ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ 
ರಾಜ್ಯ

ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: NEET ತರಬೇತಿ ನೀಡುವುದಾಗಿ ರಾಜ್ಯ ಸರ್ಕಾರ ಘೋಷಣೆ

ನೀಟ್ ವ್ಯವಸ್ಥೆಯನ್ನು ರದ್ದುಗೊಳಿಸಲು ನಿರ್ಧರಿಸಿದ್ದರೂ, ಸುಪ್ರೀಂ ಕೋರ್ಟ್ ಅದರ ಪರವಾಗಿ ತೀರ್ಪು ನೀಡಿದೆ. ಆದ್ದರಿಂದ, ಗ್ರಾಮೀಣ ವಿದ್ಯಾರ್ಥಿಗಳಿಗೆ ಹೆಚ್ಚು ಪರಿಣಾಮಕಾರಿ ನೀಟ್ ಪರೀಕ್ಷಾ ತರಬೇತಿಯನ್ನು ಒದಗಿಸಲು ಸರ್ಕಾರ ವಿವಿಧ ಕ್ರಮಗಳನ್ನು ತೆಗೆದುಕೊಳ್ಳುತ್ತದೆ.

ಬೆಂಗಳೂರು: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ನೀಟ್ ತರಬೇತಿ ನೀಡುವುದಾಗಿ ವೈದ್ಯಕೀಯ ಶಿಕ್ಷಣ, ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್ ಅವರು ಸೋಮವಾರ ಹೇಳಿದ್ದಾರೆ.

ವಿಧಾನಪರಿಷತ್‌ನಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಕಾಂಗ್ರೆಸ್ ಎಂಎಲ್‌ಸಿ ಐವನ್ ಡಿಸೋಜಾ ಅವರು, ನೀಟ್ ವ್ಯವಸ್ಥೆಯಿಂದ ಗ್ರಾಮೀಣ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆಂದು ಕಳವಳ ವ್ಯಕ್ತಪಡಿಸಿದರು.

ಗ್ರಾಮೀಣ ಬಡ ವಿದ್ಯಾರ್ಥಿಗಳು ರೂ.3 ಲಕ್ಷ ಸಹಾಯದಿಂದ ಕೋಚಿಂಗ್ ಪಡೆಯಲು ಸಾಧ್ಯವೇ ಎಂದು ಪ್ರಶ್ನಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ನೀಟ್ ವ್ಯವಸ್ಥೆಯು ರಾಜ್ಯದ ಸೀಟುಗಳಲ್ಲಿ ಯಾವುದೇ ಕೊರತೆಯನ್ನು ಉಂಟುಮಾಡಿಲ್ಲ ಅಥವಾ ಸೀಟುಗಳ ಸಂಖ್ಯೆಯೂ ಕಡಿಮೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ನೀಟ್ ವ್ಯವಸ್ಥೆಯನ್ನು ರದ್ದುಗೊಳಿಸಲು ನಿರ್ಧರಿಸಿದ್ದರೂ, ಸುಪ್ರೀಂ ಕೋರ್ಟ್ ಅದರ ಪರವಾಗಿ ತೀರ್ಪು ನೀಡಿದೆ. ಆದ್ದರಿಂದ, ಗ್ರಾಮೀಣ ವಿದ್ಯಾರ್ಥಿಗಳಿಗೆ ಹೆಚ್ಚು ಪರಿಣಾಮಕಾರಿ ನೀಟ್ ಪರೀಕ್ಷಾ ತರಬೇತಿಯನ್ನು ಒದಗಿಸಲು ಸರ್ಕಾರ ವಿವಿಧ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಭರವಸೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾತ್ರಿಯಿಡೀ ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್‌ ಭದ್ರತಾ ಮುಖ್ಯಸ್ಥ ಲಾರಿಜಾನಿ ಹತ್ಯೆ

Iris Dena ನಾವಿಕರ ಹತ್ಯೆ: ಡೆಡ್ಲಿ ಪ್ರತೀಕಾರಕ್ಕಾಗಿ ಕಾಯುತ್ತಿದ್ದೇವೆ, ಯಾವಾಗ, ಏನು ಎಂಬ ಗುಟ್ಟು ಬಿಟ್ಟುಕೊಡದ ಇರಾನ್!

'The Kerala Story 2': ಮುಸ್ಲಿಂರ ಬಹಿಷ್ಕಾರಕ್ಕೆ ಹಿಂದೂಗಳ ಪ್ರತಿಜ್ಞೆ! ಕಾಂಗ್ರೆಸ್ ಸಂಸದ ನಾಸಿರ್ ಹುಸೇನ್ ಕಿಡಿ

West Asia conflict: ಬಾಗ್ದಾದ್​ನಲ್ಲಿನ ಅಮೆರಿಕ ರಾಯಭಾರ ಕಚೇರಿ ಮೇಲೆ ಡ್ರೋನ್-ಕ್ಷಿಪಣಿ ದಾಳಿ; ಪರಿಸ್ಥಿತಿ ಮತ್ತಷ್ಟು ಉದ್ವಿಗ್ನ

ಜಾರ್ಖಂಡ್‌: ಬುಡಕಟ್ಟು ದಂಪತಿ, 12 ವರ್ಷದ ಮಗನ ಬರ್ಬರ ಹತ್ಯೆ; ಮಾಟ ಮಂತ್ರಕ್ಕೆ ಬಲಿ ಶಂಕೆ

SCROLL FOR NEXT