ಸಿಲಿಂಡರ್ ಹೊತ್ತೊಯ್ಯುತ್ತಿರುವ ಆರೋಪಿಗಳು. 
ರಾಜ್ಯ

ಬೆಂಗಳೂರಿನಲ್ಲಿ ಕಳ್ಳರ ಹಾವಳಿ: ಯುಗಾದಿ ಹಬ್ಬದಂದೇ ಅಪಾರ್ಟ್‌ಮೆಂಟ್‌ನಲ್ಲಿ ಎರಡು ಸಿಲಿಂಡರ್ ಕಳ್ಳತನ; CCTVಯಲ್ಲಿ ದೃಶ್ಯ ಸೆರೆ..!

ಗುರುವಾರ ಮಧ್ಯಾಹ್ನ ಸುಮಾರು 2.45ರ ಸುಮಾರಿಗೆ ಜಾಕೆಟ್ ಮತ್ತು ಹೆಲ್ಮೆಟ್ ಧರಿಸಿ ಸ್ಕೂಟರ್ ನಲ್ಲಿ ಬಂದಿರುವ ಇಬ್ಬರು ದುಷ್ಕರ್ಮಿಗಳು ಅಪಾರ್ಟ್‌ಮೆಂಟ್‌ನ ನೆಲಮಹಡಿಯಿಂದ ಸಿಲಿಂಡರ್‌ಗಳನ್ನು ಕದ್ದಿದ್ದಾರೆ.

ಬೆಂಗಳೂರು: ಪಶ್ಚಿಮ ಏಷ್ಯಾದ ಯುದ್ಧದ ಪರಿಣಾಮವಾಗಿ ಎಲ್‌ಪಿಜಿ ಕೊರತೆ ಎದುರಿಸುತ್ತಿರುವ ಈ ಸಂದರ್ಭದಲ್ಲಿ, ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕಳವು ಪ್ರಕರಣಗಳು ಆತಂಕ ಹುಟ್ಟಿಸಿದೆ.

ಮಡಿವಾಳದ ಆರ್‌ಸಿ ಲೇಔಟ್‌ನ ಸಾಯಿ ರೆಸಿಡೆನ್ಸಿ ಅಪಾರ್ಟ್‌ಮೆಂಟ್‌ನಲ್ಲಿ ಇಬ್ಬರು ದುಷ್ಕರ್ಮಿಗಳು ಎರಡು ಗ್ಯಾಸ್ ಸಿಲಿಂಡರ್‌ಗಳನ್ನು ಕದ್ದೊಯ್ದ ಘಟನೆ ಬೆಳಕಿಗೆ ಬಂದಿದೆ.

ಗುರುವಾರ ಮಧ್ಯಾಹ್ನ ಸುಮಾರು 2.45ರ ಸುಮಾರಿಗೆ ಜಾಕೆಟ್ ಮತ್ತು ಹೆಲ್ಮೆಟ್ ಧರಿಸಿ ಸ್ಕೂಟರ್ ನಲ್ಲಿ ಬಂದಿರುವ ಇಬ್ಬರು ದುಷ್ಕರ್ಮಿಗಳು ಅಪಾರ್ಟ್‌ಮೆಂಟ್‌ನ ನೆಲಮಹಡಿಯಿಂದ ಸಿಲಿಂಡರ್‌ಗಳನ್ನು ಕದ್ದಿದ್ದಾರೆ.

ಸಿಸಿಟಿವಿ ಕ್ಯಾಮೆರಾಗಳಲ್ಲಿ ದೃಶ್ಯಾ ಸೆರೆಯಾಗಿದ್ದು, ಕೇವಲ ಐದು ನಿಮಿಷಗಳಲ್ಲಿ ಕಳವು ನಡೆಸಿ ಸ್ಥಳದಿಂದ ಕಾಲ್ಕಿತ್ತಿರುವುದು ವೀಡಿಯೋದಲ್ಲಿ ಕಂಡು ಬಂದಿದೆ.

ಈ ನಡುವೆ ಫ್ಲಾಟ್‌ವೊಂದಕ್ಕೆ ಗ್ಯಾಸ್ ಸರಬರಾಜು ಏಕಾಏಕಿ ನಿಂತಿದ್ದು, ಪರಿಶೀಲಿಸಿದಾಗ ಕಳವು ಘಟನೆ ಬೆಳಕಿಗೆ ಬಂದಿದೆ. ಬಳಿಕ ಪರಿಶೀಲನೆ ನಡೆಸಿದಾಗ ಎರಡು ಸಿಲಿಂಡರ್‌ಗಳು ಕಾಣೆಯಾಗಿರುವುದು ಪತ್ತೆಯಾಗಿದೆ.

ಬೇಗೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಪತ್ತೆಹಚ್ಚಲು ಕ್ರಮ ಕೈಗೊಂಡಿದ್ದಾರೆ. ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ದುಷ್ಕರ್ಮಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ನಗರದಲ್ಲಿ ಈಗಾಗಲೇ ಎಲ್‌ಪಿಜಿ ಕೊರತೆ ತಲೆದೋರಿದ್ದು, ಈ ನಡುವೆ ಇಂತಹ ಕಳವು ಘಟನೆಗಳು ನಾಗರಿಕರಲ್ಲಿ ಆತಂಕವನ್ನು ಮತ್ತಷ್ಟು ಹೆಚ್ಚು ಮಾಡುತ್ತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರತಿಪಕ್ಷಗಳು ಸಂಪುಟದಿಂದ ವಜಾಕ್ಕೆ ಆಗ್ರಹಿಸುತ್ತಿರುವ ಮಧ್ಯೆ ಸಚಿವ ಬಿ. ನಾಗೇಂದ್ರಗೆ ಹೈಕೋರ್ಟ್ ಬಿಗ್ ರಿಲೀಫ್!

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ ಹೋಗಿದ್ದ ಟೆಕ್ಕಿ ನಾಪತ್ತೆ: ಲ್ಯಾಪ್‌ಟಾಪ್‌ನಲ್ಲಿ ಶಾಂತಲಾ ಡ್ರಾಪ್‌ ಪಾಯಿಂಟ್‌ ಸರ್ಚ್‌; ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ!

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

'ಬಸವಣ್ಣನನ್ನೇ ಬಿಡಲಿಲ್ಲ.. ನಾನ್ಯಾರು..'; ‘ಅವರಿಗೆ ಸಚಿವ ಸ್ಥಾನ ಸಿಗದಿರಲು ನಾನು ಕಾರಣ ಅಲ್ಲ’ ಎಂದ ಎಂಬಿ ಪಾಟೀಲ್ ಸ್ಪಷ್ಟನೆ, Video

'JDS ಪಾದಯಾತ್ರೆಯ ಬಂಡವಾಳ ಬಯಲು ಮಾಡಿದ ವಿಜಯೇಂದ್ರ': ಕಾಂಗ್ರೆಸ್​​ನಿಂದ ವಿಡಿಯೋ ಬಿಡುಗಡೆ!