ಸಾಕಾನೆಗಳ ಸಹಕಾರದಿಂದ ಒಂಟಿ ಸಲಗವನ್ನು ಲಾರಿಗೆ ಹತ್ತಿಸಿ ಮತ್ತಿಗೋಡು ಶಿಬಿರಕ್ಕೆ ಸ್ಥಳಾಂತರಿಸಲಾಯಿತು. 
ರಾಜ್ಯ

ಮಡಿಕೇರಿ: ವಿರಾಜಪೇಟೆಯ ಕಕ್ಲೂರು ಸುತ್ತಮುತ್ತ ಭೀತಿ ಮೂಡಿಸಿದ್ದ ಒಂಟಿ ಸಲಗ ಸೆರೆ; ಕಾರ್ಯಾಚರಣೆ ಯಶಸ್ವಿ

ಭಾನುವಾರ ಬೆಳಗ್ಗೆ ಆನೆ ಪತ್ತೆಯಾದ ನಂತರ ಸೆರೆ ಹಿಡಿಯುವ ಕಾರ್ಯಾಚರಣೆ ಆರಂಭವಾಗಿದ್ದು, ಮಧ್ಯಾಹ್ನದ ವೇಳೆಗೆ ಅರಣ್ಯಾಧಿಕಾರಿಗಳು ಯಶಸ್ವಿಯಾಗಿ ಒಂಟಿ ಸಲಗವನ್ನು ಸೆರೆ ಹಿಡಿದಿದ್ದಾರೆ.

ಮಡಿಕೇರಿ: ವಿರಾಜಪೇಟೆ ವ್ಯಾಪ್ತಿಯಲ್ಲಿ ಮಾನವ-ಆನೆ ಸಂಘರ್ಷಕ್ಕೆ ಕಾರಣವಾಗಿದ್ದ ಮತ್ತೊಂದು ಒಂಟಿ ಸಲಗವವನ್ನು ಸೆರೆ ಹಿಡಿಯುವಲ್ಲಿ ಕೊಡಗು ವಿಭಾಗದ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಮೂರು ಗಂಟೆಗಳ ಯಶಸ್ವಿ ಕಾರ್ಯಾಚರಣೆ ಬಳಿಕ ಸುಮಾರು 35 ವರ್ಷದ ಒಂಟಿ ಸಲಗವನ್ನು ಯಶಸ್ವಿಯಾಗಿ ಸೆರೆ ಹಿಡಿಯಲಾಗಿದೆ.

ಕಾಡಾನೆಗಳ ಚಲನವಲನದ ಹೆಚ್ಚಳ ಹಾಗೂ ಕಕ್ಲೂರು, ಚೆಂಬ ಬೆಳ್ಳೂರು ಸುತ್ತಮುತ್ತಲ ಗ್ರಾಮಗಳ ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಬೀಡುಬಿಟ್ಟು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಒಂಟಿ ಸಲಗ ಸೆರೆ ಹಿಡಿಯಲು ಸರ್ಕಾರ ಅನುಮತಿ ನೀಡಿತ್ತು.

ಭಾನುವಾರ ಬೆಳಗ್ಗೆ ಆನೆ ಪತ್ತೆಯಾದ ನಂತರ ಸೆರೆ ಹಿಡಿಯುವ ಕಾರ್ಯಾಚರಣೆ ಆರಂಭವಾಗಿದ್ದು, ಮಧ್ಯಾಹ್ನದ ವೇಳೆಗೆ ಅರಣ್ಯಾಧಿಕಾರಿಗಳು ಯಶಸ್ವಿಯಾಗಿ ಒಂಟಿ ಸಲಗವನ್ನು ಸೆರೆ ಹಿಡಿದಿದ್ದಾರೆ.

ದುಬಾರೆ ಹಾಗೂ ಮತ್ತಿಗೋಡು ಶಿಬಿರದ ಸಾಕಾನೆಗಳಾದ ಅಭಿಮನ್ಯು, ಮಹೇಂದ್ರ, ಕಂಜನ್, ಭೀಮ, ಸುಗ್ರೀವ ಮತ್ತು ಹರ್ಷ ಸೇರಿದಂತೆ 100 ಕ್ಕೂ ಹೆಚ್ಚು ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಕುಕ್ಲೂರು ಗ್ರಾಮದ ಎಸ್ಟೇಟ್ ಬಳಿ ಆನೆ ಪತ್ತೆಯಾಗಿದ್ದು, ಪಶುವೈದ್ಯ ಡಾ.ರಮೇಶ್ ಮತ್ತು ಶಾರ್ಪ್ ಶೂಟರ್ ರಂಜನ್ ಸಾಕಾನೆಗಳ ಸಹಾಯದಿಂದ ಬಂದೂಕಿನಿಂದ ಅರವಳಿಕೆ ನೀಡಿ ಶಾಂತಗೊಳಿಸಿದ್ದಾರೆ. ಪ್ರತಿರೋಧದ ಹೊರತಾಗಿಯೂ ಸಾಕಾನೆಗಳ ಸಹಾಯದಿಂದ ಸೆರೆಯಾದ ಕಾಡಾನೆಯನ್ನು ಟ್ರಂಕ್ ಗೆ ಹತ್ತಿಸಿಕೊಂಡು ಮತ್ತಿಗೋಡು ಶಿಬಿರಕ್ಕೆ ಸ್ಥಳಾಂತರಿಸಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!

ದೂರು ನೀಡಲು ಕ್ಯೂಆರ್ ಕೋಡ್ ಬಿಡುಗಡೆ; ಹೋಟೆಲ್‌ಗಳ ಅಡುಗೆ ಕೋಣೆಗೆ ಸಿಸಿಟಿವಿ ಕಡ್ಡಾಯ, ಪಿಜಿ ಗಳಿಗೆ ಪ್ರತ್ಯೇಕ ಗೈಡ್‌ಲೈನ್ಸ್‌: ಖಾದರ್ ಮಹತ್ವದ ಘೋಷಣೆ

Rahul Gandhi ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಬ್ರೇಕ್! ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ಯುರೋಪ್‌ನಲ್ಲಿ ಯುದ್ಧದ ಭೀತಿ: ಉಕ್ರೇನ್‌ನಲ್ಲಿರುವ ಭಾರತದ ಬಿಲಿಯನೇರ್‌ ಉದ್ಯಮಿಯ ಕಾರ್ಖಾನೆ ಮೇಲೆ ರಷ್ಯಾ ದಾಳಿ!

ಹನೂರು ಶೂಟೌಟ್ ಪ್ರಕರಣ: ಮೃತರ ಕುಟುಂಬಸ್ಥರಿಗೆ 15 ಲಕ್ಷ ರೂ. ಪರಿಹಾರ ವಿತರಣೆ, ಪ್ರತಿಭಟನೆ ವಾಪಸ್