ಸಂಗ್ರಹ ಚಿತ್ರ 
ರಾಜ್ಯ

ಯುಗಾದಿ ಆಯ್ತು, ಇದೀಗ ಎಲ್ಲೆಡೆ ಹೊಸ ತೊಡಕು ಸಂಭ್ರಮ: ಮಾಂಸ ಖರೀದಿಗೆ ಮಟನ್‌ ಸ್ಟಾಲ್‌ ಮುಂದೆ ಜನರ ಕ್ಯೂ..!

ಯುಗಾದಿ ಹಬ್ಬದ ಮಾರನೇ ದಿನ ಹೊಸ ತೊಡಕು ಆಚರಿಸಲಾಗುತ್ತದೆ. ಈ ಹಬ್ಬದಂದು ಜನರು ಕುಟುಂಬ ಸಮೇತರಾಗಿ ಮಾಂಸಾಹಾರ ಸೇವಿಸುವುದು ಸಂಪ್ರದಾಯವಾಗಿದೆ. ಹೊಸ ತೊಡಕು ಮತ್ತು ರಂಜಾನ್ ಹಿನ್ನೆಲೆಯಲ್ಲಿ ಮಾಂಸಕ್ಕೆ ಭಾರಿ ಬೇಡಿಕೆ ಶುರುವಾಗಿದೆ.

ಬೆಂಗಳೂರು: ಹಿಂದೂಗಳ ಹೊಸ ವರ್ಷ ಯುಗಾದಿ ಹಬ್ಬವನ್ನು ರಾಜ್ಯ ಜನತೆ ಸಂಭ್ರಮ-ಸಡಗರ, ಪೂಜೆ-ಪುನಸ್ಕಾರದೊಂದಿಗೆ ಬರಮಾಡಿಕೊಂಡಿದ್ದು, ಇಂದು (ಬುಧವಾ) ಎಲ್ಲೆಡೆ ಹೊಸತೊಡಕು ಸಂಭ್ರಮ ಮನೆ ಮಾಡಿದೆ.

ಯುಗಾದಿ ಹಬ್ಬದ ಮಾರನೇ ದಿನ ಹೊಸ ತೊಡಕು ಆಚರಿಸಲಾಗುತ್ತದೆ. ಈ ಹಬ್ಬದಂದು ಜನರು ಕುಟುಂಬ ಸಮೇತರಾಗಿ ಮಾಂಸಾಹಾರ ಸೇವಿಸುವುದು ಸಂಪ್ರದಾಯವಾಗಿದೆ. ಹೊಸ ತೊಡಕು ಮತ್ತು ರಂಜಾನ್ ಹಿನ್ನೆಲೆಯಲ್ಲಿ ಮಾಂಸಕ್ಕೆ ಭಾರಿ ಬೇಡಿಕೆ ಶುರುವಾಗಿದೆ. ಇದರಂತೆ ಕುರಿ, ಮೇಕೆಗಳ ಬೆಲೆ ಹೆಚ್ಚಾಗಿದೆ.

ಪ್ರಸಿದ್ಧ ಬನ್ನೂರು ಕುರಿ ಮಾಂಸಕ್ಕೂ ಭಾರೀ ಬೇಡಿಕೆ ಬಂದಿದೆ. ವಿಶೇಷವಾಗಿ ಇಂದು, ಗುಡ್ಡೆ ಮಾಂಸ ತಿನ್ನುವುದು ವಾಡಿಕೆ. ಸಾಮಾನ್ಯವಾಗಿ, ಕುರಿ ಮತ್ತು ಮೇಕೆಗಳನ್ನು ರಾಜ್ಯದಲ್ಲಿ ಮಾತ್ರವಲ್ಲದೆ ಹೊರ ರಾಜ್ಯಗಳಿಂದಲೂ ತಂದು ಮಾರಾಟ ಮಾಡಲಾಗುತ್ತದೆ.

ಗುಡ್ಡೆ ಮಟನ್ ಮಾಂಸಕ್ಕೆ ಕೆಜಿಗೆ 1000-1200 ಆಗಿದ್ದು, ವರ್ಷಕ್ಕೊಮ್ಮೆ ಹಬ್ಬ ಬರುವುದರಿಂದ ಬೆಲೆ ಜಾಸ್ತಿ ಆದರೂ ಹಬ್ಬ ಮಾಡಲೇಬೇಕೆಂದು ಜನರು ಸಾಲಿನಲ್ಲಿ ನಿಂತು ಮಾಂಸ ಖರೀದಿ ಮಾಡುತ್ತಿದ್ದಾರೆ.

ಬೆಂಗಳೂರಿನ ಬ್ಯಾಟರಾಯನಪುರದಲ್ಲಿರುವ 'ಪಾಪಣ್ಣ ಮಟನ್ ಸ್ಟಾಲ್' ಮುಂದೆ ಜನರು ಬೆಳಿಗ್ಗೆಯಿಂದಲೇ ಕ್ಯೂ ನಿಂತಿದ್ದು, ಮಾಂಸ ಖರೀದಿಗೆ ಮಾಡುತ್ತಿದ್ದಾರೆ.

ಹೊಸತೊಡುಕು ಹಿನ್ನೆಲೆ ಇಂದು ಬೆಳಗಿನ ಜಾವ 4 ಗಂಟೆಗೇ ಮಟನ್ ಸ್ಟಾಲ್ ಓಪನ್ ಆಗಿದ್ದು, ಮಾಂಸಪ್ರಿಯರು ನಸುಕಿನ ಜಾವದಲ್ಲೇ ಎದ್ದು ಬಂದು ಮಟನ್‌ ಖರೀದಿಗೆ ಮುಗಿಬಿದ್ದಿದ್ದಾರೆ.

ನೂಕುನುಗ್ಗಲು ತಪ್ಪಿಸಲು ಮಾಲೀಕರು ಬರೋಬ್ಬರಿ ನಾಲ್ಕೈದು ಕೌಂಟರ್‌ಗಳನ್ನು ತೆರೆದು ಮಟನ್ ವಿತರಣೆ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!