ಸಂಗ್ರಹ ಚಿತ್ರ online desk
ರಾಜ್ಯ

Fake Documents: ಸಾಗರ ತಾಲ್ಲೂಕು ಕಚೇರಿ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು

ಕೆಲವು ಸಿಬ್ಬಂದಿಗಳು ಹಣಕ್ಕಾಗಿ ಸರ್ಕಾರಿ ದಾಖಲೆಗಳನ್ನು ನಕಲಿ ರೂಪದಲ್ಲಿ ಸೃಷ್ಟಿಸಿ, ಖಾಸಗಿ ವ್ಯಕ್ತಿಗಳಿಗೆ ಭೂಮಿಯನ್ನು ಹಂಚಿಕೆ ಮಾಡಿಸುವ ಪ್ರಯತ್ನ ನಡೆಸಿದ್ದಾರೆಂಬ ಗಂಭೀರ ಆರೋಪಗಳು ಕೇಳಿ ಬಂದಿವೆ.

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ಕಚೇರಿಯಲ್ಲಿ ನಕಲಿ ಭೂ ದಾಖಲೆ ಸೃಷ್ಟಿಸಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಇದರ ಬೆನ್ನಲ್ಲೇ ಕಚೇರಿ ಸಿಬ್ಬಂದಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಕೆಲವು ಸಿಬ್ಬಂದಿಗಳು ಹಣಕ್ಕಾಗಿ ಸರ್ಕಾರಿ ದಾಖಲೆಗಳನ್ನು ನಕಲಿ ರೂಪದಲ್ಲಿ ಸೃಷ್ಟಿಸಿ, ಖಾಸಗಿ ವ್ಯಕ್ತಿಗಳಿಗೆ ಭೂಮಿಯನ್ನು ಹಂಚಿಕೆ ಮಾಡಿಸುವ ಪ್ರಯತ್ನ ನಡೆಸಿದ್ದಾರೆಂಬ ಗಂಭೀರ ಆರೋಪಗಳು ಕೇಳಿ ಬಂದಿವೆ.

ಸಾಗರ ತಹಶೀಲ್ದಾರ್ ರಶ್ಮಿ ಹಾಲೇಶ್ ಅವರು ನಕಲಿ ದಾಖಲೆಗಳು ಸೃಷ್ಟಿಯಾಗಿರುವುದನ್ನು ಗಮನಿಸಿ ಮೇಲಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಮಾರ್ಚ್ 18ರಂದು ಈ ಅಕ್ರಮ ಬೆಳಕಿಗೆ ಬಂದಿದ್ದು, ಆ ಬಳಿಕ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಆರು ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ.

ಅಧಿಕಾರಿಗಳ ಪ್ರಕಾರ, ಆರೋಪಿಗಳು ಭೂ ಹಂಚಿಕೆ ಮಾಡುವುದಾಗಿ ಹೇಳಿ ಸಾರ್ವಜನಿಕರಿಂದ ಹಣ ಸಂಗ್ರಹಿಸಿ, ಅದಕ್ಕಾಗಿ ನಕಲಿ ಸರ್ಕಾರಿ ದಾಖಲೆಗಳನ್ನು ಸಿದ್ಧಪಡಿಸುತ್ತಿದ್ದರು. ಇದರಿಂದ ಸರ್ಕಾರದ ಭೂಮಿಯನ್ನು ಅಕ್ರಮವಾಗಿ ಖಾಸಗಿ ವ್ಯಕ್ತಿಗಳಿಗೆ ವರ್ಗಾಯಿಸುವ ಯೋಜನೆ ಇತ್ತು ಎಂಬ ಅನುಮಾನ ವ್ಯಕ್ತವಾಗಿದೆ.

ಈ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ, ಸಂಬಂಧಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಜೊತೆಗೆ ಸಾರ್ವಜನಿಕರು ಇಂತಹ ಮೋಸಗಳಿಗೆ ಒಳಗಾಗದಂತೆ ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ನ್ಯೂ ಟೀಂ ಘೋಷಣೆ; ರಾಮ್ ಮಾಧವ್, ಸ್ಮೃತಿ ಜೊತೆ ಕರ್ನಾಟಕದ ಇಬ್ಬರಿಗೆ ಪ್ರಮುಖ ಸ್ಥಾನ!

D Boss, D Boss ಜೈಕಾರಕ್ಕೆ ಗರಂ: ನಿಮ್ಮಂತವರಿಂದಲೇ ತೊಂದರೆ ಆಗ್ತೀರೋದು, ಅಭಿಮಾನಿಗಳಿಗೆ ವಿಜಯಲಕ್ಷ್ಮಿ ಬುದ್ಧಿ ಮಾತು, Video!

ಪ್ರಧಾನಿ ಮೋದಿ ಭೇಟಿ ಮಾಡಿದ ದೇವೇಂದ್ರ ಫಡ್ನವೀಸ್; ಮಹಾರಾಷ್ಟ್ರ ರಾಜಕೀಯಕ್ಕೆ ಗುಡ್ ಬೈ?

ಲೈಂಗಿಕ ಕಿರುಕುಳ ಆರೋಪ: ಪ್ರಾಂಶುಪಾಲರ ಮುಖಕ್ಕೆ ಮಸಿ ಬಳಿದ ವಿದ್ಯಾರ್ಥಿನಿಯರು!

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!