ಸಂಗ್ರಹ ಚಿತ್ರ 
ರಾಜ್ಯ

KSRTC: ಯುಗಾದಿ-ರಂಜಾನ್‌ಗೆ 2 ಸಾವಿರ ವಿಶೇಷ ಬಸ್ ವ್ಯವಸ್ಥೆ: ಶೇ.5ರಿಂದ 10ರವರೆಗೆ ರಿಯಾಯಿತಿ!

ಮಾರ್ಚ್‌ 18ರಿಂದ 20ರವರೆಗೆ ಬೆಂಗಳೂರಿನಿಂದ ವಿವಿಧ ಪ್ರದೇಶಗಳಿಗೆ ಹಾಗೂ ಮಾ.22 ರಂದು ವಿವಿಧೆಡೆಯಿಂದ ಬೆಂಗಳೂರಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ.

ಬೆಂಗಳೂರು: ಯುಗಾದಿ ಮತ್ತು ರಂಜಾನ್‌ ಹಬ್ಬಗಳಿಗಾಗಿ ಊರಿಗೆ, ಪ್ರವಾಸಕ್ಕೆ ಹೋಗುವವರ ಸಂಖ್ಯೆ ಹೆಚ್ಚಲಿರುವುದರಿಂದ ಕೆಎಸ್‌ಆರ್‌ಟಿಸಿ 2000 ವಿಶೇಷ ಬಸ್‌ಗಳನ್ನು ರಸ್ತೆಗಿಳಿಸಲು ನಿರ್ಧರಿಸಿದೆ.

ಮಾರ್ಚ್‌ 18ರಿಂದ 20ರವರೆಗೆ ಬೆಂಗಳೂರಿನಿಂದ ವಿವಿಧ ಪ್ರದೇಶಗಳಿಗೆ ಹಾಗೂ ಮಾ.22 ರಂದು ವಿವಿಧೆಡೆಯಿಂದ ಬೆಂಗಳೂರಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ.

ಕೆಂಪೇಗೌಡ ಬಸ್‌ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣಗಳಿಂದ ಬಸ್‌ಗಳು ಸಂಚರಿಸಲಿವೆ. ನಿಗಮದ ಕಾರ್ಯಾಚರಣೆ ವ್ಯಾಪ್ತಿಯ ಎಲ್ಲ ತಾಲೂಕು, ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕೆ ಅನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು.

www.ksrtc.karnataka.gov.in ವೆಬ್‌ಸೈಟ್ ಭೇಟಿ ನೀಡಿ ಇ-ಟಿಕೆಟ್ ಬುಕಿಂಗ್‌ ಅನ್ನು ಮಾಡಬಹುದಾಗಿದೆ. ಪ್ರಯಾಣಿಕರು ಕರ್ನಾಟಕ ಹಾಗೂ ಅಂತಾರಾಜ್ಯದಲ್ಲಿ ಇರುವ ಗಣಕೀಕೃತ ಬುಕಿಂಗ್ ಕೌಂಟರ್‌ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದು.

4 ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್‌ ಕಾಯ್ದಿರಿಸಿದಲ್ಲಿ ಶೇ.5ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ ಮತ್ತು ಬರುವ ಪ್ರಯಾಣದ ಟಿಕೇಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇ.10 ರಿಯಾಯಿತಿ ನೀಡಲಾಗುವುದು ಎಂದು ಕೆಎಸ್‌ಆರ್‌ಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.

ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ, ಹೊರರಾಜ್ಯಗಳ ತಿರುಪತಿ, ವಿಜಯವಾಡ, ಹೈದರಾಬಾದ್ ಸಹಿತ ವಿವಿಧೆಡೆ ವಿಶೇಷ ಬಸ್‌ಗಳು ಸಂಚರಿಸಲಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

2029ರ ಲೋಕಸಭೆ ಚುನಾವಣೆಯಿಂದಲೇ 'ಒಂದು ರಾಷ್ಟ್ರ–ಒಂದು ಚುನಾವಣೆ' ಜಾರಿ ಸಾಧ್ಯತೆ: JPC ಮುಖ್ಯಸ್ಥ ಪಿ.ಪಿ. ಚೌಧರಿ

ಅದ್ಧೂರಿಯಾಗಿ ನಡೆಯಲಿದೆ ಶರ್ಮಿಳಾ ಮಾಂಡ್ರೆ ಮದುವೆ; ದಿನಾಂಕ, ಸ್ಥಳ ಫಿಕ್ಸ್; ಗ್ಲಾಮರಸ್‌ ನಟಿಯ ಮ್ಯಾರೇಜ್ ಎಲ್ಲಿ ಗೊತ್ತಾ?

ನಟ ಪ್ರಕಾಶ್ ರೈಗೆ ಜಾಮೀನು ಮಂಜೂರು; ಬಂಧನ ಭೀತಿಯಿಂದ ಪಾರು!

ಬ್ಯಾಕ್ ಟು ಬ್ಯಾಕ್ ಸರಣಿ ಸೋಲು: ಕೋಚ್ Gautam Gambhir ರೆಕ್ಕೆಪುಕ್ಕ ಕಟ್? BCCI ಮಹತ್ವದ ರೀವ್ಯೂ ಮೀಟಿಂಗ್!

ರಾಕೆಟ್ ಮರು ಬಳಕೆ: SpaceX ಬಳಿಕ ಇದೀಗ ಹೊಸ ಮೈಲುಗಲ್ಲು ತಲುಪಿದ ಚೀನಾ!