ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ 
ರಾಜ್ಯ

ಜೂನ್ ತಿಂಗಳಿನಿಂದ 10 ಸಾವಿರ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳು ಆರಂಭ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ಫ್ರೀಡಂ ಪಾರ್ಕ್‌ನಲ್ಲಿ ಅಂಗನವಾಡಿ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿದರು.

ಬೆಂಗಳೂರು: ಮುಂದಿನ ಜೂನ್‌ ತಿಂಗಳಿಂದ 10 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಲಾಗುವುದು. ಹಂತ ಹಂತವಾಗಿ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ಫ್ರೀಡಂ ಪಾರ್ಕ್‌ನಲ್ಲಿ ಅಂಗನವಾಡಿ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿ ಮಾತನಾಡಿದ ಸಚಿವರು, ಈಗಾಗಲೇ ಐದು ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಲಾಗಿದೆ ಎಂದರು.

ಸಂಘಟನೆಯವರ ಜೊತೆಗೆ ಮಾತುಕತೆ ನಡೆಸಿ ಮುಖ್ಯಮಂತ್ರಿ ಅವರ ಜೊತೆ ಚರ್ಚೆ ನಡೆಸಲಾಗುವುದು. ಮುಖ್ಯಮಂತ್ರಿಗಳ ಸಮಯ ನಿಗದಿ ಮಾಡಿ ಶಿಕ್ಷಣ ಇಲಾಖೆಯ ಜೊತೆಗೆ ಮಾತುಕತೆ ನಡೆಸಲಾಗುವುದು. ಎಂಎ, ಬಿಎಡ್‌, ಪದವಿ ಪಡೆದಿರುವವರು ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದಾರೆ. ಅಂಗನವಾಡಿ ಕೇಂದ್ರಗಳಲ್ಲಿಯೇ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಉಳಿಸಿಕೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಈ ಹಿಂದೆ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಬಿಎಲ್‌ಒ ಕೆಲಸಗಳಿಂದ ಅಂಗನವಾಡಿ ಕಾರ್ಯಕರ್ತೆಯರನ್ನು ಕೈಬಿಡುವಂತೆ ಮಾಡಿದ್ದೆ. ಆದರೆ, ಬಿಎಲ್‌ಒ ಕೆಲಸಗಳಿಗೆ ಮತ್ತೊಮ್ಮೆ ಅಂಗನವಾಡಿ ಕಾರ್ಯಕರ್ತೆಯರನ್ನು ನಿಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ಇದರಿಂದ ಮುಕ್ತಿಕೊಡಿಸಲು ಪ್ರಯತ್ನಿಸಲಾಗುವುದು ಎಂದರು.

ಪ್ರತಿಭಟನೆ ಕೈಬಿಡಲು ಮನವಿ: ನಾನೊಬ್ಬ ಮಹಿಳೆಯಾಗಿ ಅಂಗನವಾಡಿ ಕಾರ್ಯಕರ್ತೆಯರ ಧ್ವನಿಯಾಗಿ ಕೆಲಸ ಮಾಡುತ್ತಿರುವೆ. ನಾನು ಸಚಿವೆಯಾದ ಬಳಿಕ ಹಲವು ಬೇಡಿಕೆಗಳನ್ನು ಈಡೇರಿಸಿರುವೆ. ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಿ ನಿಮ್ಮ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ