ಸಂಗ್ರಹ ಚಿತ್ರ 
ರಾಜ್ಯ

ಅಕ್ರಮ CH ಪೌಡರ್ ದಂಧೆ: ಗಡಿ ಪ್ರದೇಶಗಳ ಮೇಲೆ ಹದ್ದಿನ ಕಣ್ಣು, ಶಾಶ್ವತ ಚೆಕ್ ಪೋಸ್ಟ್ ಸ್ಥಾಪನೆ

ಕಳೆದ ಎರಡು ವರ್ಷಗಳಲ್ಲಿ ಸಿಎಚ್ (ಕ್ಲೋರಲ್ ಹೈಡ್ರೇಟ್ (CH) ಪೌಡರ್) ಪೌಡರ್ ಸಾಗಾಟಕ್ಕೆ ಸಂಬಂಧಿಸಿದಂತೆ ಒಟ್ಟು 1,117 ಪ್ರಕರಣಗಳು ದಾಖಲಾಗಿದ್ದು, 771 ಆರೋಪಿಗಳನ್ನು ಬಂಧಿಸಲಾಗಿದೆ.

ಬೆಂಗಳೂರು: ಗೋವಾ, ತೆಲಂಗಾಣ, ಆಂಧ್ರ ಪ್ರದೇಶ ಸೇರಿದಂತೆ ಹೊರ ರಾಜ್ಯಗಳಿಂದ ಕ್ಲೋರಲ್ ಹೈಡ್ರೇಟ್ (CH) ಪೌಡರ್ ಸರಬರಾಜು ಹಾಗೂ ಸಾಗಾಟವನ್ನು ತಡೆಯಲು ಗಡಿ ಪ್ರದೇಶಗಳಲ್ಲಿ ಶಾಶ್ವತ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ ಎಂದು ಸಚಿವ ಎನ್.ಎಸ್. ಬೋಸರಾಜು ಅವರು ಗುರುವಾರ ಹೇಳಿದ್ದಾರೆ.

ಈ ಕುರಿತು ವಿಧಾನಪರಿಷತ್‌ನಲ್ಲಿ ಮಾಹಿತಿ ನೀಡಿದ ಅವರು, ಕಳೆದ ಎರಡು ವರ್ಷಗಳಲ್ಲಿ ಸಿಎಚ್ (ಕ್ಲೋರಲ್ ಹೈಡ್ರೇಟ್ (CH) ಪೌಡರ್) ಪೌಡರ್ ಸಾಗಾಟಕ್ಕೆ ಸಂಬಂಧಿಸಿದಂತೆ ಒಟ್ಟು 1,117 ಪ್ರಕರಣಗಳು ದಾಖಲಾಗಿದ್ದು, 771 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹೇಳಿದರು.

ಇದೇ ವೇಳೆ 1,498 ಕೆಜಿ ಸಿಎಚ್ ಪೌಡರ್ ಹಾಗೂ 42,927 ಲೀಟರ್ ಸಿಎಚ್ ದ್ರಾವಣವನ್ನು ವಶಪಡಿಸಿಕೊಳ್ಳಲಾಗಿದೆ. ಈ ಅಕ್ರಮ ಸಾಗಾಟದಲ್ಲಿ ಬಳಸುತ್ತಿದ್ದ 609 ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಸಿಎಚ್ ಪೌಡರ್ ಅಕ್ರಮ ಸಾಗಾಟವನ್ನು ತಡೆಯಲು ಅಧಿಕಾರಿಗಳು ಕಟ್ಟುನಿಟ್ಟಿನ ನಿಗಾವಹಿಸಿ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದೂ ಸಚಿವರು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Strait of Hormuz: 'ಹೌದು.. ನಮ್ಮ ಆಪ್ತ ರಾಷ್ಟ್ರ'... ಭಾರತದ ನೌಕೆಗಳಿಗೆ ಅನುಮತಿ ಕುರಿತು ಇರಾನ್ ರಾಯಭಾರಿ ಹೇಳಿಕೆ!

West Asia conflict: ಇರಾನ್ ಉದ್ವಿಗ್ನತೆ ನಡುವೆಯೂ Hormuz ಜಲಸಂಧಿಯಿಂದ ಸುರಕ್ಷಿತವಾಗಿ ಬಂದ ಭಾರತ ಧ್ವಜ ಹೊತ್ತ ಹಡಗು!

Video: 'ನಿಂಗಿದು ಬೇಕಿತ್ತಾ ಮಗನೇ..': ಬಾಲ್ ಕೊಡಲು ಹೋಗಿ ರನೌಟ್ ಆದ ಪಾಕ್ ಮಾಜಿ ನಾಯಕ, ಕೆರಳಿ ಕೆಂಡವಾದ Salman Agha

West Asia conflict: ಮಸ್ಕತ್‌ನಲ್ಲಿ ಡ್ರೋನ್ ದಾಳಿ, ಭಾರತ ಮೂಲದ ಇಬ್ಬರ ಸಾವು

Khamenei ಸತ್ತ... ಉತ್ತರಾಧಿಕಾರಿ ಕಾಲು ಕಟ್.. ಹೊಸ ಸರ್ವಾಧಿಕಾರಿ ಯಾರು? ಇದು ಇರಾನ್ ಗೇ ಗೊತ್ತಿಲ್ಲ!

SCROLL FOR NEXT