ಸಾಂದರ್ಭಿಕ ಚಿತ್ರ 
ರಾಜ್ಯ

ಯುಗಾದಿ ಹಬ್ಬದಂದೇ ದುರಂತ: ಹೋಳಿಯಾಡಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಯುವಕರು ನೀರುಪಾಲು

ಹೋಳಿ ಆಚರಣೆ ಬಳಿಕ ಕೆರೆಯಲ್ಲಿ ಸ್ನಾನ ಮಾಡಲು ತೆರಳಿದ ಗೋವಿಂದರಾಜ್ (30) ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಈ ಕುರಿತು ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಯಚೂರು: ಯುಗಾದಿ ಹಬ್ಬದ ನಂತರ ನಡೆದ ಬಣ್ಣಗಳ ಹಬ್ಬ ಹೋಳಿ ಸಂಭ್ರಮದ ಬಳಿಕ ಸ್ನಾನಕ್ಕೆ ತೆರಳಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಗೋವಿನದೊಡ್ಡಿ ಗ್ರಾಮದಲ್ಲಿ ನಡೆದಿದೆ.

ಮೃತ ಯುವಕರನ್ನು ಗೋವಿಂದರಾಜ್ (30) ಹಾಗೂ ಗಂಗಾಧರ್ (20) ಎಂದು ಗುರ್ತಿಸಲಾಗಿದೆ. ಹೋಳಿ ಆಚರಣೆ ಬಳಿಕ ಕೆರೆಯಲ್ಲಿ ಸ್ನಾನ ಮಾಡಲು ತೆರಳಿದ ಗೋವಿಂದರಾಜ್ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಈ ಕುರಿತು ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತೊಂದು ಘಟನೆ ದೇವದುರ್ಗ ತಾಲ್ಲೂಕಿನ ಬುದ್ದಿನ್ನಿ ಗ್ರಾಮದಲ್ಲಿ ನಡೆದಿದೆ. ಹೋಳಿ ಸಂಭ್ರಮದ ನಂತರ ಸ್ನಾನಕ್ಕೆ ತೆರಳಿದ ಗಂಗಾಧರ್ ಎಂಬ ಯುವಕ ಎನ್‌ಆರ್‌ಬಿಸಿ (NRBC) ಕಾಲುವೆಯಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ.

ನಂತರ ನಾಗೋಳಿ ಗ್ರಾಮದ ಸಮೀಪದಲ್ಲಿ ಅವನ ಮೃತದೇಹ ಪತ್ತೆಯಾಗಿದೆ. ಈ ಸಂಬಂಧ ಗಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭೋಜಶಾಲಾ ಸರಸ್ವತಿ ದೇವಸ್ಥಾನಕ್ಕೆ ಸೇರಿದ್ದು; ಮಸೀದಿಗೆ ಪರ್ಯಾಯ ಭೂಮಿ: ಮಧ್ಯಪ್ರದೇಶ ಹೈಕೋರ್ಟ್ ಮಹತ್ವದ ತೀರ್ಪು

'ಇರಾನ್ ಮೇಲೆ ಪರಮಾಣು ಬಾಂಬ್ ಹಾಕಲು ಮುಂದಾಗಿದ್ದ ಟ್ರಂಪ್, ಆದ್ರೆ...'; ಆಘಾತಕಾರಿ ಮಾಹಿತಿ ಬಹಿರಂಗ!

ಕೊಪ್ಪಳ: ತುಂಗಭದ್ರಾ ಸೇತುವೆ ಮೇಲಿಂದ ಕೆಳಗೆ ಬಿದ್ದ ಟ್ರ್ಯಾಕ್ಟರ್, ಒಂದೇ ಕುಟುಂಬದ ಆರು ಮಂದಿ ದುರ್ಮರಣ!

ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ತಂದೆ ಯೋಗರಾಜ್ ಸಿಂಗ್ ವಿರುದ್ಧ FIR ದಾಖಲು; ಇಲ್ಲಿದೆ ಕಾರಣ

ಕರ್ನಾಟಕದಲ್ಲಿ ಜೂನ್ 20 ರಿಂದ SIR ಪ್ರಾರಂಭ: ಅಕ್ಟೋಬರ್ 7ಕ್ಕೆ ಅಂತಿಮ ಪಟ್ಟಿ ಪ್ರಕಟ! ಹೇಗೆ ಮಾಡಲಾಗುತ್ತದೆ?

SCROLL FOR NEXT