ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ಕಾಡ್ಗಿಚ್ಚು 
ರಾಜ್ಯ

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ಕಾಡ್ಗಿಚ್ಚು: 18 ಎಕರೆ ಅರಣ್ಯ ಸುಟ್ಟು ಭಸ್ಮ..!

ಕೆರೇಕಟ್ಟೆ ಅರಣ್ಯ ವಲಯದ ಮಾಣಿಕ್ಯ ಬೆಟ್ಟ ಹಾಗೂ ವಾಲಿಕುಂಜ ಗಿರಿ ಪ್ರದೇಶಗಳಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಅದು ವೇಗವಾಗಿ ಪಕ್ಕದ ಪ್ರದೇಶಗಳಿಗೆ ಹರಡಿದೆ. ಪರಿಣಾಮವಾಗಿ ಸುಮಾರು 18 ಏಕರೆ ಅರಣ್ಯ ಪ್ರದೇಶ ಸುಟ್ಟು ಭಸ್ಮವಾಗಿದೆ.

ಚಿಕ್ಕಮಗಳೂರು: ಪ್ರಸಿದ್ಧ ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ಉಂಟಾದ ಕಾಡ್ಗಿಚ್ಚು ಎದುರಾಗಿದ್ದು, ಪರಿಣಾಮ 18 ಎಕರೆ ಅರಣ್ಯ ಪ್ರದೇಶ ಸುಟ್ಟು ಭಸ್ಮವಾಗಿದೆ.

ಕೆರೇಕಟ್ಟೆ ಅರಣ್ಯ ವಲಯದ ಮಾಣಿಕ್ಯ ಬೆಟ್ಟ ಹಾಗೂ ವಾಲಿಕುಂಜ ಗಿರಿ ಪ್ರದೇಶಗಳಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಅದು ವೇಗವಾಗಿ ಪಕ್ಕದ ಪ್ರದೇಶಗಳಿಗೆ ಹರಡಿದೆ. ಪರಿಣಾಮವಾಗಿ ಸುಮಾರು 18 ಏಕರೆ ಅರಣ್ಯ ಪ್ರದೇಶ ಸುಟ್ಟು ಭಸ್ಮವಾಗಿದೆ.

ಶೋಲಾ ಅರಣ್ಯದ ಹುಲ್ಲುಗಾವಲು ಪ್ರದೇಶಗಳಲ್ಲಿ ಕೆಲ ದುಷ್ಕರ್ಮಿಗಳು 25ಕ್ಕೂ ಹೆಚ್ಚು ಸ್ಥಳಗಳಲ್ಲಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದ್ದು, ಬೆಂಕಿಯ ಜ್ವಾಲೆಗಳು ದೂರದೂರಿನಿಂದಲೂ ಗೋಚರಿಸುತ್ತಿತ್ತು ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆಯ ನಿರ್ಲಕ್ಷ್ಯ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಕಿ ನಿಯಂತ್ರಣಕ್ಕೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳದಿರುವುದು ಮತ್ತು ಅರಣ್ಯವನ್ನು ರಕ್ಷಿಸುವಲ್ಲಿ ವಿಫಲವಾಗಿರುವುದಾಗಿ ಆರೋಪಿಸಿದ್ದಾರೆ.

ಅಗ್ನಿ ನಿಯಂತ್ರಣಕ್ಕೆ ಸಿಬ್ಬಂದಿಯನ್ನು ನೇಮಿಸಲು ಹಣ ವೆಚ್ಚ ಮಾಡಲಾಗುತ್ತಿದೆಯಾದರೂ, ಸಿಬ್ಬಂದಿಗಳು ಸ್ಥಳದಲ್ಲೇ ಕಾರ್ಯನಿರ್ವಹಿಸದಿರುವುದು ಸ್ಪಷ್ಟವಾಗುತ್ತಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoorನಲ್ಲಿ ಧ್ವಂಸವಾಗಿದ್ದ ಜೈಶ್ ನೆಲೆ ಮರುನಿರ್ಮಾಣ! ಪಾಕ್‌ ಸರ್ಕಾರದಿಂದ 25 ಕೋಟಿ ನೆರವು!

Onion Price: ದಿಢೀರ್ ಈರುಳ್ಳಿ ಬೆಲೆ ಏರಿಕೆ; ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಮತ್ತಷ್ಟು ದುಬಾರಿ ಸಾಧ್ಯತೆ, ದರ ಏರಿಕೆಗೆ ಕಾರಣವೇನು?

ಮಹಿಳಾ ಮೀಸಲಾತಿ ಮಸೂದೆ ಬೆಂಬಲಿಸಿ, ಕಾಂಗ್ರೆಸ್ ಕಚೇರಿಯಲ್ಲಿ ವಂದೇ ಪೂರ್ತಿಯಾಗಿ ಹಾಡಿ ತೋರಿಸಿ: ರಾಹುಲ್ ಗಾಂಧಿಗೆ ಸ್ಮೃತಿ ಇರಾನಿ ಸವಾಲು

ಮದ್ಯ ಸಾಗಣೆ ಹಗರಣ: ಆಂಧ್ರಪ್ರದೇಶದ ಮಾಜಿ ಸಚಿವರ ಬಂಧಿಸಿದ ED

'3 ರಾಷ್ಟ್ರಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದೇನೆ': SIR ಪಟ್ಟಿಯಲ್ಲಿ ಹೆಸರು ನಾಪತ್ತೆ ಬಗ್ಗೆ ಮಾಜಿ ರಾಯಭಾರಿ ಅಸಮಾಧಾನ!