ಬೆಂಗಳೂರು: ನೆಲಮಂಗಲದ ಪ್ರತಿಷ್ಠಿತ ಕಾಲೇಜಿನಲ್ಲಿ ತರಗತಿಯಲ್ಲೇ ಮೆಡಿಕಲ್ ವಿದ್ಯಾರ್ಥಿನಿಗೆ ಪ್ರೇಮ ನಿವೇದನೆ ಮಾಡಿದ್ದ ಪ್ರಾಧ್ಯಾಪಕ ಅಬ್ದುಲ್ ನನ್ನು ನೆಲಮಂಗಲ ಗ್ರಾಮಾಂತರ ಠಾಣೆ ಪೋಲೀಸರು ಬಂಧಿಸಿದ್ದಾರೆ.
ತರಗತಿ ನಡೆಯುತ್ತಿದ್ದಾಗಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರೊಫೆಸರ್ ಅಬ್ದುಲ್ ಪ್ರಪೋಸ್ ಮಾಡಿದ್ದನು. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿನಿ ತರಗತಿಯಲ್ಲೇ ಪ್ರಶ್ನೆ ಮಾಡಿದ್ದು ನಂತರ ಪ್ರೊಫೆಸರ್‌ಗೆ ಚಪ್ಪಲಿಯಿಂದ ಥಳಿಸಿದ್ದಳು. ನೆಲಮಂಗಲ ತಾಲೂಕಿನ ಟಿ. ಬೇಗೂರಿನ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಈ ಘಟನೆ ನಡೆದಿತ್ತು.
ಪ್ರಾಧ್ಯಾಪಕ ಮಾಡಿದ ವೇಳೆ ವಿದ್ಯಾರ್ಥಿನಿ ಅಲ್ಲೇ ವಿರೋಧಿಸಿದ್ದಳು. ಈ ಹಿಂದೆ ನೀನು ನನಗೆ ಪ್ರಪೋಸ್ ಮಾಡಿಲ್ವಾ ಎಂದು ಪ್ರಾಧ್ಯಾಪಕ ವಿದ್ಯಾರ್ಥಿನಿಯನ್ನು ಕೇಳಿದ್ದು, ಸಾಕ್ಷಿಗೆ ಸಿಸಿಟಿವಿ ದೃಶ್ಯವಿದೆ ಎಂದಿದ್ದನು. ಕೋಪಗೊಂಡ ವಿದ್ಯಾರ್ಥಿನಿ ಸಿಸಿಟಿವಿ ವಿಡಿಯೋ ತೋರಿಸು ಎಂದಿದ್ದಾಳೆ. ಈ ಬಗ್ಗೆ ನಾಳೆ ಮಾತನಾಡುತ್ತೇನೆ ಎಂದು ಹೇಳಿ ಪ್ರಾಧ್ಯಾಪಕ ಕ್ಲಾಸ್ನಿಂದ ಹೊರಗೆ ಹೋಗಿದ್ದನು. ಈ ಘಟನೆಯಿಂದ ತೀವ್ರವಾಗಿ ಆಕ್ರೋಶಗೊಂಡು ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದರು.