ಸಚಿವ ಶಿವರಾಜ್ ತಂಗಡಗಿ 
ರಾಜ್ಯ

'ನಾನು ಆರೋಗ್ಯವಾಗಿದ್ದು, ಯಾರು ಆತಂಕಪಡುವ ಅಗತ್ಯವಿಲ್ಲ': ಸಚಿವ ಶಿವರಾಜ್ ತಂಗಡಗಿ

ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವ ಕಾರ್ಯಕ್ರಮವಿದ್ದ ಕಾರಣ ನಾಲ್ಕು ದಿನಗಳ ಹಿಂದೆ ನನ್ನ ಕನಕಗಿರಿ ಮತಕ್ಷೇತ್ರಕ್ಕೆ ಹೋಗಿದ್ದೆ ಎಂದಿದ್ದಾರೆ.

ತುಮಕೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಹೊರಬಿದ್ದಿತ್ತು. ಇದಕ್ಕೆ ಈಗ ಸ್ವತಃ ಸಚಿವರೇ ಪ್ರತಿಕ್ರಿಯೆ ನೀಡಿದ್ದಾರೆ.ತಾವು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು ಆತಂಕಪಡುವ ಅಗತ್ಯವಿಲ್ಲ ಎಂದಿದ್ದಾರೆ.

ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವ ಕಾರ್ಯಕ್ರಮವಿದ್ದ ಕಾರಣ ನಾಲ್ಕು ದಿನಗಳ ಹಿಂದೆ ನನ್ನ ಕನಕಗಿರಿ ಮತಕ್ಷೇತ್ರಕ್ಕೆ ಹೋಗಿದ್ದೆ. ಕಾರ್ಯಕ್ರಮ ಮುಗಿಸಿಕೊಂಡು ಕೊಪ್ಪಳದಿಂದ ಬೆಂಗಳೂರಿಗೆ ಹೊರಟು ಬರುವಾಗ ನಿನ್ನೆ ಭಾನುವಾರ ರಾತ್ರಿ ಮಾರ್ಗ ಮಧ್ಯೆ ಎದೆ ಚುಚ್ಚಿದ ಅನುಭವ ಆಯಿತು. ಈ ಹಿನ್ನೆಲೆಯಲ್ಲಿ ನನ್ನ ಕುಟುಂಬದ ವೈದ್ಯರೊಂದಿಗೆ ಕರೆ ಮಾಡಿ ಮಾತನಾಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಯಲ್ಲಿ ಒಮ್ಮೆ ತಪಾಸಣೆ ಮಾಡಿಸುವಂತೆ ಸೂಚಿಸಿದರು ಎಂದಿದ್ದಾರೆ.

ಆಸ್ಪತ್ರೆಯಲ್ಲಿ ಇಸಿಜಿ ಮಾಡಿಸಿದಾಗ ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಈ ರೀತಿ ಆಗಿದೆ. ಯಾರು ಆತಂಕಪಡುವ ಅಗತ್ಯವಿಲ್ಲ. ನಾನು ಇಂದು ಎಂದಿನಂತೆ ವಿಧಾನಸಭೆ ಅಧಿವೇಶನದಲ್ಲಿ ಪಾಲ್ಗೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ CJP ಸಜ್ಜು; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ