ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಬೆಂಗಳೂರು 
ರಾಜ್ಯ

'ವಿಮಾನದಲ್ಲಿ ಬಾಂಬ್ ಇದ್ದರೆ ನಿಲ್ಲಲ್ವಾ..': ಪಶ್ಚಿಮ ಬಂಗಾಳದ DJ ಹೇಳಿಕೆ; ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಆತಂಕ ಸೃಷ್ಟಿ, ವ್ಯಕ್ತಿ ಬಂಧನ

"ಬಾಂಬ್" ಎಂಬ ಪದದ ಉಲ್ಲೇಖವು ಭದ್ರತಾ ಕಾಳಜಿಯನ್ನು ಹುಟ್ಟುಹಾಕಿತು. ಹೀಗಾಗಿ ಅವರನ್ನು ಬಂಧಿಸಿ ಪೊಲೀಸರಿಗೆ ಹಸ್ತಾಂತರಿಸಲಾಯಿತು.

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಬಾಂಬ್ ಬೆದರಿಕೆ ಹಾಕಿದ ಆರೋಪದ ಮೇಲೆ ಡಿಸ್ಕ್ ಜಾಕಿ (DJ) ಒಬ್ಬರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಪಶ್ಚಿಮ ಬಂಗಾಳ ಮೂಲಕ ಡಿಜೆ ರಜತೇಶ್ ಬೇರಾ ಬಂಧಿತ ವ್ಯಕ್ತಿ. ಮಾರ್ಚ್ 11ರಂದು ಬೆಂಗಳೂರಿನಿಂದ ರಾಯ್‌ಪುರಕ್ಕೆ ಹೋಗಬೇಕಿದ್ದ ಇಂಡಿಗೋ ವಿಮಾನ ಏರಲು ರಜತೇಶ್ ವಿಮಾನ ನಿಲ್ದಾಣಕ್ಕೆ ತಡವಾಗಿ ಬಂದಿದ್ದರು. ಹೀಗಾಗಿ ವಿಮಾನ ನಿಲ್ದಾಣದ ಸಿಬ್ಬಂದಿ ಇವರನ್ನು ಒಳಗೆ ಬಿಡಲು ನಿರಾಕರಿಸಿದಾಗ ಮಾತಿನ ಚಕಮಕಿ ನಡೆಸಿದ್ದಾರೆ.

ವಾಗ್ವಾದ ವೇಳೆ 'ವಿಮಾನದೊಳಗೆ ಬಾಂಬ್ ಇದ್ದರೆ ವಿಮಾನ ನಿಲ್ಲಲ್ವಾ..' ಎಂದು ಅವರು ಹೇಳಿದ್ದಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

"ಬಾಂಬ್" ಎಂಬ ಪದದ ಉಲ್ಲೇಖವು ಭದ್ರತಾ ಕಾಳಜಿಯನ್ನು ಹುಟ್ಟುಹಾಕಿತು. ಹೀಗಾಗಿ ಅವರನ್ನು ಬಂಧಿಸಿ ಪೊಲೀಸರಿಗೆ ಹಸ್ತಾಂತರಿಸಲಾಯಿತು ಎಂದು ಹೇಳಿದ್ದಾರೆ.

ನಂತರ ನಿಯಮಾನುಸಾರ ಬಾಂಬ್ ಬೆದರಿಕೆ ಮೌಲ್ಯಮಾಪನ ಸಮಿತಿಯನ್ನು ರಚಿಸಿ ಹೇಳಿಕೆಯ ಗಂಭೀರತೆಯನ್ನು ಪರಿಶೀಲಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ವಿಮಾನ ಸಿಬ್ಬಂದಿ ನೀಡಿದ ದೂರಿನ ಆಧಾರದಲ್ಲಿ ಭಾರತೀಯ ನ್ಯಾಯ ಸಂಹಿತೆಯ ಕಲಂ 125 (ಇತರರ ಜೀವ ಅಥವಾ ಸುರಕ್ಷತೆಗೆ ಅಪಾಯ ಉಂಟುಮಾಡುವ ಕೃತ್ಯ) ಮತ್ತು 353 (ಸಾರ್ವಜನಿಕ ಅಶಾಂತಿಗೆ ಕಾರಣವಾಗುವ ಹೇಳಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ವಿಚಾರಣೆಯಲ್ಲಿ ವೇಳೆ ವ್ಯಕ್ತಿ ತಂದೆ ಅಸ್ವಸ್ಥರಾಗಿದ್ದರಿಂದ ತುರ್ತಾಗಿ ವಿಮಾನಕ್ಕೆ ಹತ್ತಲು ಪ್ರಯತ್ನಿಸಿದ್ದಾಗಿ ತಿಳಿಸಿದ್ದಾನೆ. ಬಳಿಕ ಆತನಿಗೆ ಜಾಮೀನು ನೀಡಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಭೀಕರ ಅಪಘಾತ: ನಿಯಂತ್ರಣ ತಪ್ಪಿ ಡಿವೈಡರ್‌ ದಾಟಿ SUVಗೆ ಕಾರು ಡಿಕ್ಕಿ, ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ..!

ಇರಾನ್ ಉಸಿರುಗಟ್ಟಿಸಲು ಟ್ರಂಪ್ ಮಾಸ್ಟರ್ ಪ್ಲ್ಯಾನ್: ಆರ್ಥಿಕ 'ಡಿ-ಡೇ’ ಘೋಷಣೆ, ಅಮೆರಿಕ ಹೊಸ ನಿರ್ಬಂಧದಿಂದ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಹೆಚ್ಚಿದ ಆತಂಕ..!

ಸೆಪ್ಟೆಂಬರ್ 11 ರಂದು ದೇಶಾದ್ಯಂತ ಬ್ಯಾಂಕ್ ಮುಷ್ಕರ ಸಾಧ್ಯತೆ

ರಾಹುಲ್ ಗಾಂಧಿ ನಿಲುವಿಗೆ ಉಲ್ಟಾ ಹೊಡೆದರೇ ಡಿಕೆಶಿ? CM ನಿವಾಸಕ್ಕೆ ಅದಾನಿ ಭೇಟಿ; ಕೈ ಪಾಳಯದಲ್ಲಿ ಭುಗಿಲೆದ್ದ ಅಸಮಾಧಾನ..!

KPSC ಹಗರಣ: IAS ಅಧಿಕಾರಿ ಗಂಗ್ವಾರ್ ಮನೆ ಮೇಲೆ ED ದಾಳಿ; ಗೇಟ್ ಲಾಕ್ ಮಾಡಿ ಸೆಕ್ಯೂರಿಟಿ ಹೈಡ್ರಾಮಾ, ಕೀ ಮೇಕರ್ ಕರೆಯಿಸಿ ಬಾಗಿಲು ಮುರಿದ ಅಧಿಕಾರಿಗಳು..!