ಧಾರವಾಡ(ಚಿತ್ರ ಕೃಪೆ - ವರುಣ್ ರಾವ್ ಎಕ್ಸ್ ಪೋಸ್ಟ್) 
ರಾಜ್ಯ

Video: ಧಾರವಾಡ, ದಕ್ಷಿಣ ಕನ್ನಡದಲ್ಲಿ ಆಲಿಕಲ್ಲು ಸಹಿತ ಮಳೆ; ಬಿಸಿಲ ಬೇಗೆಗೆ ತಂಪೆರೆದ ವರುಣ

ಧಾರವಾಡದ ವಿವಿಧ ಭಾಗಗಳಲ್ಲಿ ಇಂದು ಸಂಜೆ ಗುಡುಗು ಸಹಿತ ಭಾರಿ ಮಳೆಯಾಗಿದೆ. ಈ ಮಳೆ ಬಿಸಿಲ ಬೇಗೆಯಿಂದ ಹೈರಾಣಾಗಿದ್ದ ಜನತೆಗೆ ತುಸು ಸಮಾಧಾನ ತಂದಿದೆ.

ಧಾರವಾಡ: ವಿದ್ಯಾಕಾಶಿ ಧಾರವಾಡಲ್ಲಿ ಶನಿವಾರ ಆಲಿಕಲ್ಲು ಸಹಿತ ಭಾರಿ ಮಳೆ ಆಗಿದ್ದು, ಬಿಸಿಲಿನ ಬೇಗೆಯಿಂದ ಬಳಲಿದ್ದ ಜನತೆಗೆ ವರುಣ ತಂಪೆರೆದಿದೆ.

ಧಾರವಾಡದ ವಿವಿಧ ಭಾಗಗಳಲ್ಲಿ ಇಂದು ಸಂಜೆ ಗುಡುಗು ಸಹಿತ ಭಾರಿ ಮಳೆಯಾಗಿದೆ. ಈ ಮಳೆ ಬಿಸಿಲ ಬೇಗೆಯಿಂದ ಹೈರಾಣಾಗಿದ್ದ ಜನತೆಗೆ ತುಸು ಸಮಾಧಾನ ತಂದಿದೆ. ಆದರೆ ಗಾಳಿ ಜೋರಾಗಿ ಬೀಸುತ್ತಿರುವುದರಿಂದ ಮಾವಿನ ಬೆಳೆಗೆ ಈ ಮಳೆ ಕಂಟಕವಾಗಿದೆ.

ಧಾರವಾಡ ನಗರದ ಕರ್ನಾಟಕ ಕಾಲೇಜು(ಕೆಸಿಡಿ) ಮೈದಾನದಲ್ಲಿ ಆಯೋಜಿಸಿದ್ದ ಸಂಸದ ಮಹೋತ್ಸವದ ಕುಸ್ತಿ ಟೂರ್ನಿ ಮಳೆಯಿಂದಾಗಿ ಅರ್ಧಕ್ಕೆ ಸ್ಥಗಿತವಾಗಿದೆ.

ದಕ್ಷಿಣ ಕನ್ನಡದಲ್ಲೂ ಮಳೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ, ಧರ್ಮಸ್ಥಳದಲ್ಲಿ ಇಂದು ಸಂಜೆ ಉತ್ತಮ ಮಳೆಯಾಗಿದ್ದು, ವಾಹನ ಸವಾರರು ಸಂಚರಿಸಲು ಪರದಾಡುವಂತಾಗಿತ್ತು.

ಗುರುವಾಯುನಕರೆ ಪ್ರದೇಶದಲ್ಲಿ ಸಂಜೆ ವೇಳೆ ಮೋಡ ಕವಿದ ವಾತಾವರಣವಿತ್ತು. ಬಳಿಕ ಮಳೆ ಸುರಿದಿದೆ. ಕಾಜೂರು, ಕಿಲ್ಲೂರು ಕಡೆ ಗುಡುಗು ಸಿಡಿಲು ಮಾತ್ರ ಇತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ