ಈಶ್ವರ್ ಖಂಡ್ರೆ ಸಾಂದರ್ಭಿಕ ಚಿತ್ರ 
ರಾಜ್ಯ

ನೀರಾನೆ ದಾಳಿಯಿಂದ ಪಶುವೈದ್ಯೆ ಸಾವು: ಘಟನೆ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ, SOP ರೂಪಿಸಲು ಸೂಚನೆ

ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣವೇನು ಎಂಬುದರ ಕುರಿತು ವಿವರವಾದ ತನಿಖೆಯನ್ನು ಕೈಗೊಳ್ಳಲು ಸೂಚನೆಗಳನ್ನು ನೀಡಲಾಗಿದೆ ಎಂದು ಹೇಳಿದರು.

ಬೆಂಗಳೂರು: ನೀರಾನೆ ದಾಳಿಯಿಂದ ಪಶುವೈದ್ಯೆ ಸಾವನ್ನಪ್ಪಿದ ಘಟನೆ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ಪಶುವೈದ್ಯರ ಸುರಕ್ಷಿತ ಕಾರ್ಯನಿರ್ವಹಣೆಗೆ ಮಾನದಂಡ ಕಾರ್ಯವಿಧಾನ (SOP)ಗಳನ್ನು ರೂಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನಿಧನರಾದ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಅವರ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಚಿವ ಈಶ್ವರ್ ಖಂಡ್ರೆಯವರು ಪ್ರತಿಕ್ರಿಯೆ ನೀಡಿದರು.

ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣವೇನು ಎಂಬುದರ ಕುರಿತು ವಿವರವಾದ ತನಿಖೆಯನ್ನು ಕೈಗೊಳ್ಳಲು ಸೂಚನೆಗಳನ್ನು ನೀಡಲಾಗಿದೆ ಎಂದು ಹೇಳಿದರು.

ಸಿಬ್ಬಂದಿ ಮತ್ತು ಪಶುವೈದ್ಯರು ಕರ್ತವ್ಯದಲ್ಲಿರುವಾಗ ಅವರ ಸುರಕ್ಷತೆ ಅತ್ಯಂತ ಮುಖ್ಯವಾಗಿರುತ್ತದೆ. ಅವರ ಕಾಳಜಿಗಳನ್ನು ಅರ್ಥಮಾಡಿಕೊಳ್ಳಲು ಪಶುವೈದ್ಯರನ್ನು ಸಂಪರ್ಕಿಸಲು ಅರಣ್ಯ ಮತ್ತು ಮೃಗಾಲಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ ಎಂದು ತಿಳಿಸಿದರು.

ಸಮೀಕ್ಷಾ ರೆಡ್ಡಿ ಅವರ ಕುಟುಂಬವು ಸ್ಮಾರಕ ನಿರ್ಮಿಸುವಂತೆ ಒತ್ತಾಯಿಸಿದ್ದು, ಕೆಲವರು ಆನೆಗೆ ಅವರ ಹೆಸರಿಡಬೇಕೆಂದು ಸೂಚಿಸಿದ್ದಾರೆ. ಈ ವಿಷಯವನ್ನು ಅಧಿಕಾರಿಗಳು ಮತ್ತು ಸರ್ಕಾರದೊಂದಿಗೆ ಚರ್ಚಿಸಿ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಈ ನಡುವೆ ಪಶುವೈದ್ಯರ ಸುರಕ್ಷಿತ ಕಾರ್ಯನಿರ್ವಹಣೆಗೆ ಮಾನದಂಡ ಕಾರ್ಯವಿಧಾನ (SOP)ಗಳನ್ನು ರೂಪಿಸುವಂತೆ ಅಧಿಕಾರಿಗಳಿಗೆ ಈಶ್ವರ್ ಖಂಡ್ರೆಯವರು ಸೂಚನೆ ನೀಡಿದ್ದಾರೆ.

ಮಾನದಂಡ ಕಾರ್ಯವಿಧಾನದಲ್ಲಿ ಪಶುವೈದ್ಯರು ವನ್ಯಜೀವಿಗಳಿಗೆ ಚಿಕಿತ್ಸೆ ನೀಡುವಾಗ ಅನುಸರಿಸಬೇಕಾದ ಕ್ರಮಗಳು, ಅವರ ವೈಯಕ್ತಿಕ ಸುರಕ್ಷತೆ ಹಾಗೂ ಪ್ರಾಣಿಗಳ ಭದ್ರತೆ ಕುರಿತ ಅಂಶಗಳು ಒಳಗೊಂಡಿರಬೇಕು ಎಂದೂ ಸೂಚನೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ ಜೊತೆ ಒಪ್ಪಂದಕ್ಕೆ ಇರಾನ್‌ ಕಾತರ, ಶೀಘ್ರದಲ್ಲೇ ಯುದ್ಧ ಅಂತ್ಯ: ತೈಲ ಬೆಲೆ ಭಾರೀ ಕುಸಿತ; ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ನಿಜಕ್ಕೂ ನಮ್ಮದು F…Good Team: ಲೈವ್​ನಲ್ಲೇ 'ಅಶ್ಲೀಲ ಪದ' ಬಳಸಿದ ರಿಷಭ್ ಪಂತ್, ವ್ಯಾಪಕ ಟೀಕೆ, Video!

ಇಟಲಿಯಲ್ಲಿ ಪ್ರಧಾನಿ ಮೋದಿ: “ವೆಲ್‌ಕಮ್ ಟು ರೋಮ್ ಮೈ ಫ್ರೆಂಡ್” ಎಂದು ಆತ್ಮೀಯ ಸ್ವಾಗತ ಕೋರಿದ ಜಾರ್ಜಿಯಾ ಮೆಲೋನಿ..!

Operation Epic Fury: ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕಾಗೆ ಮಹಾಘಾತಕ: F-35 ಸೇರಿ 42 ಯುದ್ಧ ವಿಮಾನ, ಡ್ರೋನ್‌ಗಳಿಗೆ ಹಾನಿ..!

ಪ್ರಧಾನಿ ಮೋದಿಯನ್ನು 'ಹಾವಾಡಿಗ'ನಂತೆ ಬಿಂಬಿಸಿ ವಿಕೃತಿ: ಭಾರತವನ್ನು ಹೀಯಾಳಿಸಿದ ನಾರ್ವೆ ಪತ್ರಿಕೆ; ನೆಟ್ಟಿಗರು ತೀವ್ರ ಕಿಡಿ

SCROLL FOR NEXT