ಸಾಂದರ್ಭಿಕ ಚಿತ್ರ PTI
ರಾಜ್ಯ

ಉಗ್ರರೊಂದಿಗೆ ನಂಟು ಆರೋಪ: ಬಳ್ಳಾರಿ ಯುವಕ ಸೇರಿ ದೇಶಾದ್ಯಂತ 12 ಮಂದಿ ಬಂಧನ

ಖಚಿತ ಮಾಹಿತಿ ಆಧರಿಸಿ ಬಳ್ಳಾರಿಗೆ ಆಗಮಿಸಿದ್ದ ಆಂಧ್ರ ಪ್ರದೇಶ ಪೊಲೀಸರು, ಕೌಲ್ ಬಜಾರ್ ಪೊಲೀಸ್ ಠಾಣೆಯ ಸಿಬ್ಬಂದಿ ನೆರವಿನೊಂದಿಗೆ ಅಬ್ದುಲ್ ಸಲಾಮ್ ನನ್ನು ಬಂಧಿಸಿದ್ದಾರೆ.

ಬಳ್ಳಾರಿ: ಭಯೋತ್ಪಾದಕರೊಂದಿಗೆ ನಂಟು ಹೊಂದಿದ ಆರೋಪದ ಮೇಲೆ ಬಳ್ಳಾರಿ ಮೂಲದ ಓರ್ವ ಯುವಕ ಸೇರಿದಂತೆ ದೇಶದ ವಿವಿಧ ರಾಜ್ಯಗಳ 12 ಮಂದಿಯನ್ನು ಆಂಧ್ರ ಪ್ರದೇಶದ ವಿಜಯವಾಡ ಪೊಲೀಸರು ಬಂಧಿಸಿದ್ದಾರೆ.

ರಾಜ್ಯದಲ್ಲಿ ಬಂಧಿತ ಆರೋಪಿಯನ್ನು ಬಳ್ಳಾರಿ ನಗರದ ಅಬ್ದುಲ್ ಸಲಾಮ್(36) ಎಂದು ಗುರುತಿಸಲಾಗಿದೆ. ಕರ್ನಾಟಕ ಸೇರಿದಂತೆ ಆಂಧ್ರ, ಬಿಹಾರ, ಮಹಾರಾಷ್ಟ್ರ ಒಳಗೊಂಡು ವಿವಿಧ ರಾಜ್ಯಗಳಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

ಖಚಿತ ಮಾಹಿತಿ ಆಧರಿಸಿ ಬಳ್ಳಾರಿಗೆ ಆಗಮಿಸಿದ್ದ ಆಂಧ್ರ ಪ್ರದೇಶ ಪೊಲೀಸರು, ಕೌಲ್ ಬಜಾರ್ ಪೊಲೀಸ್ ಠಾಣೆಯ ಸಿಬ್ಬಂದಿ ನೆರವಿನೊಂದಿಗೆ ಅಬ್ದುಲ್ ಸಲಾಮ್ ನನ್ನು ಬಂಧಿಸಿದ್ದಾರೆ.

ಪಂಚನಾಮೆ ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ಆಂಧ್ರ ಪ್ರದೇಶಕ್ಕೆ ಕರೆದೊಯ್ದಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಉಗ್ರವಾದ ಹರಡುವುದು ಮತ್ತು ಭಯೋತ್ಪದನಾ ಸಂಘಟನೆಗಳ ನಂಟು ಹೊಂದಿರುವವರ ಬಗ್ಗೆ ಮಾಹಿತಿ ಕಲೆ ಹಾಕಿದ್ದ ಪೊಲೀಸರು, ಈ ಬಗ್ಗೆ ಮಾರ್ಚ್ 23ರಂದು ವಿಜಯವಾಡ ಟೌನ್ ಠಾಣೆಯಲ್ಲಿ FIR ದಾಖಲಿಸಿ ತನಿಖೆ ಆರಂಭಿಸಿದ್ದರು.

ಸರ್ಚ್ ವಾರೆಂಟ್ ಪಡೆದು ಕಾರ್ಯಾಚರಣೆಗಿಳಿದಿದ್ದ ಪೊಲೀಸರು, ವಿಜಯವಾಡದ ವಿಂಚ್‌ಪೇಟ್​​ನಲ್ಲಿ ಪ್ರಮುಖ ಅರೋಪಿ ಮೊಹಮ್ಮದ್ ರೆಹಮತುಲ್ಲಾ ಷರೀಫ್ (23) ಎಂಬಾತನನ್ನು ಬಂಧಿಸಿದ್ದರು. ಈ ವೇಳೆ ಸಾಮಾಜಿಕ ಮಾಧ್ಯಮಗಳ ಮೂಲಕ ಸಿದ್ದಾಂತ ಮತ್ತು ಮೂಲಭೂತವಾದಿ ಐಎಸ್‌ಐಎಸ್ ಸಂಘಟನೆಗಳ ವಿಚಾರಧಾರೆ ಪ್ರಚಾರ ನಿರತರ ಬಗ್ಗೆ ಆತ ನೀಡಿದ್ದ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿ 12 ಮಂದಿಯನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾರಿಗೆ ನೌಕರರಿಗೆ ಗುಡ್ ನ್ಯೂಸ್: ಕೊನೆಗೂ ವೇತನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ; ಜುಲೈ 1 ರಿಂದ ಜಾರಿ

ಒಂದೇ ಒಂದು ದಾಳಿ ನಡೆದರೂ ಯುರೇನಿಯಂ ದಾಸ್ತಾನು ಶಸ್ತ್ರಾಸ್ತ್ರ ದರ್ಜೆಗೆ ಸಂವರ್ಧನೆ- ಅಮೆರಿಕಾಗೆ ಇರಾನ್ ಕಠಿಣ ಎಚ್ಚರಿಕೆ!

Gruha Lakshmi | ದಕ್ಷಿಣ ಕನ್ನಡದಲ್ಲಿ ಮೃತ ಫಲಾನುಭವಿಗಳ ಖಾತೆಗೆ 22 ಕೋಟಿ ರೂ ಗೃಹಲಕ್ಷ್ಮಿ ಹಣ ಜಮೆ!

'ಪಾಕ್ ಜೊತೆ ಮಾತುಕತೆ ವಿಂಡೋ ತೆರೆಯಬೇಕು, ನಾವು ಒಂದೇ ರಾಷ್ಟ್ರವಾಗಿದ್ದೇವೆ': RSS ನಾಯಕ ಹೊಸಬಾಳೆ ಸ್ಫೋಟಕ ಹೇಳಿಕೆ

ಘೋರ ದುರಂತ: ಮಲಪ್ಪುರಂ ವ್ಯೂಪಾಯಿಂಟ್‌ನಲ್ಲಿ ಸಿಡಿಲು ಬಡಿದು ನಾಲ್ವರು ವಿದ್ಯಾರ್ಥಿಗಳು ಸಾವು

SCROLL FOR NEXT