ಸಿಎಂ ಸಿದ್ದರಾಮಯ್ಯ 
ರಾಜ್ಯ

ಮೈಸೂರು: ನನ್ನ ಕೊನೆ ಉಸಿರಿರುವವರೆಗೆ ಜನ ಸೇವೆಯಲ್ಲಿ ಸದಾ ತೊಡಗಿರುತ್ತೇನೆ- ಸಿಎಂ ಸಿದ್ದರಾಮಯ್ಯ; Video

ನನ್ನ ರಾಜಕೀಯ ಜೀವನ ಸೋಲು ಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರು: ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ತಿಳಿಸಿದರು.

ವರಕೋಡು ಗಡಿ ಗುರುಮಠ ವರುಣದಲ್ಲಿ ಆಯೋಜಿಸಲಾಗಿದ್ದ ಬೀರೇಶ್ವರಸ್ವಾಮಿ ದೇವಸ್ಥಾನದ ಪುನರ್ ಪ್ರತಿಷ್ಠಾಪನೆ ಕುಂಭಾಭಿಷೇಕ ಹಾಗೂ ಮಹಾದ್ವಾರ ಪೂಜಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ, ನನ್ನ ಗುರುಗಳ ಮಾರ್ಗದರ್ಶನದಿಂದ ಶಿಕ್ಷಣ ಪಡೆದು, ವಕೀಲನಾಗಿ, ರಾಜಕಾರಣಿಯಾಗಿ ಜನರ ಸೇವೆ ಮಾಡುವ ಅವಕಾಶ ದೊರೆತಿದೆ. ನನ್ನ ರಾಜಕೀಯ ಜೀವನ ಸೋಲು ಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದರು.

ನನ್ನ ಕೊನೆ ಉಸಿರುವವರೆಗೆ ಜನ ಸೇವೆಯಲ್ಲಿ ಸದಾ ತೊಡಗಿರುತ್ತೇನೆ. ಯತೀಂದ್ರ ಸಿದ್ದರಾಮಯ್ಯ ಈ ಕ್ಷೇತ್ರದ ಅಭಿವೃದ್ಧಿಗೆ ಸೇವೆ ಸಲ್ಲಿಸುತ್ತಿದ್ದು, ಜನರು ಅವರನ್ನು ಬೆಂಬಲಿಸಬೇಕು ಎಂದರು.ರಾಜ್ಯದ ವಿವಿಧ ಜಾತಿ, ಧರ್ಮ, ವರ್ಗಗಳ ಬಡಜನರಿಗೆ ಅನೇಕ ಭಾಗ್ಯಗಳು ಹಾಗೂ ಗ್ಯಾರಂಟಿ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿದ್ದೇನೆ ಎಂದು ತಿಳಿಸಿದರು.

ಭಕ್ತಿ ಪರಿಶುದ್ಧವಾಗಿರಬೇಕಲ್ಲದೇ, ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ. ದೇವರು ಸರ್ವಾಂತರ್ಯಾಮಿಯಾಗಿದ್ದಾನೆ. ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ. ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಪೂಜಾ ಮಹೋತ್ಸವಗಳು, ಜಾತ್ರೆಗಳಲ್ಲಿ ಜನರು ಸಂತೋಷದಿಂದ ಭಾಗವಹಿಸಿದ್ದಾರೆ. ಶ್ರೀ ಬೀರೇಶ್ವರಸ್ವಾಮಿ , ನಾಡಿನ ಸಮಸ್ತ ಜನತೆಗೆ ಮಂಗಳವನ್ನುಂಟು ಮಾಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು.

1978 ರಲ್ಲಿ ಈ ಪ್ರದೇಶದಿಂದಲೇ ನನ್ನ ರಾಜಕೀಯ ಜೀವನ ಪ್ರಾರಂಭವಾಗಿದ್ದು, ಅಪಾರ ಜನಬೆಂಬಲ ನನಗೆ ದೊರೆತಿದೆ. ಅಲ್ಲಿಂದ ಇಲ್ಲಿಯವರೆಗೆ ಚಾಮುಂಡೇಶ್ವರಿ ಮತ್ತು ವರುಣಾ ಕ್ಷೇತ್ರದ ಜನರು ನನ್ನನ್ನು ಬೆಂಬಲಿಸುತ್ತಲೇ ಬಂದಿದ್ದಾರೆ. ಇಲ್ಲಿನ ಜನರ ಆಶೀರ್ವಾದದಿಂದ ಮುಖ್ಯಮಂತ್ರಿಯಾಗಿ, ಆರ್ಥಿಕ ಸಚಿವನಾಗಿ 17 ಬಾರಿ ಆಯವ್ಯಯಗಳನ್ನು ಮಂಡಿಸುವ ಅವಕಾಶ ದೊರೆತಿದೆ. 13 ಬಾರಿ ಚುನಾವಣೆಗಳನ್ನು ಎದುರಿಸಿದ್ದು, ನಾಲ್ಕು ಬಾರಿ ಸೋತ ಸಂದರ್ಭದಲ್ಲಿಯೂ , ಈ ಭಾಗದ ಜನರು ನನ್ನನ್ನೇ ಬೆಂಬಲಿಸಿದ್ದೇನೆ. ನನ್ನ ರಾಜಕೀಯ ಬದುಕಿಗೆ ಇಲ್ಲಿನ ಜನರ ಕೊಡುಗೆ ಅನನ್ಯವಾಗಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

ಕ್ಷಿಪಣಿ ದಾಳಿ ಆರೋಪ: Iranಗೆ UAE ಶಾಕ್, ಎಲ್ಲಾ ವ್ಯಾಪಾರ-ವಾಣಿಜ್ಯ ವಹಿವಾಟು ಸಂಪೂರ್ಣ ಸ್ಥಗಿತ..!

ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್'ಗೆ VIP ಟ್ರೀಟ್‌ಮೆಂಟ್?: ಕಾನೂನಿನ ಮುಂದೆ ಎಲ್ಲರೂ ಒಂದೇ, ಜೈಲಿನಲ್ಲಿ ಯಾರಿಗೂ ವಿಶೇಷ ಸೌಲಭ್ಯವಿಲ್ಲ; ಸರ್ಕಾರ ಸ್ಪಷ್ಟನೆ