ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಡಬಲ್ ಮರ್ಡರ್; ಅಪ್ರಾಪ್ತನಿಂದ ಇಬ್ಬರ ಹತ್ಯೆ!

ಕೊಲೆಯಾದವರನ್ನು ಯಮುನಾ(36) ಮತ್ತು ಸುದೀಪ್(34) ಎಂದು ಗುರುತಿಸಲಾಗಿದ್ದು, ಸ್ಥಳಕ್ಕೆ ಡಿಸಿಪಿ ನಾಗೇಶ್ ಮತ್ತು ಎಫ್‌ಎಸ್‌ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ಜೋಡಿ ಕೊಲೆ ನಡೆದಿದ್ದು, ಅಪ್ರಾಪ್ತ ಬಾಲಕನೇ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಗುರುವಾರ ನಡೆದಿದೆ.

ಬೆಂಗಳೂರಿನ ಪೀಣ್ಯದ ಎಚ್​ಎಂಟಿ ಲೇಔಟ್‌ನ​ ಮನೆಯೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕ, ತನ್ನ ತಾಯಿಯ ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ, ಅಕ್ಕ ಮತ್ತು ತಮ್ಮನನ್ನು ಹತ್ಯೆ ಮಾಡಿದ್ದಾನೆ.

ಕೊಲೆಯಾದವರನ್ನು ಯಮುನಾ(36) ಮತ್ತು ಸುದೀಪ್(34) ಎಂದು ಗುರುತಿಸಲಾಗಿದ್ದು, ಸ್ಥಳಕ್ಕೆ ಡಿಸಿಪಿ ನಾಗೇಶ್ ಮತ್ತು ಎಫ್‌ಎಸ್‌ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಆರೋಪಿ ಬಾಲಕನ ತಾಯಿ ಛಾಯಾ ಹಾಗೂ ಕೊಲೆಯಾದ ಯುಮುನಾ ಗಂಡನ ಮಧ್ಯೆ ಅಕ್ರಮ ಸಂಬಂಧ ಇತ್ತು ಎನ್ನಲಾಗಿದ್ದು, ಇದನ್ನು ಪ್ರಶ್ನಿಸಲು ಛಾಯಾ ಮನೆಗೆ ಬಂದಿದ್ದ ಯಮುನಾ ಮತ್ತು ತಮ್ಮ ಸುದೀಪ್ ಜಗಳವಾಡುತ್ತಿದ್ದರು. ಈ ಜಗಳದ ಮಧ್ಯೆ ಎಂಟ್ರಿಯಾದ ಛಾಯಾ ಪುತ್ರ ಚಾಕುವಿನಿಂದ ಇರಿದು ಇಬ್ಬರನ್ನು ಹತ್ಯೆ ಮಾಡಿದ್ದಾನೆ.

ಅಪ್ರಾಪ್ತ ಬಾಲಕ ಇಬ್ಬರಿಗೂ ಹತ್ತಾರು ಬಾರಿ ಚಾಕುವಿನಿಂದ ಇರಿದಿದ್ದಾನೆ. ನಂತರ ಕೋಣೆ ಒಳಗೆ ಹೋಗಿ ಬಾಗಿಲು ಹಾಕಿಕೊಂಡಿದ್ದು, ಪೊಲೀಸರು ಬಂದರೂ ಬಾಗಿಲು ತೆಗೆದಿರಲಿಲ್ಲ. ನಂತರ ತಂದೆ ಬಂದು ಹೇಳಿದಾಗ ಬಾಗಿಲು ತೆಗೆದು ಅಪ್ರಾಪ್ತ ಹೊರಬಂದಿದ್ದಾನೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸೆಶೆಲ್ಸ್‌ನಿಂದ ಪ್ರಧಾನಿ ಮೋದಿಗೆ 'ಗಾರ್ಡಿಯನ್ ಆಫ್ ದಿ ಬ್ಲೂ ಹೊರೈಜನ್' ಗೌರವ: ಹಿಂದೂ ಮಹಾಸಾಗರ ಅವಕಾಶಗಳ ಆಗರ

ರಾಮ ಮಂದಿರ ದೇಣಿಗೆ ದುರುಪಯೋಗ ಕೇಸ್: ಆರೋಪಿಗಳ ಪರ ವಾದಿಸಲು ವಕೀಲರ ಹಿಂದೇಟು; ಬುಲ್ಡೋಜರ್ ಕ್ರಮಕ್ಕೆ ಆಗ್ರಹ!

India vs Ireland 2nd t20: ಭಾರತಕ್ಕೆ ಸೋಲು; 1 ರನ್ ನಿಂದ ಗೆದ್ದ ಐರ್ಲೆಂಡ್ ಗೆ ಸರಣಿ!

ಲೋಹದ ಹಕ್ಕಿಗಳ ಪ್ರತ್ಯೇಕ ಅಪಘಾತ: ಸೌದಿ 14 ಹಾಗೂ ಫ್ರಾನ್ಸ್‌ನಲ್ಲಿ 11 ಸೇರಿ 25 ಮಂದಿ ದುರ್ಮರಣ

ಟೆಸ್ಟ್ ಪಂದ್ಯದ ಮಧ್ಯೆ ಬೆನ್ ಸ್ಟೋಕ್ಸ್ ಹಠಾತ್ ನಿವೃತ್ತಿ ಘೋಷಿಸಿ, ಕ್ರಿಕೆಟ್‌ಗೆ ವಿದಾಯ!