ಬಾನು ಮುಷ್ತಾಕ್  
ರಾಜ್ಯ

'ಚಪ್ಪಲಿ ಮನೆ ದೇವರು': ವರದಿಗಾರರೇ.. ಕಪೋಲಕಲ್ಪಿತವಾಗಿ ಬರೆಯಬೇಡಿ, ಪುರಾವೆ ನೀಡಿ- ಬಾನು ಮುಷ್ತಾಕ್

ಅಂಬೇಡ್ಕರ್‌ ಭವನದಲ್ಲಿ, ರಾಜ್ಯ ದಲಿತ ಸಂಘರ್ಷ ಸಮಿತಿ, ಎಂ.ಬಿ.ಶ್ರೀನಿವಾಸ್‌ ಪ್ರತಿಷ್ಠಾಪನದ ವತಿಯಿಂದ ಆಯೋಜಿಸಲಾಗಿದ್ದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿವಿಗಾಗಿ ಜನಜಾಗೃತಿ ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

Banu Mushtaq: ಬೂಕರ್‌ ಪ್ರಶಸ್ತಿ ಪುರಸ್ಕೃತೆ ಸಾಹಿತಿ ಬಾನು ಮುಷ್ತಾಕ್ ಅವರು ಕಾರ್ಯಕ್ರಮವೊಂದರಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್‌. ಅಂಬೇಡ್ಕರ್‌ ಭಾವಚಿತ್ರಕ್ಕೆ ಚಪ್ಪಲಿ ಧರಿಸಿಕೊಂಡು ಪುಷ್ಪ ನಮನ ಸಲ್ಲಿಸಿದ್ದು ಮಾಧ್ಯಮಗಳಲ್ಲಿ ಸುದ್ದಿಯಾದ ನಂತರ ವಿವಾದಕ್ಕೆ ಕಾರಣವಾಗಿದೆ.

ಮಂಡ್ಯದ ಅಂಬೇಡ್ಕರ್ ಭವನದಲ್ಲಿ, ರಾಜ್ಯ ದಲಿತ ಸಂಘರ್ಷ ಸಮಿತಿ, ಎಂ.ಬಿ.ಶ್ರೀನಿವಾಸ್‌ ಪ್ರತಿಷ್ಠಾಪನದ ವತಿಯಿಂದ ಆಯೋಜಿಸಲಾಗಿದ್ದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿವಿಗಾಗಿ ಜನಜಾಗೃತಿ ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

ಈ ವೇಳೆ ಅವರು ಚಪ್ಪಲಿ ಧರಿಸಿಕೊಂಡು ಅಂಬೇಡ್ಕರ್‌ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ್ದಾರೆ. ಭಾನು ಅವರು ಚಪ್ಪಲಿ ಹಾಕಿರುವುದನ್ನು ಗಮನಿಸಿದ ಕಾರ್ಯಕ್ರಮ ಸಂಘಟಕರು, ಚಪ್ಪಲಿಯನ್ನ ತೆಗೆದು ಪುಷ್ಪನಮನ ಮಾಡುವಂತೆ ಹೇಳಿದರು.

ಆದರೆ ಬಾನುಮುಷ್ತಾಕ್‌ ಅದಕ್ಕೆ ಒಪ್ಪದೆ ಹಾಗೆಯೇ ಪುಷ್ಪನಮನ ಸಲ್ಲಿಸಿದ್ದಾರೆ ಎಂದು ವರದಿಯಾಗಿತ್ತು. ಅಲ್ಲದೆ ಚಪ್ಪಲಿ ಹೊಲಿಯುವುದು ನಮ್ಮ ವೃತ್ತಿ. ಅದು ನಮ್ಮ ಮನೆ ದೇವರು. ನಮ್ಮ ಅಸ್ಮಿತೆಯ ಸಂಕೇತ, ನಾವು ಚಪ್ಪಲಿ ಹೊಲಿಯುವವರು. ನಮಗೆ ಅದರ ಬಗ್ಗೆ ಅಪಾರ ಗೌರವ ಇದೆ. ನಾನು ಚಪ್ಪಲಿ ಬಿಚ್ಚುವುದಿಲ್ಲ ಎಂದು ಹೇಳಿದ್ದರು ಎಂದು ಸಹ ಸುದ್ದಿಯಾಗಿದೆ.

ಬಾನು ಮುಷ್ತಾಕ್ ಸ್ಪಷ್ಟನೆ

ಚಪ್ಪಲಿ ಮನೆ ದೇವರು ಎಂದು ನಾನು ಹೇಳಿಲ್ಲ, ಮಾಧ್ಯಮದ ವರದಿಗಾರರು ಕಪೋಲಕಲ್ಪಿತ ವರದಿ ಮಾಡಿದ್ದಾರೆ. ನಾವು ಹಾಗೆ ಹೇಳಿದ್ದರೆ ಪುರಾವೆಗಳನ್ನು ನೀಡಲಿ ಎಂದು ಬಾನು ಮುಷ್ತಾಕ್ ಫೇಸ್ ಬುಕ್ ನಲ್ಲಿ ಸವಾಲು ಹಾಕಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾರ್ವಜನಿಕವಾಗಿ ನನ್ನನ್ನು ಬಂಧಿಸಿ ಅವಮಾನಿಸುವ ಅಗತ್ಯವಿಲ್ಲ: ಪವನ್ ಖೇರಾ, ತೀರ್ಪು ಕಾಯ್ದಿರಿಸಿದ ಸುಪ್ರೀಂ

ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ: ಮಲ್ಲಿಕಾರ್ಜುನ ಖರ್ಗೆ; Video

ಎಲ್ಲಾ ಸರ್ಕಾರಿ ಆಸ್ಪತ್ರೆ ಕಟ್ಟಡಗಳ ಕ್ಷಮತೆ ಪರಿಶೀಲನೆಗೆ ನಿರ್ದೇಶನ: ಭಾರೀ ಮಳೆ ನಿರೀಕ್ಷೆ ಇರಲಿಲ್ಲ, ಇದ್ದಕ್ಕಿದ್ದಂತೆ ಜೋರಾಗಿ ಬಂತು- ಪರಮೇಶ್ವರ್

IPL 2026: ಬ್ಯಾಟಿಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ 'ನಿಜಕ್ಕೂ AI?' ಎಲಾನ್ ಮಸ್ಕ್ ಈ ಮಾಂತ್ರಿಕನನ್ನು ಸೃಷ್ಟಿಸಿದರೇ?

'ನಿಮ್ಮ ಕಾನೂನಿಗೆ ತಿದ್ದುಪಡಿ ತನ್ನಿ': ಅತ್ಯಾಚಾರ ಸಂತ್ರಸ್ತ ಬಾಲಕಿ ಗರ್ಭಪಾತ ತಡೆದ ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ತರಾಟೆ..!

SCROLL FOR NEXT