ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 39.37 ಲಕ್ಷ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಹೊಂದಿದ್ದ ಪ್ರಯಾಣಿಕನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಮಾರ್ಚ್ 14 ರಂದು ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕನನ್ನು ಎನ್‌ಡಿಪಿಎಸ್ ಕಾಯ್ದೆಯಡಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
"ಬ್ಯಾಂಕಾಕ್‌ನಿಂದ ಆಗಮಿಸಿದ ಪ್ರಯಾಣಿಕನನ್ನು ತಡೆದ ಕಸ್ಟಮ್ಸ್ ಅಧಿಕಾರಿಗಳು, ಚೆಕ್-ಇನ್ ಮಾಡಿದ ಬ್ಯಾಗೇಜ್‌ನಲ್ಲಿ ಫೋಟೋ ಫ್ರೇಮ್‌ನೊಳಗೆ ಮರೆಮಾಚಲಾಗಿದ್ದ 1.125 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಇದರ ಮೌಲ್ಯ 39.37 ಲಕ್ಷ ರೂ." ಎಂದು ಬೆಂಗಳೂರು ಕಸ್ಟಮ್ಸ್ 'ಎಕ್ಸ್' ನಲ್ಲಿ ಪೋಸ್ಟ್ ಮಾಡಿದೆ.