ಡಿ.ಕೆ. ಶಿವಕುಮಾರ್ 
ರಾಜ್ಯ

ಅಮನಿ ಕೆರೆ ತೋಟಿ ಏತ ನೀರಾವರಿ ಯೋಜನೆ: ರೈತರಿಗೆ ಶೀಘ್ರದಲ್ಲೆ ಪರಿಹಾರ; ಡಿಸಿಎಂ ಡಿ.ಕೆ ಶಿವಕುಮಾರ್ ಭರವಸೆ

ಕೆಲಸ ಮಾಡಲು ಅವಕಾಶ ಕೊಟ್ಟ ರೈತರು ನೀರನ್ನು ಬಳಸಿಕೊಳ್ಳಲು ಅವಕಾಶ ಮಾಡಿಕೊಡುತ್ತಿಲ್ಲ ಯಾಕೆ? 100 ಮೀಟರ್ ಕೆಲಸ ಬಾಕಿ ಇದೆಯೋ, 500 ಮೀಟರ್ ಕೆಲಸ ಬಾಕಿ ಇದೆಯೋ ಆಕ್ಷೇಪ ವ್ಯಕ್ತಪಡಿಸುತ್ತಿರುವ ರೈತರ ಮನವೊಲಿಸಿ ಕೆಲಸ ಪೂರ್ಣಗೊಳಿಸಲು ಅವಕಾಶ ಕೊಡಿಸಿ.

ಬೆಂಗಳೂರು: ಅಮನಿ ಕೆರೆ ತೋಟಿ ಏತ ನೀರಾವರಿ ಯೋಜನೆಯಲ್ಲಿ ಭೂಮಿ ಕಳೆದುಕೊಂಡ ರೈತರಿಗೆ ಬಾಕಿ ಇರುವ ಪರಿಹಾರದ ಬಗ್ಗೆ ಪರಿಶೀಲನೆ ಮಾಡಿ ಶೀಘ್ರವೇ ಪರಿಹಾರವನ್ನು ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಭರವಸೆ ನೀಡಿದರು.

ವಿಧಾನಸಭೆಯ ಗಮನ ಸೆಳೆವ ಸೂಚನೆ ಮೇಲೆ ನಡೆದ ಚರ್ಚೆ ವೇಳೆ ಶಾಸಕ ಸಿ.ಎಸ್ ಬಾಲಕೃಷ್ಣ ಅವರು ಚನ್ನರಾಯಪಟ್ಟಣ ಅಮನಿ ಕೆರೆ ತೋಟಿ ಏತ ನೀರಾವರಿ ಯೋಜನೆ ಕಾಮಗಾರಿ ಭೂಸ್ವಾಧೀನ ಪರಿಹಾರ ನೀಡದಿರುವುದರಿಂದ ಕಾಮಗಾರಿ ಪ್ರಕ್ರಿಯೆಗೆ ವಿಳಂಬವಾಗುತ್ತಿದೆ ಎಂದು ತಿಳಿಸಿದರು.

ಇದಕ್ಕೆ ಉತ್ತರ ನೀಡಿದ ಜಲಸಂಪನ್ಮೂಲ ಸಚಿವರೂ ಆಗಿರುವ ಶಿವಕುಮಾರ್ ಅವರು, “ಈ ಯೋಜನೆಯಲ್ಲಿ ಪಂಪ್, ಮೋಟಾರ್ ಎಲ್ಲವನ್ನು ಅಳವಡಿಸಲಾಗಿದೆ. ತಾಂತ್ರಿಕ ಕಾರಣಗಳಿಂದ ಸ್ವಾಧೀನಗೊಂಡ ಭೂಮಿಗೆ ಪರಿಹಾರ ಬಾಕಿ ಇದೆ ಎಂದು ಕಾಣುತ್ತದೆ. ಈ ಬಗ್ಗೆ ನಾನು ಪರಿಶೀಲನೆ ಮಾಡಿಸಿ ಹಣ ನೀಡಲಾಗುವುದು. ಕೆಲಸ ಮಾಡಲು ಅವಕಾಶ ಕೊಟ್ಟ ರೈತರು ನೀರನ್ನು ಬಳಸಿಕೊಳ್ಳಲು ಅವಕಾಶ ಮಾಡಿಕೊಡುತ್ತಿಲ್ಲ ಯಾಕೆ?. 100 ಮೀಟರ್ ಕೆಲಸ ಬಾಕಿ ಇದೆಯೋ, 500 ಮೀಟರ್ ಕೆಲಸ ಬಾಕಿ ಇದೆಯೋ ಆಕ್ಷೇಪ ವ್ಯಕ್ತಪಡಿಸುತ್ತಿರುವ ರೈತರ ಮನವೊಲಿಸಿ ಕೆಲಸ ಪೂರ್ಣಗೊಳಿಸಲು ಅವಕಾಶ ಕೊಡಿಸಿ.

ಇಲ್ಲವಾದರೆ ಇದುವರೆಗೂ ಆಗಿರುವ ಕೆಲಸಗಳು ವ್ಯರ್ಥವಾಗುವುದಿಲ್ಲವೇ. ಕಾಮಗಾರಿ ಮಾಡಿ ಭೂಮಿಯಲ್ಲಿ ಪೈಪ್ ಗಳನ್ನು ಅಳವಡಿಸಿದ ಮೇಲೆ ಆ ಭೂ ಮಾಲೀಕರಿಗೆ ಪರಿಹಾರ ನೀಡಲೇಬೇಕು. ಆ ಕೆಲಸ ನಾವು ಮಾಡುತ್ತೇವೆ. ನೀವು ರೈತರಿಗೆ ಮನವೊಲಿಸಿ ಬಾಕಿ ಇರುವ ಕೆಲಸವನ್ನು ಪೂರ್ಣಗೊಳಿಸಲು ಸಹಕರಿಸಿ, ನೀವೇ ಉದ್ಘಾಟನೆ ಮಾಡಿ. ನಂತರ ನಾನು ಬಂದು ಉದ್ಘಾಟನೆ ಮಾಡುವೆ” ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್