ಅಪಘಾತಕ್ಕೊಳಗಾದ ಕಾರು 
ರಾಜ್ಯ

ಚಿತ್ರದುರ್ಗ: ಭೀಕರ ಅಪಘಾತದಲ್ಲಿ ಮೂವರು ಸಬ್ ಇನ್‌ಸ್ಪೆಕ್ಟರ್‌ ಸಾವು; ಇಬ್ಬರಿಗೆ ಗಂಭೀರ ಗಾಯ

ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಮತ್ತು ಲಾರಿಯ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ರಿಸರ್ವ್ ಸಬ್‌ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.

ಚಿತ್ರದುರ್ಗ: ಜಿಲ್ಲೆಯ ಹೆಗ್ಗರೆ ಬಳಿ ನಡೆದ ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಇಂದು ಬೆಳಗ್ಗೆ 7 ಗಂಟೆಗೆ ಅಫಘಾತ ಸಂಭವಿಸಿದೆ. ಬೆಂಗಳೂರಿನಿಂದ ಬಳ್ಳಾರಿಗೆ ಪ್ರಯಾಣಿಸುತ್ತಿದ್ದ ಐದು ಸಬ್ ಇನ್ಸ್‌ಪೆಕ್ಟರ್‌ಗಳ ಕಾರು, ಮುಂದೆ ಚಲಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಎಷ್ಟು ತೀವ್ರವಾಗಿತ್ತೆಂದರೆ ಕಾರು ಸುಮಾರು 300 ಮೀಟರ್‌ಗಳಷ್ಟು ಮುಂದಕ್ಕೆ ಎಳೆದೊಯ್ಯಲ್ಪಟ್ಟಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಮರೇಶ್, ಮಂಜುನಾಥ್ ಮತ್ತು ಸಚಿನ್ ಎಂಬ ಮೂವರು ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಗೊಂಡ ಲಕ್ಷ್ಮಣ್ ಮತ್ತು ಈಶ್ವರ್ ಅವರನ್ನು ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ದಾವಣೆಗೆರೆ ಆಸ್ಪತ್ರೆಗೆ ಶಿಪ್ಟ್ ಮಾಡಲಾಗಿದೆ.

ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಹಿರಿಯೂರು ಡಿವೈಎಸ್‌ಪಿ ಶಿವಕುಮಾರ್ ಮತ್ತು ಇತರ ಹಿರಿಯ ಪೊಲೀಸ್ ಅಧಿಕಾರಿಗಳು ಅಪಘಾತದ ನಂತರ ಸ್ಥಳಕ್ಕೆ ಭೇಟಿ ನೀಡಿದರು.ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ

ಮೂಲಗಳ ಪ್ರಕಾರ, ಈ ಐವರು ಪೊಲೀಸ್ ಅಧಿಕಾರಿಗಳು ಬೆಂಗಳೂರಿನಿಂದ ಬಳ್ಳಾರಿಯಲ್ಲಿ ನಡೆಯಲಿದ್ದ ಸ್ನೇಹಿತರೊಬ್ಬರ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಒಂದೇ ಕಾರಿನಲ್ಲಿ ತೆರಳುತ್ತಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!