ಸಿಎಂ ಸಿದ್ದರಾಮಯ್ಯ  TNIE Photo | Nagaraj Gadekal
ರಾಜ್ಯ

ರಾಜ್ಯ ಸರ್ಕಾರ ನಿಯಮದ ಮಿತಿಯೊಳಗೆ ಸಾಲ ಮಾಡಿದೆ: ಸಿಎಂ ಸಿದ್ದರಾಮಯ್ಯ ಸಮರ್ಥನೆ

ವಿಧಾನ ಪರಿಷತ್‌ನಲ್ಲಿ ಬಜೆಟ್‌ ಕುರಿತ ಚರ್ಚೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ಯಾವುದೇ ರಾಜ್ಯ ಅಥವಾ ದೇಶವಾಗಲಿ ಸಾಲ ಮಾಡದೆ ಇರಲು ಸಾಧ್ಯವಿಲ್ಲ, ಜನ ಕಲ್ಯಾಣ ಹಾಗೂ ಅಭಿವೃದ್ಧಿಗಾಗಿ ಸಾಲ ಮಾಡಬೇಕು ಎಂದರು.

ಬೆಂಗಳೂರು: ರಾಜ್ಯ ಸರ್ಕಾರ ಸಾಲವನ್ನು ನಿಯಮದ ಮಿತಿಯೊಳಗೆ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಸಮರ್ಥಿಸಿಕೊಂಡಿದ್ದಾರೆ.

ವಿಧಾನ ಪರಿಷತ್‌ನಲ್ಲಿ ಬಜೆಟ್‌ ಕುರಿತ ಚರ್ಚೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ಯಾವುದೇ ರಾಜ್ಯ ಅಥವಾ ದೇಶವಾಗಲಿ ಸಾಲ ಮಾಡದೆ ಇರಲು ಸಾಧ್ಯವಿಲ್ಲ, ಜನ ಕಲ್ಯಾಣ ಹಾಗೂ ಅಭಿವೃದ್ಧಿಗಾಗಿ ಸಾಲ ಮಾಡಬೇಕು ಎಂದರು.

ಸರ್ಕಾರ ಸಾಲವನ್ನು ನಿಯಮದ ಮಿತಿಯೊಳಗೆ ಮಾಡಿದೆ. ನಮ್ಮ ಸರ್ಕಾರ ಸಾಲದ ಮೇಲೆ ನಡೆಯುತ್ತಿದೆ ಎನ್ನುವುದು ಸತ್ಯಕ್ಕೆ ದೂರವಾದ ಮಾತು ಎಂದು ತಿಳಿಸಿದರು.

ನಾನು ಎಂದೂ ಸಾಲ ಮಾಡಬಾರದು ಎಂದು ಹೇಳಿಲ್ಲ. ಹೇಳುವುದೂ ಇಲ್ಲ. ಆದರೆ ಮಾಡುವ ಸಾಲ ಜನರ ಕಲ್ಯಾಣಕ್ಕಾಗಿ ಮತ್ತು ನಾಡಿನ ಅಭಿವೃದ್ಧಿಗಾಗಿ ಬಳಕೆಯಾಗಿದೆಯೇ ಎಂಬುದು ಮುಖ್ಯ ಎಂದು ಹೇಳಿದರು.

2008 ರಿಂದ 2013 ರವರೆಗೆ ಇದ್ದ ಬಿಜೆಪಿಯೂ ಸಾಲ ಮಾಡಿದೆ. ಆದರೆ, ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿಲ್ಲ, ಅಭಿವೃದ್ಧಿಯೂ ಶೂನ್ಯ. ಹಾಗಿದ್ರೂ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಸಾಲ ಮಾಡಿದ್ದು ಏಕೆ? ಎಂದು ಪ್ರಶ್ನಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Bangladesh ಸರ್ಕಾರಿ ಕಚೇರಿಯಲ್ಲಿ ಭಾರತೀಯ ಅಧಿಕಾರಿ ನಿಗೂಢ ಸಾವು, ತನಿಖೆ ಆರಂಭ

Operation Sindoorಗೆ ಪಾಕಿಸ್ತಾನ ತಿರುಗೇಟು; ಭಾರತದ 2 ವಾಯುನೆಲೆ ಧ್ವಂಸ ಅಂತೆ..! ಆದ್ರೆ ಅದು ಅಸ್ತಿತ್ವದಲ್ಲೇ ಇಲ್ಲ..!

IPL Valuation Chart: 1.63 ಲಕ್ಷ ಕೋಟಿಗೇರಿದ ಐಪಿಎಲ್ ಮೌಲ್ಯ, CSK ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ KKR, 'ಕಿಂಗ್' ವಿರಾಟ್ ಕೊಹ್ಲಿ ಗಳಿಸಿದ್ದೆಷ್ಟು ಗೊತ್ತಾ?

'ಅನಕ್ಷರಸ್ಥ' ಪ್ರಧಾನಿಯಿಂದಾಗಿ ಪೆಟ್ರೋಲ್-ಡೀಸೆಲ್ ಮತ್ತು ಅನಿಲ ಬೆಲೆಗಳು ಹೆಚ್ಚಳವಾಗಿದೆ: ಸಿಎಂ ಸಿದ್ದರಾಮಯ್ಯ

ನಾಯಕತ್ವ ತ್ಯಜಿಸಿದ ಬಳಿಕ ಸಂಕಷ್ಟದಲ್ಲಿದ್ದೆ.. ನೆರವಿಗೆ ಬಂದಿದ್ದು 'ಜಾಮಿ' ಮಾತ್ರ: Virat Kohli

SCROLL FOR NEXT