ಅಪಘಾತಕ್ಕೀಡಾದ ಬಸ್ಸು 
ರಾಜ್ಯ

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಭೀಕರ ಅಪಘಾತ; ನಾಲ್ವರು ಸ್ಥಳದಲ್ಲೇ ಸಾವು; Video

ಕೇರಳ ಮೂಲದ ಪಿ ಕೆ ಟ್ರಾವೆಲ್ಸ್ ಕಂಪನಿಗೆ ಸೇರಿದ ಬಸ್‌ ಕೇರಳದಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು.

ರಾಮನಗರ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ (Bengaluru-Mysuru Expressway) ಇಂದು ಸೋಮವಾರ ಬೆಳ್ಳಂಬೆಳಗ್ಗೆ ಡಿವೈಡರ್‌ಗೆ ಬಸ್‌ ಡಿಕ್ಕಿಯಾಗಿ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಕೇರಳ ಮೂಲದ ಪಿ ಕೆ ಟ್ರಾವೆಲ್ಸ್ ಕಂಪನಿಗೆ ಸೇರಿದ ಬಸ್‌ ಕೇರಳದಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು. ಈ ವೇಳೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಗ್ರಾಮದ ಪುಟ್ಟಪ್ಪನದೊಡ್ಡಿ ಬಳಿ ಬಸ್‌ ಡಿವೈಡರ್‌ಗೆ ಡಿಕ್ಕಿಯಾಗಿದೆ. ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಚಾಲಕ ನಿದ್ದೆ ಮಂಪರಿನಲ್ಲಿ ಇದ್ದಿದ್ದರಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಮೃತರೆಲ್ಲರೂ ಕೇರಳ ಮೂಲದವರು ಎಂದು ತಿಳಿದು ಬಂದಿದೆ. ಮಾಹಿತಿ ತಿಳಿದ ತಕ್ಷಣ ಚನ್ನಪಟ್ಟಣ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಪೈಕಿ ಇಬ್ಬರು ಬೆಂಗಳೂರಿನವರಾಗಿದ್ದಾರೆ. ಮೃತರನ್ನು ಕೇರಳದ ಕಾಜಿಕೋಟೆಯ ಮೊಹಮ್ಮದ್ ಫರಾನ್(22ವ), ಸುಲ್ಫಿ (45ವ), ಬೆಂಗಳೂರಿನ ಕಲಾಸಿಪಾಳ್ಯದ ನಿವಾಸಿ ರಶೀದ್(45ವ) ಹಾಗೂ ಆಡುಗೋಡಿಯ ಅಣ್ಣೆಪಾಳ್ಯ ನಿವಾಸಿ ಸಾಕೇರ್ ಎಂದು ಗುರುತಿಸಲಾಗಿದೆ.

ಕೇರಳದ ಕಣ್ಣೂರಿನ ಅಬ್ದುಲ್​, ಅಲೇನ್​ ಎಂಬುವರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದ್ದು, ಪ್ರಕರಣ ದಾಖಲಾಗಿದೆ. ಬಸ್‌ನಲ್ಲಿ ಎಷ್ಟು ಜನರು ಪ್ರಯಾಣಿಸುತ್ತಿದ್ದರು ಎಂಬುದರ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ CJP ಸಜ್ಜು; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ