ಸಂಗ್ರಹ ಚಿತ್ರ 
ರಾಜ್ಯ

SSLC exam 2026: ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ; 8.65 ಲಕ್ಷ ವಿದ್ಯಾರ್ಥಿಗಳು ನೋಂದಣಿ; All the best

ಸರ್ಕಾರ ಹಾಲ್ ಟಿಕೆಟ್ ತೋರಿಸುವ ಮೂಲಕ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ವಿದ್ಯಾರ್ಥಿಗಳಿಗೆ ಕಲ್ಪಿಸಿದೆ.

ಬೆಂಗಳೂರು: ರಾಜ್ಯಾದ್ಯಂತ ಬುಧವಾರದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಲಿದ್ದು, ಏಪ್ರಿಲ್.2ರವರೆಗೆ ನಡೆಯಲಿದೆ. ಒಟ್ಟು 8,65,988 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿದ್ದಾರೆ.

8,65,988 ವಿದ್ಯಾರ್ಥಿಗಳ ಪೈಕಿ 4,44,172 ಬಾಲಕರು ಮತ್ತು 4,21,816 ಬಾಲಕಿಯರು ಪರೀಕ್ಷೆಗೆ ಹಾಜರಾಗುತ್ತಿದ್ದು., ರಾಜ್ಯದಾದ್ಯಂತ 2,871 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ.

ಪರೀಕ್ಷೆಗಳು ಪ್ರಥಮ ಭಾಷಾ ವಿಷಯದಿಂದ ಆರಂಭವಾಗುತ್ತಿದ್ದು, ಕನ್ನಡ, ತೆಲುಗು, ತಮಿಳು, ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳು ಒಳಗೊಂಡಿವೆ.

ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಭದ್ರತೆ ಒದಗಿಸಲಾಗಿದೆ. ವಿದ್ಯಾರ್ಥಿಗಳು ನಿಗದಿತ ಡ್ರೆಸ್ ಕೋಡ್ ಪಾಲಿಸಬೇಕು ಹಾಗೂ ಪರೀಕ್ಷಾ ಸಮಯಕ್ಕಿಂತ ಅರ್ಧ ಗಂಟೆ ಮುಂಚಿತವಾಗಿ ಕೇಂದ್ರಗಳಿಗೆ ಹಾಜರಾಗಬೇಕು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಸೂಚನೆ ನೀಡಿದೆ.

ಸರ್ಕಾರ ಹಾಲ್ ಟಿಕೆಟ್ ತೋರಿಸುವ ಮೂಲಕ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ವಿದ್ಯಾರ್ಥಿಗಳಿಗೆ ಕಲ್ಪಿಸಿದೆ.

ಪರೀಕ್ಷಾ ಪ್ರಕ್ರಿಯೆ ಪಾರದರ್ಶಕವಾಗಿರಲು, ಹಲವು ಜಿಲ್ಲೆಗಳಲ್ಲಿ ವೆಬ್‌ಸ್ಟ್ರೀಮಿಂಗ್ ವ್ಯವಸ್ಥೆ ಮಾಡಲಾಗಿದ್ದು, ಜಿಲ್ಲಾಧಿಕಾರಿಗಳು ಹಾಗೂ ಸಿಇಒಗಳು ಮೇಲ್ವಿಚಾರಣೆ ನಡೆಸಲಿದ್ದಾರೆ.

ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಫೋನ್, ಸ್ಮಾರ್ಟ್ ವಾಚ್, ಇಯರ್‌ಫೋನ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಸಾಧನಗಳನ್ನು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಬಳಸುವುದು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

ಪರೀಕ್ಷಾ ಕೇಂದ್ರದ ಮುಖ್ಯಾಧಿಕಾರಿಯೊಬ್ಬರ ಬಳಿ ಮಾತ್ರ ಕ್ಯಾಮೆರಾ ಇಲ್ಲದ ಸರಳ ಮೊಬೈಲ್ ಫೋನ್ ಬಳಸಲು ಅವಕಾಶ ನೀಡಲಾಗಿದೆ.

ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿದ್ದು, ಯಾವುದೇ ಭಯವಿಲ್ಲದೆ ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಲು ಸಲಹೆ ನೀಡಿದ್ದಾರೆ.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಕೂಡ ವಿದ್ಯಾರ್ಥಿಗಳಿಗೆ ಶುಭಹಾರೈಸಿದ್ದು, ಇತ್ತೀಚಿನ ಶಿಕ್ಷಣ ಸುಧಾರಣೆಗಳಿಂದ ಪರೀಕ್ಷಾ ಒತ್ತಡ ಕಡಿಮೆಯಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು 'Quad' ಮಹತ್ವದ ತೀರ್ಮಾನ, ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ದೆಹಲಿಯಲ್ಲಿ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್; ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ಬೀಳುತ್ತಾ ತೆರೆ? ಕುತೂಹಲ ಮೂಡಿಸಿದ ಕಾಂಗ್ರೆಸ್ ಸಭೆ..!

ಪ್ಯಾಲೆಸ್ಟೀನ್ ರಾಷ್ಟ್ರ ಸ್ಥಾಪನೆವರೆಗೆ ಇಸ್ರೇಲ್‌ಗೆ ಮಾನ್ಯತೆ ಇಲ್ಲ: ಅಬ್ರಹಾಂ ಒಪ್ಪಂದಕ್ಕೆ 'NO' ಎಂದ ಪಾಕಿಸ್ತಾನ, ಟ್ರಂಪ್ ರಾಜತಾಂತ್ರಿಕ ಯತ್ನಕ್ಕೆ ಹಿನ್ನೆಡೆ..!

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ನನಗೆ 'CM ವಿಜಯ್' ಕಂಡ್ರೆ ಅಸೂಯೆ: ಸಾರ್ವಜನಿಕವಾಗಿ ಸತ್ಯ ಒಪ್ಪಿಕೊಂಡ ಆಂಧ್ರ DCM ಪವನ್ ಕಲ್ಯಾಣ್!

SCROLL FOR NEXT