ಬಿ.ವೈ. ವಿಜಯೇಂದ್ರ 
ರಾಜ್ಯ

ದೀನ್ ದಯಾಳ್ ಉಪಾಧ್ಯಾಯ ಸಿದ್ಧಾಂತ ಕುರಿತ ಸಮ್ಮೇಳನ ರದ್ದು: ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ!

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಡಾ ಶ್ಯಾಮ ಪ್ರಸಾದ್ ಮುಖರ್ಜಿ ರಿಸರ್ಚ್ ಫೌಂಡೇಷನ್ ವತಿಯಿಂದ ಏಕಾತ್ಮ ಮಾನವ ದರ್ಶನ -- ಭಾರತ್ಸ್ ವರ್ಲ್ಡ್ ವ್ಯೂ, ಅಂತರಾಷ್ಟ್ರೀಯ ಶೈಕ್ಷಣಿಕ ಸಮ್ಮೇಳನವನ್ನು ಆಯೋಜಿಸಲಾಗಿತ್ತು.

ಬೆಂಗಳೂರು: ಮೈಸೂರಿನ ಕೆಎಸ್‌ಒಯು ಆವರಣದಲ್ಲಿ ಆಯೋಜಿಸಲಾಗಿದ್ದ ಹಿಂದುತ್ವ ಸಿದ್ಧಾಂತವಾದಿ ದೀನದಯಾಳ್ ಉಪಾಧ್ಯಾಯ ಅವರ ಸಿದ್ಧಾಂತ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನ ರದ್ದುಗೊಳಿಸುವ ನಿರ್ಧಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕಿಡಿಕಾರಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ "ದ್ವೇಷ ರಾಜಕಾರಣ" ಮಾಡುತ್ತಿದ್ದು, ರಾಜಕೀಯ ಹಸ್ತಕ್ಷೇಪ" ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ. ಕಾರ್ಯಕ್ರಮಕ್ಕೆ ಅವಕಾಶ ನೀಡುವಂತೆ ಉನ್ನತ ಶಿಕ್ಷಣ ಸಚಿವ ಎಂ ಸಿ ಸುಧಾಕರ್ ಅವರನ್ನು ಒತ್ತಾಯಿಸಿದ್ದಾರೆ.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಡಾ ಶ್ಯಾಮ ಪ್ರಸಾದ್ ಮುಖರ್ಜಿ ರಿಸರ್ಚ್ ಫೌಂಡೇಷನ್ ವತಿಯಿಂದ ಏಕಾತ್ಮ ಮಾನವ ದರ್ಶನ -- ಭಾರತ್ಸ್ ವರ್ಲ್ಡ್ ವ್ಯೂ, ಅಂತರಾಷ್ಟ್ರೀಯ ಶೈಕ್ಷಣಿಕ ಸಮ್ಮೇಳನವನ್ನು ಆಯೋಜಿಸಲಾಗಿತ್ತು.

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಕಾರ್ಯಕ್ರಮಕ್ಕೆ ಹಾಜರಾಗಬೇಕಿತ್ತು, ಆದರೆ ರಾಜ್ಯ ಸರ್ಕಾರ ಇದ್ದಕ್ಕಿದ್ದಂತೆ ಕಾರ್ಯಕ್ರಮವನ್ನು ರದ್ದುಗೊಳಿಸಲು ಆದೇಶಿಸಿದ್ದು, ಕುಲಪತಿಗೆ ನೋಟಿಸ್ ನೀಡಿದೆ ಎಂದು ವಿಜಯೇಂದ್ರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಇದು ದ್ವೇಷ ರಾಜಕಾರಣವಲ್ಲದೆ ಬೇರೇನೂ ಅಲ್ಲ. ವಿಶ್ವವಿದ್ಯಾನಿಲಯದ ಕಾರ್ಯಕ್ರಮಕ್ಕೂ ಅಡ್ಡಿಪಡಿಸುತ್ತಿದ್ದಾರೆ. ಬೆಳಗಾವಿ ವಿಧಾನಮಂಡಲದ ಅಧಿವೇಶನದಲ್ಲಿ ಈ ಸರ್ಕಾರ ದ್ವೇಷದ ಭಾಷಣದ ವಿರುದ್ಧ ಮಸೂದೆಯನ್ನು ತಂದಿದೆ. ಆದರೆ ರಾಜ್ಯ ಸರ್ಕಾರದ ವಿರುದ್ಧ ದ್ವೇಷಕ್ಕಾಗಿ ಕ್ರಮ ತೆಗೆದುಕೊಳ್ಳಬೇಕು. ಶಿಕ್ಷಣ ಕ್ಷೇತ್ರದಲ್ಲೂ ಇಂತಹ ರಾಜಕೀಯ ಹಸ್ತಕ್ಷೇಪ ಸರ್ಕಾರಕ್ಕೆ ಒಳ್ಳೆಯದಲ್ಲ . ತಪ್ಪನ್ನು ಸರಿಪಡಿಸಿಕೊಂಡು ಕಾರ್ಯಕ್ರಮಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಸಚಿವರನ್ನು ಅವರು ಒತ್ತಾಯಿಸಿದರು.

ಮೂರು ದಿನಗಳ ಸಮ್ಮೇಳನವನ್ನು ಉನ್ನತ ಶಿಕ್ಷಣ ಇಲಾಖೆ ಮಂಗಳವಾರ ರದ್ದುಗೊಳಿಸಿದೆ. ಇದಕ್ಕೂ ಮುನ್ನಾ ವಿಶ್ವವಿದ್ಯಾಲಯದಲ್ಲಿ ಕಾರ್ಯಕ್ರಮ ನಡೆಸಲು ಅನುಮತಿ ನೀಡಿದ್ದಕ್ಕಾಗಿ ಕೆಎಸ್‌ಒಯು ಕುಲಪತಿ ಶರಣಪ್ಪ ವಿ ಹಲಸೆ ಅವರಿಗೆ ಶೋಕಾಸ್ ನೋಟಿಸ್ ನೀಡಲಾಗಿತ್ತು.

ಕಾರ್ಯಕ್ರಮವನ್ನು ರದ್ದುಪಡಿಸಲು ಸರ್ಕಾರದ ನಿರ್ಧಾರವನ್ನು ಮಂಗಳವಾರ ಸಚಿವ ಸುಧಾಕರ್ ಸಮರ್ಥಿಸಿಕೊಂಡಿದ್ದರು., ಸಾರ್ವಜನಿಕ ವಿಶ್ವವಿದ್ಯಾಲಯಗಳು ಅರಾಜಕೀಯವಾಗಿರಬೇಕು ಮತ್ತು ಸೈದ್ಧಾಂತಿಕ ಪ್ರಭಾವದಿಂದ ಮುಕ್ತವಾಗಿರಬೇಕು ಎಂದು ಹೇಳಿದರು. ವಿಶ್ವವಿದ್ಯಾನಿಲಯ ಆಯೋಜಕರ ಜತೆಗಿನ ಒಡನಾಟದ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ‘ನಮ್ಮ ವಿಶ್ವವಿದ್ಯಾಲಯ ಅವರ ಜತೆ ಕೈಜೋಡಿಸಿರುವುದು ಆಘಾತಕಾರಿ, ಸ್ವತಃ ಉಪಕುಲಪತಿಗಳೇ ಸ್ವಾಗತ ಸಮಿತಿ ಅಧ್ಯಕ್ಷರಾಗಿದ್ದಾರೆ ಎಂದು ಹೇಳಿದರು.

ಆಯೋಜಕರು ಈ ಹಿಂದೆ ನೀಡಿದ ಹೇಳಿಕೆ ಪ್ರಕಾರ, ಮಾರ್ಚ್ 25 ರಿಂದ ಮಾರ್ಚ್ 27 ರವರೆಗೆ ಮೈಸೂರಿನ KSOU ನ ಘಟಿಕೋತ್ಸವ ಸಭಾಂಗಣದಲ್ಲಿ ಏಕಾತ್ಮ ಮಾನವ ದರ್ಶನ" ಅಂತಾರಾಷ್ಟ್ರೀಯ ಶೈಕ್ಷಣಿಕ ಸಮ್ಮೇಳನವನ್ನು ಡಾ.ಶ್ಯಾಮ ಪ್ರಸಾದ್ ಮುಖರ್ಜಿ ಸಂಶೋಧನಾ ಪ್ರತಿಷ್ಠಾನದ ಸಹಯೋಗದೊಂದಿಗೆ ಆಯೋಜಿಸಲಾಗಿದೆ.

ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ "ಏಕಾತ್ಮ ಮಾನವ ದರ್ಶನ" ಕುರಿತ ಐತಿಹಾಸಿಕ ಉಪನ್ಯಾಸಗಳ 60 ವರ್ಷಗಳ ಸ್ಮರಣಾರ್ಥ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸಭೆಯಲ್ಲಿ ಪ್ರತಿಭಟನೆ, ಗದ್ದಲ, ಕಲಾಪಕ್ಕೆ ಅಡ್ಡಿ!

'ಸ್ವಲ್ಪ ತಾಳ್ಮೆಯಿಂದ ಕಾಯಿರಿ' ಪಾಕಿಸ್ತಾನ, ಬಾಂಗ್ಲಾದೇಶ, ಅಪ್ಘಾನಿಸ್ತಾನ ಮತ್ತೆ ಭಾರತಕ್ಕೆ ಸೇರಿಕೊಳ್ಳುವ ದಿನ ಬರುತ್ತದೆ- ಬಾಬಾ ರಾಮದೇವ್!

ಆಪ್ ಕಿ ಅದಾಲತ್‌ನಲ್ಲಿ 'ಗಡ್ಡದ ಹಿಂದಿನ ಕಥೆ ಬಿಚ್ಚಿಟ್ಟ ಸೂಪರ್ ಸ್ಟಾರ್ ಯಶ್! Video

BJYM: Tejasvi Surya ಸ್ಥಾನಕ್ಕೆ ನೂತನ ನೇಮಕ; ಯಾರು ಈ ಡಾ. ಹೇಮಾಂಗ್ ಜೋಶಿ?