ನರೇಂದ್ರ ಮೋದಿ ಮತ್ತು ಕಿಶೋರ್ ಕುಮಾರ್ 
ರಾಜ್ಯ

ನಿಮಗೆ ನಾಚಿಕೆಯಾಗಲ್ವಾ? ದ್ವೇಷದ ವಿಷಕಾರಿದ ನಂತರವೂ ಒಟ್ಟಿಗೆ, ಒಂದು ರಾಷ್ಟ್ರದಂತೆ ಇರಲು ಸಾಧ್ಯವೇ; ಪ್ರಧಾನಿ ವಿರುದ್ಧ ಕಿಶೋರ್ ಆಕ್ರೋಶ

ಹಿಂದೂ ಮುಸ್ಲಿಂ ಕ್ರಿಶ್ಚಿಯನ್ನರೆಂದು ಇನ್ನೆಂದೂ ಒಂದಾಗಲು ಸಾಧ್ಯವೇ ಇಲ್ಲದಂತೆ ಒಡೆದ ನಂತರ?? ನಿಮಗೆ ನಾಚಿಕೆಯೆಂಬುದೇನಾದರೂ ಇದೆಯೇ? ಇಲ್ಲ! ನಾವು ಭಾರತದ ಜನ ತಯಾರಿಲ್ಲ ಎಂದು ಪ್ರಧಾನಿ ಮೋದಿ ವಿರುದ್ಧ ನಟ ಕಿಶೋರ್ ಕುಮಾರ್ ಹರಿಹಾಯ್ದಿದ್ದಾರೆ.

ಬೆಂಗಳೂರು: ಸಮಾಜದ ಆಗು-ಹೋಗುಗಳ ಬಗ್ಗೆ ಮೊದಲಿಂದ ಧ್ವನಿ ಎತ್ತುತ್ತಾ, ಕಳೆದ ಹತ್ತು-ಹನ್ನೆರಡು ವರ್ಷಗಳಿಂದ ಬಲಪಂಥೀಯವರ ಕೆಂಗಣ್ಣಿಗೆ ಗುರಿಯಾಗುತ್ತಿರುವ ಕಿಶೋರ್ ಸದ್ಯ ಮತ್ತೊಮ್ಮೆ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಮ್ಮೆ ಕೆಂಡ ಕಾರಿದ್ದಾರೆ.

ಈ ಸಂಬಂಧ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಒಟ್ಟಿಗೆ, ಒಂದು ರಾಷ್ಟ್ರದಂತೆ!? ನಮ್ಮನ್ನು ದ್ವೇಷದ ವಿಷ ಕಾರಿ, ಹಿಂದೂ ಮುಸ್ಲಿಂ ಕ್ರಿಶ್ಚಿಯನ್ನರೆಂದು ಇನ್ನೆಂದೂ ಒಂದಾಗಲು ಸಾಧ್ಯವೇ ಇಲ್ಲದಂತೆ ಒಡೆದ ನಂತರ?? ನಿಮಗೆ ನಾಚಿಕೆಯೆಂಬುದೇನಾದರೂ ಇದೆಯೇ? ಇಲ್ಲ! ನಾವು ಭಾರತದ ಜನ ತಯಾರಿಲ್ಲ ಎಂದು ಪ್ರಧಾನಿ ಮೋದಿ ವಿರುದ್ಧ ನಟ ಕಿಶೋರ್ ಕುಮಾರ್ ಹರಿಹಾಯ್ದಿದ್ದಾರೆ.

ನಿಮ್ಮ ರಾಜಿ, ಶರಣಾಗತಿಯಿಂದಾಗಿ ನಾವು ಇನ್ನೂ ಎಷ್ಟು ಸವಾಲುಗಳನ್ನು ಎದುರಿಸಬೇಕು??? ನಿಮ್ಮ ತಪ್ಪುಗಳು, ರಹಸ್ಯಗಳನ್ನು ಮುಚ್ಚಿಡಲು ನಾವಿನ್ನೆಷ್ಟು ಬೆಲೆ ತೆರಬೇಕು???

ಸಾಮೂಹಿಕ ಕೊಲೆಗಾರರು ಮತ್ತು ಶಿಶುಕಾಮಿಗಳನ್ನು ಅಪ್ಪಿಕೊಂಡು “ನಾವು ಯುದ್ಧ ಅಪರಾಧಿಗಳ ಜೊತೆ ನಿಲ್ಲುತ್ತೇವೆ ಎಂದು ಘೋಷಿಸುವ ಮೊದಲು ನೀವು ನಮ್ಮನ್ನು ಕೇಳಿದ್ದಿರಾ ಎಂದು ಪ್ರಶ್ನಿಸಿದ್ದಾರೆ.

ರಫೇಲ್‌ನಿಂದ ಎಪ್ಸ್ಟೀನ್‌ವರೆಗೆ, ನೋಟು ರದ್ದತಿಯಿಂದ ಕೊರೊನಾ ಲಾಕ್‌ಡೌನ್‌ವರೆಗೆ, ಕೃಷಿ ಕಾನೂನುಗಳಿಂದ ಅಗ್ನಿವೀರ್‌ವರೆಗೆ, ಮಣಿಪುರದಿಂದ ಕಾಶ್ಮೀರ, ಲಡಾಖ್‌ ನವರೆಗೆ ನಿಮ್ಮ ಯಾವುದೇ ಉನ್ಮಾದ ಭರಿತ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ನಮ್ಮನ್ನೋ ಅಥವಾ ವಿರೋಧ ಪಕ್ಷದ ನಮ್ಮ ಪ್ರತಿನಿಧಿಗಳನ್ನೋ ಅಥವಾ ನಮ್ಮ ತೆರಿಗೆಯಿಂದ ನಾವು ಸಂಬಳ ಕೊಟ್ಟಿಟ್ಟಿರುವ ನಿಮ್ಮ ಸ್ವಂತ ಅಧಿಕಾರಿಗಳನ್ನೋ ಕೇಳಿದ್ದಿರಾ ಎಂದು ತಪರಾಕಿ ಹಾಕಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ ಸಜ್ಜಾದ CJP; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ

ತಮಿಳುನಾಡಿಗೆ ಕಾವೇರಿ, ಕನ್ನಡಿಗರಿಗೆ ಮತ್ತೆ ಚೊಂಬು: ನಿತ್ಯ 9,000 ಕ್ಯೂಸೆಕ್ ನೀರು ಬಿಡಲು CWRC ಸೂಚನೆ!

ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ: JDS ಶಾಸಕ ಹೆಚ್ ಡಿ ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು

ಸೀತಾಪುರದಲ್ಲಿ ವಿಚಿತ್ರ ಪ್ರಕರಣ: ಹಗಲು ಪ್ರೇಮಿ, ರಾತ್ರಿ ಗಂಡ ಬೇಕಂತೆ! ಇಬ್ಬರ ಜತೆ ಸಂಸಾರ ನಡೆಸಲು ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳೆ! Video

ಬೀದಿ ನಾಯಿಯ ಭೀಕರ ದಾಳಿ: ಮನೆಯಿಂದ ಹೊರಗೆ ಆಟವಾಡುತ್ತಿದ್ದ 5 ವರ್ಷದ ಬಾಲಕಿ ಗಂಭೀರ! Video