯಜೀವಿ ಸಂಘರ್ಷದ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿರುವ ಇಲಾಖೆಯ ವಿರುದ್ಧ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದರು.

ಜಿಲ್ಲೆಯ ಮದೆನಾಡು ಮತ್ತು ವಲ್ನೂರು ವ್ಯಾಪ್ತಿಯಲ್ಲಿ ಇತ್ತೀಚೆಗೆ 19 ವರ್ಷದ ಬಾಲಕಿ ಮತ್ತು 50 ವರ್ಷದ ಮಹಿಳೆ ಸಾವನ್ನಪ್ಪಿದ ನಂತರ 12 ದಿನಗಳಲ್ಲಿ ವರದಿಯಾದ ಮೂರನೇ ಸಾವು ಇದಾಗಿದೆ. ಮೂರು ತಿಂಗಳಲ್ಲಿ ಜಿಲ್ಲೆಯಲ್ಲಿ ಕಾಡಾನೆ ದಾಳಿಯಲ್ಲಿ ಒಟ್ಟು ಐದು ಜನರು ಪ್ರಾಣ ಕಳೆದುಕೊಂಡಿದ್ದು, ಕೊಡಗಿನಾದ್ಯಂತ ಗ್ರಾಮಸ್ಥರು ಮತ್ತು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಜಿಲ್ಲೆಯಾದ್ಯಂತ ರೈತರ ಬೆಂಬಲದೊಂದಿಗೆ ನೂರಾರು ಗ್ರಾಮಸ್ಥರು ಸಿದ್ದಾಪುರದ ಘಟನಾ ಸ್ಥಳದಲ್ಲಿ ಜಮಾಯಿಸಿ ಅರಣ್ಯ ಇಲಾಖೆಯ ವಿರುದ್ಧ ಪ್ರತಿಭಟನೆ ನಡೆಸಿದರು. ವನ್ಯಜೀವಿಗಳು ಗ್ರಾಮಗಳಿಗೆ ನುಗ್ಗುವುದನ್ನು ತಡೆಯುವಲ್ಲಿ ವಿಫಲವಾದ ಅರಣ್ಯ ಇಲಾಖೆಯ ವಿರುದ್ಧ ಎಫ್‌ಐಆರ್ ದಾಖಲಿಸಬೇಕೆಂದು ಆಗ್ರಹಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!

ಅಯೋಧ್ಯೆ ಟ್ರಸ್ಟ್ ಎಸ್‌ಐಟಿ ವರದಿಯನ್ನು ಬಹಿರಂಗ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ತನ್ನ ಕ್ರಿಕೆಟ್ ವೃತ್ತಿ ಜೀವನದಲ್ಲೇ The Best Catch ಹಿಡಿದ ಶುಭಮನ್ ಗಿಲ್: ಅವಕ್ಕಾಗಿ ನಿಂತ ಲಂಕಾ ಬ್ಯಾಟರ್, Video

Jharkhand: ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಭೇಟಿಯಾಗಿ, ನೇಮಕಾತಿ ಪರೀಕ್ಷೆ ವಿವಾದ ಬಗೆಹರಿಸಿ: ಸಿಎಂ ಸೊರೆನ್‌ಗೆ ರಾಹುಲ್ ಗಾಂಧಿ ಮನವಿ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ, ಜೆಡಿಎಸ್ ಬಿಗಿ ಪಟ್ಟು; ವಿಧಾನಸಭೆಯಲ್ಲಿ ತೀವ್ರ ಕೋಲಾಹಲ